More

    ಕೆರೆ ಕಾಮಗಾರಿ ವಿಳಂಬ ಹಿನ್ನೆಲೆ ಅಧಿಕಾರಿಗಳ ಸಭೆ 19ಕ್ಕೆ

    ಜಗಳೂರು: 57 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ವಿಳಂಬಗೊಂಡ ಹಿನ್ನೆಲೆಯಲ್ಲಿ ಜು. 19 ರಂದು ಬೆಳಗ್ಗೆ 11ಕ್ಕೆ ತರಳಬಾಳು ಕೇಂದ್ರದಲ್ಲಿ ಡಾ.ಶಿವಮೂರ್ತಿ ಶಿವಾಚಾರ್ಯ ಶ್ರೀಗಳ ನೇತೃತ್ವದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ತಿಳಿಸಿದರು.

    ಇಲ್ಲಿನ ಜನಸಂಪರ್ಕ ಕಚೇರಿಯಲ್ಲಿ ಶನಿವಾರ 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಕುರಿತು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

    ಬೆಂಗಳೂರಿನಲ್ಲಿ ಜು.13 ರಂದು ನಡೆದ ಸದನದಲ್ಲಿ ಸಹ 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಕುರಿತು ಪ್ರಸ್ತಾಪ ಮಾಡಲಾಯಿತು ಎಂದರು.

    ಈ ಯೋಜನೆ ವಿಳಂಬಕ್ಕೆ ರಾಜಕಾರಣಿಗಳು, ಗುತ್ತಿಗೆದಾರರು ಹಾಗೂ ಇಲಾಖೆ ಅಧಿಕಾರಿಗಳು ಕಾರಣ. ಆದಷ್ಟು ಬೇಗ ಕೆರೆಗಳಿಗೆ ನೀರು ತುಂಬಿಸಲಾಗುವುದು. ಮೊದಲ ಹಂತದಲ್ಲಿ 11 ಕೆರೆಗಳಿಗೆ ನೀರು ಬರಲಿದೆ. ಹಂತ ಹಂತವಾಗಿ ಎಲ್ಲ ಕೆರೆಗಳಿಗೂ ನೀರು ತುಂಬಿಸಲಾಗುವುದು ಎಂದರು.

    ತಾಲೂಕಿನ ಜನತೆಗೆ ಈ ಯೋಜನೆ ಮಹತ್ವದ್ದಾಗಿದೆ. ಪಕ್ಷ ಭೇದ ಮರೆತು ಈ ಸಭೆಯಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ್, ಮಾಜಿ ಶಾಸಕರಾದ ಎಸ್.ವಿ. ರಾಮಚಂದ್ರ, ಎಚ್.ಪಿ. ರಾಜೇಶ್ ಅವರನ್ನು ಆಹ್ವಾನಿಸಲಾಗಿದೆ. ನೀರಾವರಿ ಇಲಾಖೆ ಎಂಡಿ ಮಲ್ಲಿಕಾರ್ಜುನ ಗುಂಗೆ, ಜಿಲ್ಲೆಯ ಅಧಿಕಾರಿಗಳು, ಇಂಜಿನಿಯರ್‌ಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

    ಕೆಪಿಸಿಸಿ ಎಸ್ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ. ಪಾಲಯ್ಯ, ಕೆಪಿಸಿಸಿ ಸದಸ್ಯ ಕಲ್ಲೇಶ್ ರಾಜ್, ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಪಲ್ಲಾಗಟ್ಟೆ ಶೇಖರಪ್ಪ, ಪಟೇಲ್, ಪಪಂ ಸದಸ್ಯರಾದ ರಮೇಶ್‌ರೆಡ್ಡಿ, ರವಿಕುಮಾರ್, ಮಹಮದ್, ಮುಖಂಡರಾದ ಪ್ರಕಾಶ್ ರೆಡ್ಡಿ, ವೆಂಕಟೇಶ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts