More

    ದೀನ ದಲಿತ ಹಕ್ಕುಗಳಿಗೆ ಹೋರಾಡಿದ್ದ ಜಗಜೀವನ್ ರಾಮ್

    ಚಿಕ್ಕಮಗಳೂರು: ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಡಾ. ಬಾಬು ಜಗಜೀವನ್‌ರಾಮ್ ದೀನ ದಲಿತರ ಏಳಿಗೆಗೆ ಶ್ರಮಿಸಿದ ಮಹಾನ್ ವ್ಯಕ್ತಿ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಡಾ.ಬಾಬುಜೀವನ್ ರಾಮ್ ಅವರ ೧೧೭ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಸಿ ಮಾತನಾಡಿದ ಅವರು, ದೀನದಲಿತರ ಹಕ್ಕುಗಳಿಗಾಗಿ ಹೋರಾಟ ಮಾಡಿದ ಸರಳ ಸಜ್ಜನ ವ್ಯಕ್ತಿಯಾಗಿದ್ದ ಡಾ. ಬಾಬು ಜಗಜೀವನ್‌ರಾಮ್ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದರು.
    ಇದೇ ಸಂದರ್ಭದಲ್ಲಿ ಚುನಾವಣೆಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸಲು ಐಕಾನ್‌ಗಳಾಗಿ ಹಿರೇಮಗಳೂರು ಕಣ್ಣನ್, ರಕ್ಷಿತರಾಜು ಸೇರಿ ಇನ್ನೂ ಇಬ್ಬರನ್ನು ಆಯ್ಕೆ ಮಾಡಲಾಗಿದ್ದು, ಸಮಾಜದ ಎಲ್ಲ ಸ್ಥರದ ಜನರು ಮತದಾನ ಮಾಡಲು ಮುಂದೆ ಬರುವಂತೆ ಜಾಗೃತಿ ಮೂಡಿಸಲಾಗುವುದು. ಈ ಮೂಲಕ ಕಡಿಮೆ ಮತದಾನವಾಗುವ ನಗರ ಪ್ರದೇಶದಲ್ಲಿ ಶೇ. ೮೦ರಷ್ಟು ಮತದಾನ ಮಾಡಿಸುವ ಗುರಿಹೊಂದಲಾಗಿದೆ ಎಂದು ಹೇಳಿದರು.
    ಸಮಾಜದ ಎಲ್ಲರನ್ನೂ ಒಗ್ಗೂಡಿಸಿಕೊಂಡು ಸ್ವೀಪ್ ಮತದಾನ ಜಾಗೃತಿ ನನ್ನ ಮತ ನನ್ನ ಹಕ್ಕು ಕಾರ್ಯಕ್ರಮವನ್ನು ಬಹಳ ಪರಿಣಾಮಕಾರಿಯಾಗಿ ಮಾಡಲಾಗುವುದು ಎಂದು ತಿಳಿಸಿದರು.
    ಕಾರ್ಯಕ್ರಮದಲ್ಲಿ ಎಎಸ್‌ಪಿ ಕೃಷ್ಣಮೂರ್ತಿ, ಜಿಪಂ ಸಿಇಒ ಡಾ. ಗೋಪಾಲಕೃಷ್ಣ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಯೋಗೀಶ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts