More

  ದುಡಿಯುವ ಕೈಗಳಿಗೆ ಕೆಲಸ: ದಾವಣಗೆರೆ ಜಿಪಂ ಅಧ್ಯಕ್ಷೆ ಶಾಂತಕುಮಾರಿ ಹೇಳಿಕೆ

  ಜಗಳೂರು: ದುಡಿಯುವ ಕೈಗಳಿಗೆ ಕೆಲಸ ನೀಡುವ ಉದ್ದೇಶದಿಂದ ನರೇಗಾ ಯೋಜನೆಗೆ ಒತ್ತು ನೀಡಿರುವ ಸರ್ಕಾರ ದುಡಿಯೋಣ ಬಾ ಕಾರ್ಯಕ್ರಮ ಜಾರಿಗೊಳಿಸಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಾಂತಕುಮಾರಿ ಶಶಿಧರ್ ಹೇಳಿದರು.

  ಉದ್ಯೋಗ ಖಾತ್ರಿ ಯೋಜನೆಯಡಿ ತಾಲೂಕಿನ ಬಿದರಕೆರೆ ಗ್ರಾಪಂ ಆವರಣದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ, ತಾಪಂ ಸೋಮವಾರ ಹಮ್ಮಿಕೊಂಡಿದ್ದ ದುಡಿಯೋಣ ಬಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

  ತಾಲೂಕು ಮಳೆಯಾಶ್ರಿತ ಪ್ರದೇಶವಾಗಿದ್ದು, ಈ ಭಾಗದ ರೈತರು ಮೂರು ತಿಂಗಳು ಮಾತ್ರ ಕೃಷಿ ಚಟುವಟಿಕೆಯಲ್ಲಿ ತೊಡಗುತ್ತಾರೆ. ಉಳಿದ ಕಾಲ ಕೆಲಸವಿಲ್ಲದೆ ಖಾಲಿ ಕೈಯಲ್ಲಿ ಕೂರುವಂತಹ ಪರಿಸ್ಥಿತಿ ಇದೆ. ಆದ್ದರಿಂದ ನರೇಗಾ ಯೋಜನೆಯಡಿ ವರ್ಷದ ನೂರು ದಿನಗಳು ಕೆಲಸ ನೀಡಲಾಗುತ್ತಿದೆ ಎಂದರು.

  ಬದು ನಿರ್ಮಾಣದಿಂದ ಜಮೀನಿನ ಮಣ್ಣಿನ ಸವಕಳಿ ತಪ್ಪಿಸಬಹುದು. ಬರಗಾಲ ಪೀಡಿತ ಪ್ರದೇಶಗಳಿಗೆ ಕೃಷಿ ಹೊಂಡ ಅತ್ಯಂತ ಪ್ರಮುಖವಾಗಿದೆ. ಮಳೆಗಾಲದಲ್ಲಿ ಸಂಗ್ರಹವಾಗುವ ಮಳೆ ನೀರಿನಿಂದ ಅಂತರ್ಜಲ ವೃದ್ಧಿಯಾಗುತ್ತದೆ. ಕೊಳವೆಬಾವಿಗಳು ಮರುಪೂರಣವಾಗಲಿವೆ. ಹೀಗಾಗಿ ವರ್ಷವಿಡೀ ಕಡಿಮೆ ನೀರಿನಲ್ಲಿ ಬೆಳೆ ಬೆಳೆಯಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

  ಜಿಪಂ ಉಪ ಕಾರ್ಯದರ್ಶಿ ಆನಂದ್ ಮಾತನಾಡಿ, 70 ವರ್ಷಗಳಿಂದಲೂ ಬರಗಾಲ ಕಂಡಿರುವ ತಾಲೂಕಿನಲ್ಲಿ ಕಳೆದ ಬಾರಿ ಉತ್ತಮ ಮಳೆಯಾಗಿದೆ. ಅರಣ್ಯ ನಾಶ, ವಾಯುಮಾಲಿನ್ಯದಿಂದ ಪರಿಸರದ ಮೇಲೆ ಪರಿಣಾಮ ಬೀರಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ನರೇಗಾ ಯೋಜನೆಯಡಿ ಅರಣ್ಯೀಕರಣ, ಕೆರೆ ಹೂಳೆತ್ತಿ ಅಂತರ್ಜಲ ಹೆಚ್ಚಿಸಬಹುದು, ವೈಯಕ್ತಿಕ ಕಾಮಗಾರಿಗಳನ್ನು ಮಾಡಲು ಅವಕಾಶವಿರುತ್ತದೆ ಎಂದು ತಿಳಿಸಿದರು.

  See also  ಸುಪ್ತ ಪ್ರತಿಭೆ ಅನಾವರಣಕ್ಕೆ ಬೇಸಿಗೆ ಶಿಬಿರದ ನೆರವು

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts