17.8 C
Bengaluru
Wednesday, January 22, 2020

ಆತ್ಮಶುದ್ಧಿಗೆ ಅಹಿಂಸೆ ಪ್ರಮುಖ ಸಾಧನ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಚಿಕ್ಕಮಗಳೂರು: ಆತ್ಮಶುದ್ಧಿಗೆ ಪ್ರಮುಖ ಸಾಧನವಾಗಿರುವ ಅಹಿಂಸಾ ಮಾರ್ಗ ರಾಜಕೀಯ, ಸಾಮಾಜಿಕ ವಿಕಾಸಕ್ಕೂ ಎಡೆಮಾಡಿಕೊಡುತ್ತದೆ ಎಂದು ಜೈನ್ ತೇರಾಪಂಥ್ ಧರ್ಮ ಸಂಘದ 11ನೇ ಆಚಾರ್ಯ ಶ್ರೀ ಮಹಾಶ್ರಮಣ್​ಜೀ ಅಭಿಪ್ರಾಯಪಟ್ಟರು.

ನಗರದ ಎಂ.ಜಿ. ರಸ್ತೆಯ ಸಾರಗೋಡು ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಧಾರ್ವಿುಕ ಪ್ರವಚನ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.

ಮನುಷ್ಯನ ಒಳ್ಳೆಯ ಕಾರ್ಯಕ್ಕಿಂತ ಮಿಗಿಲಾದ ಧರ್ಮ ಯಾವುದೂ ಇಲ್ಲ. ಅಹಿಂಸೆಯೇ ಧರ್ಮ. ಅದರಲ್ಲಿ ಜಗತ್ತಿನ ಒಳಿತನ್ನು ಕಾಣಬೇಕು. ಆತ್ಮ ಶುದ್ಧಿಗೆ ಧರ್ಮವೇ ಪ್ರಮುಖ ಸಾಧನ. ಸದ್ಭಾವನೆ, ನೈತಿಕತೆ, ನಶಾ ಮುಕ್ತಿ ಇವು ಅಹಿಂಸಾ ಧರ್ಮದ ಪ್ರಮುಖ ಮೂರು ಆಯಾಮಗಳು ಎಂದರು.

ನೈತಿಕ ಮಾರ್ಗ ಪಾಲಿಸದಿದರೆ ಜೀವನದಲ್ಲಿ ಸುಃಖ, ಸಮೃದ್ಧಿ ಕಾಣಬಹುದು. ಇತರರಿಗೂ ಬದುಕುವ ಹಕ್ಕು ಇದೆ ಎಂಬ ಪ್ರಜ್ಞೆ ಇರಬೇಕು. ಬೇರೆ ಪ್ರಾಣಿಗಳನ್ನು ಹಿಂಸೆ ಮಾಡಬಾರದು. ಅವುಗಳಿಗೂ ಬದುಕುವ ಹಕ್ಕಿದೆ. ನಮಗೆ ಕೇಡಾಗಿದೆ ಎಂದು ಇತರರಿಗೆ ಕೇಡು ಬಯಸಬಾರದು ಎಂದು ಹೇಳಿದರು.

ದುಶ್ಚಟಗಳಿಂದ ದೂರ ಇರಬೇಕು. ನಶೆಯಿಂದ ಯಾವುದೆ ಲಾಭವಿಲ್ಲ. ಇದರಿಂದ ಕ್ಷಣಿಕ ಸುಖ ಮಾತ್ರ ಸಿಗಬಹುದು. ಇಲ್ಲಿ ದುಃಖವೇ ಜಾಸ್ತಿ. ಗುಟ್ಕಾ, ಮದ್ಯಪಾನ ಮಾಡುವುದರಿಂದ ನಿಮ್ಮ ಹಣ ಕಳೆದುಕೊಂಡು ದುಃಖ ಕೊಂಡುಕೊಂಡಂತೆ ಎಂಬುದು ನಿಮಗೆ ತಿಳಿದಿರಬೇಕು ಎಂದು ಮಾರ್ವಿುಕವಾಗಿ ನುಡಿದರು.

ಅಹಿಂಸೆ ಪಾಲನೆಯಿಂದ ಸಂಯಮ ಮೈಗೂಡುತ್ತದೆ. ಅದು ವಿಕಾಸಕ್ಕೂ ಹಾದಿ. ಭೌತಿಕ, ರಾಜಕೀಯ, ಸಾಮಾಜಿಕ ವಿಕಾಸಕ್ಕೆ ಈ ಎಲ್ಲ ಮಾರ್ಗಗಳು ನೆಲೆಯಾಗಬೇಕು. ಇದರಿಂದ ಮಾತ್ರ ಸ್ವಸ್ಥ ಸಮಾಜ ನಿರ್ಮಾಣ ಮಾಡಬಹುದು ಎಂದರು.

ನೆರೆ ಸಾವಿರಾರು ಭಕ್ತರಿಗೆ ದುಶ್ಚಟಗಳಿಂದ ದೂರ ಇರುವಂತೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಮುಖ್ಯ ನಿಯೋಜಕರಾದ ವಿಶ್ರುತ್ ಪ್ರಭಾಜೀ, ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ, ವಿಧಾನಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಇದ್ದರು.

ಬೆಳಗ್ಗೆ 8ಕ್ಕೆ ಮಹಾಶ್ರಮಣ್​ಜೀ ಅವರು ನಗರ ಪ್ರವೇಶ ಮಾಡಿದ್ದು, ಬೇಲೂರು ರಸ್ತೆ ಪೈ ಕಲ್ಯಾಣ ಮಂಟಪದ ಬಳಿ ಸಮಾಜ ಬಾಂಧವರು ಸ್ವಾಗತಿಸಿದರು. ಎಸ್​ಟಿಜಿ ಮಹಿಳಾ ಪದವಿ ಕಾಲೇಜಿನಿಂದ ತೇರಾಪಂಥ್ ಭವನದವರೆಗೆ ಶೋಭಾಯಾತ್ರೆ ನಡೆಯಿತು.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...