ಜೈಲುಪಾಲಾದ ಶಾಸಕ ಮುನಿರತ್ನ

mla

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯನಿಗೆ ಜಾತಿ ನಿಂದನೆ, ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ ಆರೋಪದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಶಾಸಕ ಮುನಿರತ್ನ ಅವರನ್ನು ಸೆ.೩೦ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಎರಡು ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯದ ಹಿನ್ನೆಲೆಯಲ್ಲಿ ಮಂಗಳವಾರ ಮಧ್ಯಾಹ್ನ ಮುನಿರತ್ನ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಸಮಗ್ರ ತನಿಖೆಗಾಗಿ ಆರೋಪಿಯನ್ನು ವಶಕ್ಕೆ ನೀಡುವಂತೆ ಮನವಿ ಮಾಡಿದರು. ಈ ವೇಳೆ ಮುನಿರತ್ನ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿ ವಾದ ಮಂಡನೆಗೆ ಅವಕಾಶ ಕೋರಿದರು. ಆದರೆ, ನ್ಯಾಯಾಧೀಶರು ಜಾಮೀನು ಅರ್ಜಿ ವಿಚಾರಣೆಯನ್ನು ಸೆ.೧೮ (ಬುಧವಾರ)ಕ್ಕೆ ಮುಂದೂಡಿ, ಆರೋಪಿಯನ್ನು ೧೪ ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದರು.
ಇದರ ಬೆನ್ನಲ್ಲೇ ವೈಯಾಲಿಕಾವಲ್ ಠಾಣೆ ಪೊಲೀಸರು, ಮುನಿರತ್ನನನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ಮಾಡಿಸಿ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಬಿಟ್ಟಿದ್ದಾರೆ.
ಇದು ರಾಜಕೀಯ ಷಡ್ಯಂತ್ರ :
ಅಶೋಕನಗರ ಪೊಲೀಸ್ ಠಾಣೆಯಲ್ಲಿ ಮುನಿರತ್ನ ಅವರನ್ನು ಎಸಿಪಿ ನೇತೃತ್ವದ ತಂಡವು ವಿಚಾರಣೆ ನಡೆಸಿದೆ. ವಿಚಾರಣೆ ವೇಳೆ ಮುನಿರತ್ನ ಇದೊಂದು ರಾಜ್ಯಕೀಯ ಷಡ್ಯಂತ್ರ ಎಂದಷ್ಟೇ ಉತ್ತರಿಸಿದ್ದಾರೆ. ತನಿಖಾಧಿಕಾರಿಗಳ ಬಹುತೇಕ ಪ್ರಶ್ನೆಗಳಿಗೆ ಇದು ತಮ್ಮ ವಿರೋಧಿಗಳ ರಾಜಕೀಯ ಷಡ್ಯಂತ್ರ ಎಂದಷ್ಟೇ ಒಂದು ಸಾಲಿನ ಉತ್ತರ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಎಫ್‌ಎಎಲ್ ವರದಿಗೆ
ಈಗಾಗಲೇ ಪ್ರಕರಣ ಸಂಬಂಧ ಪೊಲೀಸರು ಆರೋಪಿ ಮುನಿರತ್ನ, ಗುತ್ತಿಗೆದಾರ ಚೆಲುವರಾಜ್‌ಗೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾದ ಆಡಿಯೋದ ಮದರ್ ಡಿವೈಸ್ ಅನ್ನು ಪೊಲೀಸರು ವಶಕ್ಕೆ ಪಡೆದು ವಿಧಿ ವಿಜ್ಞಾನ ಪ್ರಯೋಗಾಲಯ(ಎಫ್‌ಎಸ್‌ಎಲ್)ಕ್ಕೆ ಕಳುಹಿಸಿದ್ದಾರೆ. ಜತೆಗೆ ಮುನಿರತ್ನ ಮತ್ತು ದೂರುದಾರ ಚೆಲುವರಾಜು ಅವರ ಧ್ವನಿ ಮಾದರಿ ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ಕಳುಹಿಸಿದ್ದಾರೆ. ಎಫ್‌ಎಸ್‌ಎಲ್ ತಜ್ಞರು ಆಡಿಯೋ ಮತ್ತು ಧ್ವನಿ ಮಾದರಿ ಪರೀಕ್ಷೆ ನಡೆಸಿ ವರದಿ ನೀಡಲಿದ್ದಾರೆ. ಒಂದು ವೇಳೆ ಆಡಿಯೋದಲ್ಲಿರುವುದು ಮುನಿರತ್ನ ಅವರದ್ದೇ ಧ್ವನಿ ಎಂಬುದು ಸಾಬೀತಾದರೆ ಮುನಿರತ್ನಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ.
ಜಾಮೀನು ಅರ್ಜಿ ವಿಚಾರಣೆ:
ಮುನಿರತ್ನ ಪರ ವಕೀಲ ಜಾಮೀನು ಕೋರಿ ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯವು ಬುಧವಾರಕ್ಕೆ ಈ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದೆ.

Share This Article

Salt Water : ಪ್ರತಿದಿನ ಬೆಳಗ್ಗೆ ಉಗುರು ಬೆಚ್ಚನೆಯ ನೀರಿನಲ್ಲಿ ಉಪ್ಪು ಹಾಕಿ ಕುಡಿದರೆ ಏನಾಗುತ್ತೆ ಗೊತ್ತಾ?

ಬೆಂಗಳೂರು: ನಾವು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವ ಅಭ್ಯಾಸ ಬೆಳೆಸಿಕೊಳ್ಳುವುದು ತುಂಬಾ…

World Arthritis Day: ಸಂಧಿವಾತ ಕಾಯಿಲೆಗೆ ಚಿಕಿತ್ಸೆಯೇ ಮದ್ದು! ತಜ್ಞವೈದ್ಯೆ ಡಾ. ಅರ್ಚನಾ ಎಂ. ಉಪ್ಪಿನ ಅಭಿಮತ

ಪ್ರಸ್ತುತ ದಿನಗಳಲ್ಲಿ ಬಿಪಿ-ಶುಗರ್ ಸಮಸ್ಯೆಯಂತೆ ಅರ್ಥರೈಟಿಸ್ ( Arthritis ) , ರುಮಾಟಾಲಜಿ (ಸಂಧಿವಾತ/ ಕೀಲುವಾಯು)…

Skin care: ಕಣ್ಣುಗಳ ಕೆಳಗಿರುವ ಚರ್ಮ ಸುಕ್ಕುಗಟ್ಟಿದೆಯೇ? ಹೀಗೆ ಮಾಡಿ..

ಕಣ್ಣುಗಳು(Skin care) ಸೂಕ್ಷ್ಮ ಅಂಗಗಳಾಗಿದ್ದು, ಅವುಗಳ ಕೆಳಗಿರುವ ಚರ್ಮವು ಸಹ ಸೂಕ್ಷ್ಮವಾಗಿರುತ್ತದೆ. ಬಿಸಿಲು, ಪೌಷ್ಠಿಕ ಆಹಾರದ…