ಲದ್ದಿ ಹುಳು ಹತೋಟಿಗೆ ಮೋಹಕ ಬಲೆ ಸೂಕ್ತ

ಬೇಸಾಯ ತಜ್ಞ ಡಾ.ಬಿ.ಒ.ಮಲ್ಲಿಕಾರ್ಜುನ ಸಲಹೆ l ಗುತ್ತಿದುರ್ಗ ಗ್ರಾಮದಲ್ಲಿ ಪ್ರಾತ್ಯಕ್ಷಿಕೆ

ಜಗಳೂರು: ತಾಲೂಕಿನಲ್ಲಿ ಬಹು ವಿಸ್ತೀರ್ಣದ ಬೆಳೆಯಾಗಿರುವ ಮೆಕ್ಕೆಜೋಳ ಬೆಳೆಗೆ ಬಾಧಿಸುವ ಲದ್ದಿ ಹುಳು ನಿರ್ವಹಣೆಗೆ ಮೋಹಕ ಬಲೆ ಬಳಸಬೇಕು ಎಂದು ಕೃಷಿ ವಿಜ್ಞಾನ ಕೇಂದ್ರದ ಬೇಸಾಯ ತಜ್ಞ ಡಾ.ಬಿ.ಒ.ಮಲ್ಲಿಕಾರ್ಜುನ ಸಲಹೆ ನೀಡಿದರು.

ತಾಲೂಕಿನ ಗುತ್ತಿದುರ್ಗ ಗ್ರಾಮದಲ್ಲಿ ಮಂಗಳವಾರ ಮೆಕ್ಕೆಜೋಳದಲ್ಲಿ ಅಂತರ ಬೆಳೆಯಾಗಿ ತೊಗರಿಯ ಮುಂಚೂಣಿ ಪ್ರಾತ್ಯಕ್ಷಿಕೆ ಅಂಗವಾಗಿ ಲದ್ದಿ ಹುಳುವಿನ ನಿರ್ವಹಣಾ ಪದ್ಧತಿಗಳ ಬಗ್ಗೆ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.

ದಾವಣಗೆರೆ ಜಿಲ್ಲೆಯ ಪ್ರಮುಖ ಬೆಳೆಯಾದ ಮೆಕ್ಕೆಜೋಳದಲ್ಲಿ ಹವಾಮಾನ ವೈಪರೀತ್ಯದಿಂದ ಲದ್ದಿ ಹುಳುವಿನ ಬಾಧೆ ದಿನೇ ದಿನೆ ಹೆಚ್ಚುತ್ತಿದೆ. ಈ ಕೀಟದ ನಿರ್ವಣೆಗಾಗಿ ಸಮಗ್ರ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ಲದ್ದಿ ಹುಳುವಿನ ನಿರ್ವಹಣೆಯನ್ನು ಬಿತ್ತನೆಯಾದ 12 ದಿನಗಳ ನಂತರ ಕೈಗೊಳ್ಳಬೇಕು. ಸಮಗ್ರ ಕೀಟ ನಿರ್ವಹಣಾ ಪದ್ಧತಿ ಅಡಿ ಉತ್ತಮವಾದ ಮಾಗಿ ಉಳುಮೆ, ಬೀಜೋಪಚಾರ ಹಾಗೂ ಮೋಹಕ ಬಲೆಗಳ ಅಳವಡಿಸಿಕೊಳ್ಳಬೇಕು. ಲದ್ದಿ ಹುಳುವಿನ ನಿರ್ವಹಣೆಗಾಗಿ ಒಂದು ಎಕರೆ ಪ್ರದೇಶಕ್ಕೆ ಮೂರರಿಂದ ಐದು ಮೋಹಕ ಬಲೆಗಳನ್ನು ಅಳವಡಿಸಬೇಕು. ಗಂಡು ಪತಂಗಗಳು ಮೋಹಕ ಬಲೆಗಳಿಗೆ ಆಕರ್ಷಿತಗೊಂಡು ಬಲೆಯೊಳಗೆ ಬೀಳುವುದರಿಂದ ಸಂತಾನೋತ್ಪತ್ತಿ ಕಡಿಮೆಯಾಗಿ ಕೀಟದ ಬಾಧೆ ಕಡಿಮೆಯಾಗುತ್ತದೆ ಎಂದರು.

ಕೇಂದ್ರದ ಮುಖ್ಯಸ್ಥ ಡಾ.ಟಿ.ಎನ್. ದೇವರಾಜ ಮಾತನಾಡಿ, ಏಕ ಬೆಳೆ ಪದ್ಧತಿಯಿಂದ ಕೀಟ ಮತ್ತು ರೋಗಗಳ ಬಾಧೆ ಹೆಚ್ಚಾಗುತ್ತಿದೆ. ಇದನ್ನು ನಿಯಂತ್ರಿಸಲು ಬೆಳೆ ಪರಿವರ್ತನೆ ಕೂಡ ಮಾಡಬೇಕಾಗಿದೆ ಎಂದರು.

ರೈತರಿಗೆ ಮೋಹಕ ಬಲೆಗಳನ್ನು ಕೊಡಲಾಯಿತು. ಬಿದರಿಕೆರೆ ತರಳಬಾಳು ಅಮೃತ ರೈತ ಉತ್ಪಾದಕ ಕಂಪನಿಯ ನಿರ್ದೇಶಕ ಬಸವನಗೌಡ, ಪ್ರಗತಿಪರ ರೈತರು ಭಾಗವಹಿಸಿದ್ದರು.

Share This Article

ಪುರುಷರೇ ಎಡಗೈ, ಮಹಿಳೆಯರ ಬಲ ಅಂಗೈ ತುರಿಕೆಯಾದ್ರೆ ಕಾದಿದೆ ಈ ಗಂಡಾಂತರ!

ಬೆಂಗಳೂರು: ಅಂಗೈ ತುರಿಕೆಯಾಗಿದೆ ಎಂದರೆ ಹಣ ಬರುತ್ತದೆ ಎಂದು ಹಲವರು ಹೇಳುತ್ತಾರೆ. ಕೆಲವರು ಹಣ ಕಳೆದುಕೊಳ್ಳುತ್ತಿದ್ದಾರೆ…

ಈ ದಿನಾಂಕದಂದು ಜನಿಸಿದವರು ಜೀವನದಲ್ಲಿ ರಾಜರಂತೆ ಬದುಕುತ್ತಾರೆ… ನೀವೂ ಇದೇ ದಿನ ಹುಟ್ಟಿದ್ದೀರಾ ನೋಡಿ!

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…

ಈ ಮೂರು ಕೆಲಸಗಳನ್ನು ಮಾಡಿದ ನಂತರ ಹಲ್ಲುಜ್ಜಬೇಡಿ! ಅನಾರೋಗ್ಯಕ್ಕೊಳಗಾಗುವುದು ಖಂಡಿತ..

ಬೆಂಗಳೂರು: ಬಾಯಿಯನ್ನು ಸುರಕ್ಷಿತವಾಗಿಟ್ಟುಕೊಳ್ಳುವುದು ಆರೋಗ್ಯಕ್ಕೆ ಬಹಳ ಮುಖ್ಯ. ಸೂಕ್ಷ್ಮಜೀವಿಗಳು ಬಾಯಿಯ ಮೂಲಕ ಹೊಟ್ಟೆಯನ್ನು ಪ್ರವೇಶಿಸುತ್ತವೆ. ಇದು…