More

    ಜಗಳೂರಲ್ಲಿ 37ಸಾವಿರ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳು

    ಜಗಳೂರು: ದೇಶದಲ್ಲಿ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ಸಿಗಬೇಕಾದರೆ ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಸಾಧ್ಯ ಎಂದು ಎಂದು ಶಾಸಕ ಚಿಕ್ಕಮ್ಮನಹಟ್ಟಿ ಬಿ.ದೇವೇಂದ್ರಪ್ಪ ಹೇಳಿದರು.

    ಪಟ್ಟಣದ ಗುರುಭವನ, ಅಂಬೇಡ್ಕರ್ ಭವನ ಮತ್ತು ಪಪಂ ಕಚೇರಿಯಲ್ಲಿ ಬುಧವಾರ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

    ಮೈಸೂರಿನಲ್ಲಿ ಚಾಲನೆ ನೀಡಲಾದ ಗೃಹಲಕ್ಷಿ ್ಮ ಯೋಜನೆ ವೀಕ್ಷಣೆಗೆ 29 ಗ್ರಾಪಂ ಮತ್ತು ಪಟ್ಟಣ ಪಂಚಾಯಿತಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ತಾಲೂಕಿನಲ್ಲಿ 37 ಸಾವಿರ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಹೆಸರು ನೋಂದಾಯಿಸಿಕೊಂಡಿದ್ದು, ತಿಂಗಳಿಗೆ ಏಳು ಕೋಟಿ ರೂ. ಹಣ ಮಹಿಳೆಯರ ಖಾತೆಗಳಿಗೆ ಜಮೆಯಾಗುತ್ತದೆ ಎಂದರು.

    ತಹಸೀಲ್ದಾರ್ ಅರುಣ್ ಕಾರಗಿ, ಕೆಪಿಸಿಸಿ ಎಸ್‌ಟಿ ಘಟಕದ ಅಧ್ಯಕ್ಷ ಕೆ.ಪಿ. ಪಾಲಯ್ಯ, ಕೆಪಿಸಿಸಿ ಸದಸ್ಯ ಕಲ್ಲೇಶ್‌ರಾಜ್ ಪಟೇಲ್, ಪಪಂ ಮುಖ್ಯಾಧಿಕಾರಿ ಲೋಕ್ಯಾನಾಯ್ಕಾ, ಪಪಂ ಸದಸ್ಯರಾದ ಬಿ.ಕೆ. ರಮೇಶ್ ರೆಡ್ಡಿ, ಲುಕ್ಮಾನ್ ವುಲ್ಲಾ ಖಾನ್ ಮಾತನಾಡಿದರು.

    ಹಿರಿಯ ನಾಗರಿಕರ ಸಂಘದ ಅಧ್ಯಕ್ಷ ಸಿ. ತಿಪ್ಪೇಸ್ವಾಮಿ, ಪಾಪಲಿಂಗಪ್ಪ, ದೇವರಾಜ್, ಆರೋಗ್ಯ ನಿರಿಕ್ಷಕ ಕಿಫಾಯತ್ ಅಹಮದ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts