

ತಮಿಳುನಾಡು: ಕಾಲಿವುಡ್ನ ಸೂಪರ್ ಸ್ಟಾರ್, ತಲೈವಾ ರಜನಿಕಾಂತ್ ಅಭಿನಯದ ಜೈಲರ್ ಚಿತ್ರವು ಆಗಸ್ಟ್ 10 ರಂದು ಜಾಗತಿಕವಾಗಿ ಬಿಡುಗಡೆಗೊಂಡು ಇದೀಗ ಬ್ಲಾಕ್ಬಸ್ಟರ್ ಸಿನಿಮಾವಾಗಿ ಹೊರಹೊಮ್ಮಿದೆ. ಬಾಕ್ಸ್ ಆಫೀಸ್ನಲ್ಲಿ ದಾಖಲೆಗಳನ್ನು ಬರೆದ ಚಿತ್ರ, ಸಿನಿಪ್ರೇಕ್ಷಕರಿಂದ ಉತ್ತಮ ವಿಮರ್ಶೆಗಳನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಯಿತು.
ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂಡ ಮೊದಲ ದಿನದಿಂದಲೂ ಟ್ರೆಂಡಿಂಗ್ನಲ್ಲಿದ್ದ ಜೈಲರ್, ಒಟಿಟಿಗೆ ಲಗ್ಗೆಯಿಟ್ಟ ನಂತರವೂ ಟ್ರೆಂಡ್ ಆಗಿರುವುದು ಇದೀಗ ತಲೈವಾ ಅಭಿಮಾನಿಗಳಲ್ಲಿ ಭಾರೀ ಸಂತಸ ಮೂಡಿಸಿದೆ. ಜಾಗತಿಕವಾಗಿ ಬಾಕ್ಸ್ ಆಫೀಸ್ನಲ್ಲಿ 500 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿದ ಚಿತ್ರ, ಅಮೇಜಾನ್ ಪ್ರೈಮ್ ವಿಡಿಯೋ ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಕೂಡ ಮುಂಚೂಣಿಯಲ್ಲಿದೆ.
ನೆಲ್ಸನ್ ದಿಲೀಪ್ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ, ಮೋಹನ್ ಲಾಲ್, ಶಿವರಾಜ್ಕುಮಾರ್, ತಮನಾ ಭಾಟಿಯಾ, ರಮ್ಯಾ ಕೃಷ್ಣ, ಜಾಕಿ ಶ್ರಾಫ್, ಮಿರ್ನಾ ಮೆನನ್, ಸುನೀಲ್, ನಾಗ ಬಾಬು, ಯೋಗಿ ಬಾಬು, ವಸಂತ ರವಿ ಮುಂತಾದವರ ತಾರಗಣವಿದೆ,(ಏಜೆನ್ಸೀಸ್).