ನಾನು ಮೋಸ ಹೋಗಿದ್ದೇನೆ.. ಈ ವಿಚಾರದಲ್ಲಿ ಹುಷಾರಾಗಿರಿ; "ಕಾಟೇರ"​ ವಿಲನ್ ಜಗಪತಿ ಬಾಬು ಎಚ್ಚರಿಕೆ

Jagapathi Babu
Published on

ಮುಂಬೈ: ಜಗಪತಿ ಬಾಬು ವಿಲನ್ ಮತ್ತು ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿ ಅವರಿಗೆ ಅವಕಾಶಗಳು ಬರುತ್ತಿವೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಅವರು ಇತ್ತೀಚಿಗೆ ಇಂಟ್ರೆಸ್ಟಿಂಗ್ ಕಾಮೆಂಟ್ಸ್ ಮಾಡಿದ್ದಾರೆ. ಮೋಸ ಹೋಗಿದ್ದೇನೆ ಎಂದು ಹೇಳುವ ವಿಡಿಯೋವನ್ನು ಸೋಶಿಯಲ್​​ ಮೀಡಿಯಾದಲ್ಲಿ ಹಾಕಿದ್ದಾರೆ.

ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ನಡೆಯುವ ವಂಚನೆಗಳ ಬಗ್ಗೆ ಜಾಗರೂಕರಾಗಿರಿ ಎಂದು ಜನಪ್ರಿಯ ನಟ ಜಗಪತಿ ಬಾಬು ಅಭಿಮಾನಿಗಳಿಗೆ ಸಲಹೆ ನೀಡಿದ್ದಾರೆ. ಅವರೇ ಬಲಿಯಾಗಿದ್ದಾರೆ ಎಂದು ದೂರಿದರು. ಇದನ್ನು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಪೋಸ್ಟ್ ಮಾಡಲಾಗಿದೆ.

''ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ವಂಚನೆಗಳು ನಡೆಯುತ್ತಿವೆ. ಇತ್ತೀಚೆಗೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಕೂಡ ಈ ಬಗ್ಗೆ ಎಚ್ಚರಿಕೆ ನೀಡಿದ್ದರು. ಇತ್ತೀಚೆಗೆ ರಿಯಲ್ ಎಸ್ಟೇಟ್ ಜಾಹೀರಾತಿನಲ್ಲಿ ನಟಿಸಿದ್ದೆ. ಆದರೆ ಅವರು ನನಗೆ ಮೋಸ ಮಾಡಿದರು. ಯಾರವರು? ನಿಜವಾಗಿ ಏನಾಯಿತು? ನಾನು ನಿಮಗೆ ಎಲ್ಲಾ ವಿವರಗಳನ್ನು ಶೀಘ್ರದಲ್ಲೇ ಹೇಳುತ್ತೇನೆ. ಭೂಮಿ ಖರೀದಿಸುವ ಮುನ್ನ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ನಿಯಮಗಳನ್ನು ತಿಳಿದುಕೊಳ್ಳಿ’ ಎಂದು ಜಗಪತಿ ಬಾಬು ಹೇಳಿದರು.

ಖಳನಟನಾಗಿ, ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿ ಸಾಲು ಸಾಲು ಅವಕಾಶಗಳನ್ನು ಪಡೆಯುತ್ತಿರುವ ಜಗಪತಿ ಬಾಬು, ಸದ್ಯ ಪ್ಯಾನ್ ಇಂಡಿಯಾ ಚಿತ್ರ 'ಪುಷ್ಪ 2', 'ಮಿಸ್ಟರ್ ಬಚ್ಚನ್' ಮತ್ತಿತರ ಚಿತ್ರಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net