21 C
Bengaluru
Wednesday, January 22, 2020

ಹನುಮಂತಾಪುರ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಜಗಳೂರು: ತಾಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದ ಬಸವೇಶ್ವರ ಪ್ರೌಢಶಾಲೆ ಆವರಣದಲ್ಲಿ ಮಂಗಳವಾರ ಹನುಮಂತಾಪುರ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ನಡೆಯಿತು.

ಬೆಳಗ್ಗೆ 11ಕ್ಕೆ ಕ್ರೀಡಾಕೂಟ ಉದ್ಘಾಟನೆ ನಿಗಧಿಯಾಗಿತ್ತು. ಜನಪ್ರತಿನಿಧಿಗಳು ಸಮಯಕ್ಕೆ ಬಾರದೇ ವೇದಿಕೆ ಕಾರ್ಯಕ್ರಮವನ್ನು ಮುಂದೂಡಿ, ಕ್ರೀಡಾಕೂಟ ನಡೆಸಲಾಯಿತು. ಇದರ ಮಧ್ಯೆ ಜೋರು ಮಳೆಯಿಂದಾಗಿ ಕ್ರೀಡಾ ಮೈದಾನ ಒದ್ದೆಯಾಗಿದ್ದರಿಂದ ಕ್ರೀಡೆಯನ್ನು ಕೆಲವು ನಿಮಿಷ ನಿಲ್ಲಿಸಲಾಯಿತು. ಮಧ್ಯಾಹ್ನ 1ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ಶುರುವಾಯಿತು. ಊಟದ ವಿರಾಮದ ನಂತರ ಕ್ರೀಡೆ ಮುಂದುವರಿಯಿತು.

ಭರಮಸಮುದ್ರ, ಜಗಳೂರು ಗೊಲ್ಲರಹಟ್ಟಿ, ಹನುಮಂತಾಪುರ, ಅಣಬೂರು, ದೊಡ್ಡಬೊಮ್ಮನಹಳ್ಳಿ, ಹಿರೇಮಲ್ಲನಹೊಳೆ, ತಮಲೇಹಳ್ಳಿ, ಮಲ್ಲಾಪುರ, ಕಮಂಡಲಗೊಂದಿ, ಕಾನನಕಟ್ಟೆ, ಶಾಲಾ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

ತಾಪಂ ಸದಸ್ಯ ತಿಮ್ಮಾಬೋವಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಕ್ರೀಡಾಕೂಟ ಆಯೋಜನೆಯಿಂದ ಮಕ್ಕಳಲ್ಲಿ ಉತ್ಸಾಹ ಬರುತ್ತದೆ. ಸ್ಪರ್ಧೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಅದರಲ್ಲಿ ಭಾಗವಹಿಸಿ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯಗಳನ್ನು ಹೊರ ತರಬೇಕು ಎಂದರು.

ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಅಜ್ಜಯ್ಯ ನಾಡಿಗೇರ್ ಮಾತನಾಡಿ, ಹಳ್ಳಿಗಾಡಿನಲ್ಲಿ ಕ್ರೀಡಾಕೂಟ ನಡೆಸುವುದು ಸವಾಲಿನ ಕೆಲಸವಾಗಿದೆ. ಸಮುದಾಯಗಳನ್ನು ಒಳಗೊಂಡು ನಡೆಸಬೇಕಾದ ಕಾರ್ಯದಲ್ಲಿ ಹಲವು ತೊಡಕುಗಳು ಸಹಜ. ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಪ್ರತಿಯೊಬ್ಬ ಪಾಲಕರು ಮತ್ತು ಕ್ರೀಡಾಸಕ್ತರು ಉತ್ತಮ ಕ್ರೀಡಾಕೂಟ ನಡೆಸಲು ಸಹಕಾರ ನೀಡಬೇಕು. ತೀರ್ಪುಗಾರರು ಸಹ ಯಾವುದೇ ವೈಯಕ್ತಿಕ ಹಿತಾಸಕ್ತಿಗಳನ್ನು ಇಟ್ಟುಕೊಳ್ಳದೇ ಉತ್ತಮ ಕ್ರೀಡಾಪಟುಗಳನ್ನು ಗುರುತಿಸಿ ಬೆಳೆಸುವ ಕೆಲಸವಾಗಬೇಕು ಎಂದರು.

ಬಸವೇಶ್ವರ ವಿದ್ಯಾಸಂಸ್ಥೆ ಕಾರ್ಯದರ್ಶಿ ತಿಪ್ಪೇಸ್ವಾಮಿ, ಗ್ರಾಪಂ ಉಪಾಧ್ಯಕ್ಷ ವೀಣಾ ವೀರೇಶ್, ಸದಸ್ಯರಾದ ಲೋಕೇಶ್, ಬಸವರಾಜ್, ತಿಪ್ಪೇಸ್ವಾಮಿ, ಬಸವಂತಮ್ಮ, ಬಾಲಮ್ಮ ಚಿತ್ತಪ್ಪ, ದುರುಗಮ್ಮ, ದೈಹಿಕ ಶಿಕ್ಷಣ ನಿರ್ದೇಶಕ ಶಿವಪ್ರಕಾಶ್, ಸಿಆರ್‌ಪಿ ಸತ್ಯನಾರಾಯಣ, ಮುಖ್ಯಶಿಕ್ಷಕರಾದ ಶಿವಶಂಕರ್, ದುರುಗಪ್ಪ ಸೇರಿ ಇತರರಿದ್ದರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...