More

    ಜನರ ನಂಬಿಕೆ ಕಳೆದುಕೊಂಡ ಬಿಜೆಪಿ: ಜಗಳೂರಿನಲ್ಲಿ ಎಂ.ಸಿ.ವೇಣುಗೋಪಾಲ್ ಆರೋಪ

    ಜಗಳೂರು: ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ನರೇಂದ್ರ ಮೋದಿ ಅವರು ಎಂಟು ವರ್ಷಗಳ ಆಡಳಿತದಲ್ಲಿ ದೇಶದ ಜನರ ನಂಬಿಕೆಯನ್ನು ಹುಸಿಗೊಳಿಸಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಎಂ.ಸಿ.ವೇಣುಗೋಪಾಲ್ ಆರೋಪಿಸಿದರು.

    ಇಲ್ಲಿನ ವಾಲ್ಮೀಕಿ ಭವನದಲ್ಲಿ ಮಂಗಳವಾರ ಜಗಳೂರು ವಿಧಾನಸಭೆ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್‌ನಿಂದ ಆಯೋಜಿಸಿದ್ದ ನವ ಸಂಕಲ್ಪ ಚಿಂತನಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

    ಆರು ದಶಕಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಹಲವು ಜನಪರ ಯೋಜನೆಗಳನ್ನು ಕೊಟ್ಟಿದೆ. ಆದರೆ ಬಿಜೆಪಿ ಸರ್ಕಾರ ಜನ ವಿರೋಧಿ ಚಟುವಟಿಕೆ, ಕೋಮು ಗಲಭೆ ಸೃಷ್ಟಿಸಿ ಅಶಾಂತಿ ವಾತಾವರಣ ಸೃಷ್ಟಿಸಿದೆ. ಮೋದಿ ಅವರ ಬಗ್ಗೆ ಯುವ ಜನತೆ ಇಟ್ಟಿದ್ದ ವಿಶ್ವಾಸ ಕಳೆದುಕೊಂಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಜನಾದೇಶ ಸಿಗಲಿದೆ ಎಂದರು.

    ಜಿಲ್ಲಾಧ್ಯಕ್ಷ ಎಚ್.ಬಿ ಮಂಜಪ್ಪ ಮಾತನಾಡಿ, ಜಗಳೂರು ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಸೋತಿರಬಹುದು. ಆದರೆ ಮುಖಂಡರು, ಕಾರ್ಯಕರ್ತರಲ್ಲಿ ಉತ್ಸಾಹ, ಹುಮ್ಮಸ್ಸು ಕಡಿಮೆಯಾಗಿಲ್ಲ ಎಂದರು.

    ಕೆಪಿಸಿಸಿ ಕಾರ್ಯದರ್ಶಿ ಅಸಗೋಡು ಜಯಸಿಂಹ, ಎಐಸಿಸಿ ಜಿಲ್ಲಾ ಉಸ್ತುವಾರಿ, ಮಾಜಿ ಶಾಸಕ ಶಿವಮೂರ್ತಿ ನಾಯ್ಕ ಮಾತನಾಡಿದರು. ಮಾಜಿ ಶಾಸಕ ಎಚ್.ಪಿ.ರಾಜೇಶ್, ಮುಖಂಡ ಚಿಕ್ಕಮ್ಮನಹಟ್ಟಿ ದೇವೇಂದ್ರಪ್ಪ, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಡಿ. ಬಸವರಾಜ್, ಕೆಪಿಸಿಸಿ ಎಸ್‌ಟಿ ಘಟಕದ ಅಧ್ಯಕ್ಷ ಕೆ.ಪಿ.ಪಾಲಯ್ಯ, ಕೆಪಿಸಿಸಿ ತಾಲೂಕು ಉಸ್ತುವಾರಿ ಕಲ್ಲೇಶ್‌ರಾಜ್ ಪಟೇಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್, ಜಿಲ್ಲಾ ಕಾರ್ಯದರ್ಶಿ ಪಲ್ಲಾಗಟ್ಟೆ ಶೇಖರಪ್ಪ, ತಿಪ್ಪೇಸ್ವಾಮಿ ಗೌಡ, ಪುಷ್ಪಾ, ಮಹೇಶ್ವರಪ್ಪ, ಎಲ್.ಬೈರೇಶ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts