More

    ಜಗದೀಶ ಶೆಟ್ಟರ್ ಅವರ ಮನವೊಲಿಕೆ ಪ್ರಯತ್ನ ವಿಫಲ; 4 ದಶಕಗಳ ಬಿಜೆಪಿ ನಂಟು ಕಳಚಿಕೊಂಡ ಮಾಜಿ ಸಿಎಂ

    ಶಿರಸಿ: ರಾಜ್ಯ ಬಿಜೆಪಿ ನಾಯಕರ ರಾಜೀನಾಮೆ ಪರ್ವ ಮುಂದುವರೆದಿದ್ದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ಅವರು ಶಿರಸಿಯಲ್ಲಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಕಚೇರಿಗೆ ಬಂದು ರಾಜೀನಾಮೆ ಸಲ್ಲಿಸಿದ್ದಾರೆ.

    6 ಬಾರಿ ಶಾಸಕ…

    ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದ ಜಗದೀಶ್ ಶೆಟ್ಟರ್​​ಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ್ದಾರೆ. 6 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಜಗದೀಶ್ ಶೆಟ್ಟರ್ ಸಚಿವರಾಗಿ, ವಿಧಾನಸಭೆ ಸ್ಪೀಕರ್ ಆಗಿ, ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ, ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ.

    ಇದನ್ನೂ ಓದಿ: ಬಿಜೆಪಿ ಬಿಟ್ಟ ಮೇಲೆ ಶೆಟ್ಟರ್ ನಿಜವಾಗ್ಲೂ ಕಾಂಗ್ರೆಸ್ ಸೇರ್ತಾರಾ?!

    ಮನವೋಲಿಕೆ ವಿಫಲ

    ಬಿಜೆಪಿಯ ಹಲವು ನಾಯಕರು ಶನಿವಾರ ರಾತ್ರಿ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿ ಮನವೊಲಿಸಲು ಪ್ರಯತ್ನಿಸಿದ್ದರು. ಉತ್ತರ ಕರ್ನಾಟಕ ಭಾಗದಲ್ಲಿ ದಶಕಗಳ ಕಾಲ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಿದ್ದ ಹಿರಿಯ ನಾಯಕರಲ್ಲಿ ಜಗದೀಶ್ ಶೆಟ್ಟರ್ ಕೂಡ ಒಬ್ಬರು. ಸಹಜವಾಗಿಯೇ ಜಗದೀಶ್ ಶೆಟ್ಟರ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಬಿಜೆಪಿ ಟಿಕೆಟ್ ನೀಡದೇ ಇರುವುದು ಶೆಟ್ಟರ್ ಅವರ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆ ಪಕ್ಷ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ.

    ಇದನ್ನೂ ಓದಿ: ಬಿಜೆಪಿಯಲ್ಲಿ ವೀರಶೈವ ಲಿಂಗಾಯತರನ್ನು ತುಳಿಯಲಾಗುತ್ತಿದೆ: ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿಕೆ

    ಕಾಂಗ್ರೆಸ್ ಪ್ರಮುಖ ನಾಯಕರಿಂದ ಜಗದೀಶ್ ಶೆಟ್ಟರ್ ಗೆ ಸ್ವಾಗತ?

    ಜಗದೀಶ್ ಶೆಟ್ಟರ್ ಪಕ್ಷ ತೊರೆಯುತ್ತೇನೆ ಎಂದು ಹೇಳುತ್ತಿದ್ದಂತೆ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂದ ಮಾತುಗಳು ಕೇಳಿ ಬಂದಿವೆ. ಜಗದೀಶ್ ಶೆಟ್ಟರ್ ಕಾಂಗ್ರೆಸ್​ಗೆ ಬಂದರೆ ಸಿದ್ದರಾಮಯ್ಯ ಸೇರಿದಂತೆ ಅನೇಕ ನಾಯಕರು ಸ್ವಾಗತಿಲು ತಯಾರಾಗಿದ್ದಾರೆ ಎನ್ನಲಾಗಿದೆ. ಈ ನಡುವೆ ರಾಹುಲ್ ಗಾಂಧಿ ಎರಡು ದಿನಗಳ ರಾಜ್ಯ ಪ್ರವಾಸದಲ್ಲಿದ್ದಾರೆ. ಹೀಗಾಗಿ ಇಂದು ಅಥವಾ ನಾಳೆ ರಾಹುಲ್ ಸಮ್ಮುಖದಲ್ಲಿ ಶೆಟ್ಟರ್ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಲಕ್ಷ್ಮಣ್ ಸವದಿ ಬಳಿಕ ಮತ್ತೊಬ್ಬ ಪ್ರಭಾವಿ ಲಿಂಗಾಯತ ನಾಯಕ ಕಾಂಗ್ರೆಸ್ ಸೇರ್ಪಡೆಯಾದಂತಾಗುತ್ತದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts