25.7 C
Bangalore
Sunday, December 15, 2019

ಅರ್ಥವಿಲ್ಲದಂತಾಗಿವೆ ಜಯಂತ್ಯುತ್ಸವ

Latest News

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಮೊಬೈಲ್ ಹಾಳು ಮಾಡಿದ್ದಕ್ಕೆ ಸೋದರ ಮಾವನೇ ಬಾಲಕಿಗೆ ಚಾಕು ಇರಿದು ಹತ್ಯೆ

ಶಿವಮೊಗ್ಗ: ಮೊಬೈಲ್ ವಿಚಾರದಲ್ಲಿ ಭಾನುವಾರ ಸೋದರ ಮಾವನೇ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಾಡಿಕೊಪ್ಪದಲ್ಲಿ ನಡೆದಿದೆ.5 ವರ್ಷದ ರಂಜನಿ ಹತ್ಯೆಯಾದ...

ಮಸ್ಕಿ ಕ್ಷೇತ್ರಕ್ಕೆ ಇನ್ನೆರಡು ತಿಂಗಳಲ್ಲಿ ಉಪಚುನಾವಣೆ ಸಾಧ್ಯತೆ – ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್

ಮಸ್ಕಿ: ಬಿಜೆಪಿ ಸೇರಿದ ಮೇಲೆ ಸಿಎಂ ಬಿ.ಎಸ್.ಯಡಿಯೂರಪ್ಪ ಕ್ಷೇತ್ರಕ್ಕೆ 100 ಕೋಟಿ ರೂ. ಅನುದಾನ ಕೊಡಲು ಒಪ್ಪಿದ್ದಾರೆ. ಈಗಾಗಲೇ 50 ಕೋಟಿ ರೂ....

ಜಗಳೂರು: ಸಾಧಕರ ಜಯಂತ್ಯುತ್ಸವಗಳು ಅರ್ಥ ಕಳೆದುಕೊಳ್ಳುತ್ತಿದ್ದು, ಡಿಜೆಗಳ ಅಬ್ಬರದಲ್ಲಿ ಆದರ್ಶಗಳು ಮಾಯವಾಗಿವೆ ಎಂದು ಚಿತ್ರದುರ್ಗ ಯಾದವ ಮಠದ ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದರು.

ತಾಲೂಕು ಗೊಲ್ಲರ ಸಂಘದ ಪಟ್ಟಣದ ವೀರಶೈವ ಕಲ್ಯಾಣ ಮಂಟಪದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶ್ರೀಕೃಷ್ಣ ಜಯಂತ್ಯುತ್ಸವ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಯುವಶಕ್ತಿ ಎಲ್ಲಿಯವರೆಗೂ ಆಧ್ಯಾತ್ಮ, ಭಗವಂತನ ಧ್ಯಾನ, ವಚನ ಸಾಹಿತ್ಯದ ಕಡೆ ಮುಖ ಮಾಡುವುದಿಲ್ಲವೋ ಅಲ್ಲಿಯವರೆಗೂ ದೇವರ ಮತ್ತು ಮನುಷ್ಯರ ನಡುವೆ ಕಂದಕ ಇರಲಿದೆ ಎಂದರು.

ಶ್ರೀಕೃಷ್ಣನ ನಾಮ ಶಕ್ತಿ ನಡೆಯುವ ಜಾಗದಲ್ಲಿ ಡಿಜೆ ಹಾಗೂ ಸಿನಿಮಾ ಹಾಡು ಹಾಕಿಕೊಂಡು ಕುಣಿಯುತ್ತಾ ಸಾಗಿದರೆ ದೇವರಿಗೆ ಭಕ್ತಿ ಮುಟ್ಟುತ್ತದೆಯೇ ಎಂಬ ಚಿಂತನೆ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಯಾದವ ಸಮುದಾಯ ಭವನಕ್ಕೆ ಸಂಸದರ ಅನುದಾನದಲ್ಲಿ 10 ಲಕ್ಷ ರೂ. ನೀಡಲಾಗುವುದು ಎಂದು ಭರವಸೆ ನೀಡಿದ ಸಂಸದ ಜಿ.ಎಂ.ಸಿದ್ದೇಶ್ವರ್, ಸಮುದಾಯದ ಶ್ರೀಮಂತರು ಮಠಕ್ಕೆ ದೇಣಿಗೆ ನೀಡಿ ಶಿಕ್ಷಣ ಸಂಸ್ಥೆ ಪ್ರಗತಿಗೆ ಶ್ರಮಿಸಬೇಕು. ಸಿರಿಗೆರೆ ಮಠದಂತೆ ಯಾದವ ಮಠ ಬೆಳೆದು ಸಮಾಜವನ್ನು ಮುಖ್ಯವಾಹಿನಿಗೆ ತರಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಯಾದವ ಸಮಾಜದ ಅಧ್ಯಕ್ಷ ಜಿ.ಸಿ.ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಅಧ್ಯಕ್ಷೆ ಶೈಲಜಾ ಬಸವರಾಜ್, ಸಾಮಾಜಿಕ ನ್ಯಾಯಸ್ಥಾಯಿ ಸಮಿತಿ ಅಧ್ಯಕ್ಷೆ ಸವಿತಾ ಕಲ್ಲೇಶಪ್ಪ, ಸದಸ್ಯರಾದ ಶಾಂತಕುಮಾರಿ, ಎಸ್.ಕೆ.ಮಂಜುನಾಥ್, ಉಮಾ ವೆಂಕಟೇಶ್, ತಹಸೀಲ್ದಾರ್ ಹುಲ್ಲಮನಿ ತಿಮ್ಮಣ್ಣ, ತಾಪಂ ಇಒ ಮಲ್ಲನಾಯ್ಕ, ಕೆಪಿಸಿಸಿ ಎಸ್ಟಿ ಘಟಕ ರಾಜ್ಯಾಧ್ಯಕ್ಷ ಕೆ.ಪಿ.ಪಾಲಯ್ಯ, ಯಾದವ ಸಮಾಜದ ಮಾಜಿ ಅಧ್ಯಕ್ಷ ತಿಪ್ಪೇಸ್ವಾಮಿಗೌಡ, ಜೆಡಿಎಸ್ ರಾಜ್ಯ ಕಾರ್ಯದರ್ಶಿ ಕಲ್ಲೇರುದ್ರೇಶ್ ಉಪಸ್ಥಿತರಿದ್ದರು.

ಲೋಕಸಭೆಯಲ್ಲಿ ಪಾಸ್ ಆಗಬೇಕು: ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕೂಗು ಯಾದವ ಸಮುದಾಯದಲ್ಲಿದು, ಆ ಧ್ವನಿಗೆ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿ, ಸಚಿವ ಸಂಪುಟ ಸಭೆಯ ಶಿಫಾರಸ್ಸನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿದ್ದಾರೆ. ಲೋಕಸಭೆಯಲ್ಲಿ ಅದನ್ನು ಪಾಸ್ ಮಾಡಬೇಕಿದೆ ಎಂದು ಮಾಜಿ ಶಾಸಕ ಎಚ್.ಪಿ.ರಾಜೇಶ್ ತಿಳಿಸಿದರು.

ಗೊಲ್ಲರನ್ನು ಎಸ್ಟಿಗೆ ಸೇರಿಸಲು ಬೆಂಬಲ: ಯಾದವ ಸಮಾಜದ ಅಭಿವೃದ್ಧಿಗೆ ಸದಾ ಸಿದ್ಧ. ಎಸ್ಟಿ ಸೇರ್ಪಡೆ ನಮ್ಮ ಸಂಪೂರ್ಣ ಬೆಂಬಲವಿದೆ. ಲೋಕಸಭೆ ಸದಸ್ಯ ಸಿದ್ದೇಶ್ವರ ಜತೆಗೂಡಿ ದೆಹಲಿಗೆ ಹೋಗಲು ಸಿದ್ಧ. ನನೆಗುದಿಗೆ ಬಿದ್ದಿರುವ ಸಮುದಾಯ ಭವನ ನಿರ್ಮಾಣ ಪೂರ್ಣಗೊಳಿಸುತ್ತೇನೆ ಎಂದು ಶಾಸಕ ಎಸ್.ವಿ.ರಾಮಚಂದ್ರ ಹೇಳಿದರು.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...