More

    ಜಗಳೂರಲ್ಲಿ ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಒತ್ತು

    ಜಗಳೂರು: ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಪ್ರತಿಮೆ ನಿರ್ಮಿಸಲು ರಚಿಸಿದ್ದ ಸಮಿತಿ ನಿರ್ಲಕ್ಷೃದಿಂದ ಎರಡು ವರ್ಷವಾದರೂ ಕಾರ್ಯರೂಪಕ್ಕೆ ಬಾರದೇ ಇರುವುದರಿಂದ ಹೊಸ ಸಮಿತಿ ರಚಿಸಿ ಡಿ.6ರಂದು ಪುತ್ಥಳಿ ನಿರ್ಮಿಸಲಾಗುವುದು ಎಂದು ದಲಿತ ಹಿರಿಯ ಮುಖಂಡ ಜಿ.ಎಚ್.ಮಹೇಶ್ ಹೇಳಿದರು.

    ಜಗಳೂರಲ್ಲಿ ಅಂಬೇಡ್ಕರ್ ಪುತ್ಥಳಿ ನಿರ್ಮಾಣಕ್ಕೆ ಒತ್ತು

    ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶಕ್ಕೆ ಸಂವಿಧಾನ ಬರೆದುಕೊಟ್ಟ ಅಂಬೇಡ್ಕರ್ ಪ್ರತಿಮೆ ಸ್ಥಾಪನೆಗೆ ಮೀನಾಮೇಷ ಎಣಿಸುತ್ತಿರುವುದು ತಲೆ ತಗ್ಗಿಸುವಂತಾಗಿದೆ. ನೂರಾರು ವರ್ಷಗಳಿಂದಲೂ ಈ ಹೋರಾಟ ನಡೆಯುತ್ತಲೇ ಬಂದಿದೆ. ಹಿರಿಯರ ನೇತೃತ್ವದಲ್ಲಿ ರಚಿಸಿದ ಸಮಿತಿ ನಿಷ್ಕ್ರಿಯವಾಗಿದೆ. ಆದ್ದರಿಂದ ಯುವ ಸಮೂಹ ಜತೆಗೂಡಿ ಪುತ್ಥಳಿ ನಿರ್ಮಾಣಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

    ವಕೀಲ ಹನುಮಂತಪ್ಪ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಎಲ್ಲಾ ಸಮುದಾಯದ ನಾಯಕರಾಗಿದ್ದಾರೆ. ಕೆಲವರು ಸ್ವಾರ್ಥಕ್ಕಾಗಿ ದುರುಪಯೋಗಪಡಿಸಿ ಕೊಳ್ಳುತ್ತಿರುವುದು ವಿಪರ್ಯಾಸವಾಗಿದೆ ಎಂದರು.

    ಈಗಾಗಲೇ ಪಪಂ ವತಿಯಿಂದ ಪುತ್ಥಳಿ ನಿರ್ಮಾಣಕ್ಕೆ ಸುಮಾರು 3 ಲಕ್ಷ ರೂ. ಮೀಸಲಿಟ್ಟಿದೆ. ಮುಂದಿನ ದಿನಗಳಲ್ಲಿ ದೇಣಿಗೆ ಸಂಗ್ರಹಿಸಿ ದೊಡ್ಡದಾಗಿ ನಿರ್ಮಿಸಲಾಗುವುದು ಎಂದರು.

    ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಸಿದ್ದಪ್ಪ ಪೂಜಾರಿ, ಶಿವಪ್ಪ, ತಿಪ್ಪೇಸ್ವಾಮಿ, ಕುಬೇಂದ್ರಪ್ಪ, ಮಲ್ಲೇಶ್, ರಂಗಪ್ಪ, ಹನುಮಂತಪ್ಪ, ಚಂದ್ರಪ್ಪ ಸೇರಿ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts