More

  ಕೊಪ್ಪಳದ ಶ್ರೀರಾಮನಗರದಲ್ಲಿ “ಜೈ ಶ್ರೀರಾಮ್” ಘೋಷಣೆ ಕೂಗಿದ ವ್ಯಕ್ತಿ ಮೇಲೆ ಹಲ್ಲೆ

  ಕೊಪ್ಪಳ: ಜಿಲ್ಲೆಯ ಗಂಗಾವತಿಯಲ್ಲಿ ಶ್ರೀರಾಮನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಸುಮಾರು 20 ಮಂದಿ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿದೆ ಎಂಬ ಆರೋಪ ಕೇಳಿಬಂದಿದೆ.

  ಶ್ರೀರಾಮ ನಗರದ ಕುಮಾರ್ ರಾಠೋಡ್ ಎಂಬವರ ಮೇಲೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಹಲ್ಲೆಯಲ್ಲಿ ಗಾಯಗೊಂಡಿರುವ ಕುಮಾರ್ ರಾಠೋಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

  ನಡೆದಿದ್ದೇನು?: ಕುಮಾರ್ ರಾಠೋಡ್ ಶ್ರೀರಾಮನಗರದ ಸನ್​ ಶೈನ್ ಬಾರ್​ನಲ್ಲಿ ಮಂಗಳವಾರ ರಾತ್ರಿ ಘಟನೆ ಸಂಭವಿಸಿದೆ. ಮದ್ಯ ಸೇವನೆಯ ವೇಳೆ ಶ್ರೀರಾಮ ನಗರದ ಕುಮಾರ್ ರಾಠೋಡ್ ಎಂಬಾತ ಜೈ ಶ್ರೀರಾಮ್ ಘೋಷಣೆ ಕೂಗಿದ್ದ. ಅದೇ ವೇಳೆ ಮುಸ್ಲಿಂ ಯುವಕರು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಸದ್ಯ ಗಾಯಾಳು ಕುಮಾರ್ ರಾಠೋಡ್​ರನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

  ʼಜೈ ಶ್ರೀರಾಮ್‌ʼ ಎಂದು ಕೂಗಿದಾಗ 20 ಜನ ಮುಸ್ಲಿಂ ಯುವಕರು ಸೇರಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

  ‌ಶ್ರೀರಾಮನವಮಿ ಸಂದರ್ಭದಲ್ಲಿ ಜೈ ಶ್ರೀರಾಮ್‌ ಘೋಷಣೆ ಕೂಗಿದ್ದ ಯುವಕರನ್ನು ಅಡ್ಡಗಟ್ಟಿ ಕೆಲ ಮುಸ್ಲಿಂ ಯುವಕರು ಗೂಂಡಾಗಿರಿ ನಡೆಸಿದ್ದ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ನಡೆದಿತ್ತು. ಹಿಂದು ಯುವಕರ ಮೇಲೆ ಹಲ್ಲೆ ಪ್ರಕರಣ ಸಂಬಂಧ ಡಿ. ಪವನ್ ಕುಮಾರ್ ನೀಡಿದ ದೂರಿನ ಮೇರೆಗೆ ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  ಒಂದೇ ದಿನ 10 ಹುಡುಗರಿಗೆ ಕಿಸ್‌ ಮಾಡಿದ್ದೇನೆ; ಸ್ಟಾರ್​ ನಟಿಯ ಸೀಕ್ರೆಟ್​​ ರಿವೀಲ್

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts