16 C
Bangalore
Thursday, December 12, 2019

ವಾಯುಪಡೆ ಬಾಂಬ್​ ದಾಳಿ ನಡೆಸಿದ್ದ ಬಾಲಾಕೋಟ್​ನ ಉಗ್ರರ ನೆಲೆ ಮತ್ತೆ ಸಕ್ರಿಯ; 40 ಉಗ್ರರಿಗೆ ತರಬೇತಿ ನೀಡುತ್ತಿರುವ ಜೆಇಎಂ

Latest News

ಸುಗಮ ಸಾರಿಗೆಗೆ ಬೇಕು 2 ಲಕ್ಷ ಕೋಟಿ ರೂಪಾಯಿ

ಬೆಂಗಳೂರು: ನಗರದ ಸಂಚಾರದಟ್ಟಣೆ ನಿವಾರಿಸುವ ಜತೆಗೆ ವಾಯುಮಾಲಿನ್ಯ ಸಮಸ್ಯೆ ಉಲ್ಬಣಿಸದಂತೆ ತಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲು 2.30 ಲಕ್ಷ ಕೋಟಿ ರೂ. ಬೇಕಿದೆ. ಮುಂದಿನ 20...

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಕಿಡಿ

ಬೆಂಗಳೂರು: ಸ್ಥಿರಾಸ್ತಿ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಲು ಖುದ್ದು ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿ ವಕೀಲರೊಬ್ಬರಿಗೆ ನೋಟಿಸ್ ನೀಡಿದ ಪ್ರಕರಣದಲ್ಲಿ ವಿಜಯನಗರ ಠಾಣೆ ಇನ್​ಸ್ಪೆಕ್ಟರ್...

ಗಣಿತಶಾಸ್ತ್ರಜ್ಞ, ತಂತ್ರಜ್ಞಾನ ನಿಪುಣ, ಇತಿಹಾಸ ಸಂಶೋಧಕ

ಎರಡು ಶತಮಾನಗಳ ಕಾಲ ಭಾರತದಲ್ಲಿ ಆಧಿಕಾರಿಕವಾಗಿ ತಳವೂರಿದ್ದ ಬ್ರಿಟಿಷರು ಭೌಗೋಳಿಕವಾಗಿ ಅಲ್ಲದೆ ಬೌದ್ಧಿಕವಾಗಿ- ಮಾನಸಿಕವಾಗಿಯೂ ಭಾರತೀಯರನ್ನು ದಾಸ್ಯಕ್ಕೊಳಪಡಿಸಲು ಪ್ರಯತ್ನಿಸಿದರು; ತಮ್ಮ ಇತಿಹಾಸ-ಸಂಸ್ಕೃತಿಗಳನ್ನು ಕುರಿತು ಭಾರತೀಯರಲ್ಲಿ ಕೀಳರಿಮೆ...

ಡಿಸೆಂಬರ್ 14 ರಂದು ಕರ್ಕಿ ಕಾವ್ಯ ಪ್ರಶಸ್ತಿ ಪ್ರದಾನ

ಹುಬ್ಬಳ್ಳಿ: ಡಾ. ಡಿ.ಎಸ್. ರ್ಕ ಸಾಹಿತ್ಯ ವೇದಿಕೆಯಿಂದ ಜಗದೀಶ ಶೆಟ್ಟರ್ ದತ್ತಿ ಆಶ್ರಯದಲ್ಲಿ ಕೊಡಮಾಡುವ ಪ್ರಸಕ್ತ ಸಾಲಿನ ಡಾ. ಡಿ.ಎಸ್. ರ್ಕ ಕಾವ್ಯ ಪ್ರಶಸ್ತಿಯು...

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಫೆಬ್ರವರಿ 14ರಂದು ಸಿಆರ್​ಪಿಎಫ್​ ಯೋಧರ ಮೇಲೆ ಆತ್ಮಾಹುತಿ ದಾಳಿ ನಡೆದಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯ ವಾಯುಪಡೆ ಪಾಕಿಸ್ತಾನದ ಬಾಲಾಕೋಟ್​ನಲ್ಲಿರುವ ಜೈಷ್​ ಎ ಮೊಹಮದ್​ ಉಗ್ರರ ನೆಲೆಯ ಮೇಲೆ ಬಾಂಬ್​ ದಾಳಿ ನಡೆಸಿ 200 ಕ್ಕೂ ಹೆಚ್ಚು ಉಗ್ರರನ್ನು ಹೊಡೆದುರುಳಿಸಿತ್ತು. ಈಗ 7 ತಿಂಗಳ ಬಳಿಕ ಈ ನೆಲೆಯನ್ನು ಜೈಷ್​ ಎ ಮೊಹಮದ್​ ಮತ್ತೆ ಸಕ್ರಿಯಗೊಳಿಸಿದ್ದು, ಉಗ್ರರಿಗೆ ತರಬೇತಿ ನೀಡುತ್ತಿದೆ ಎಂದು ತಿಳಿದು ಬಂದಿದೆ.

ಆಗಸ್ಟ್​ 5 ರಂದು ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿತ್ತು. ಭಾರತ ಸರ್ಕಾರದ ಈ ಕ್ರಮವನ್ನು ಪಾಕ್​ ತೀವ್ರವಾಗಿ ವಿರೋಧಿಸಿತ್ತು. ಜತೆಗೆ ಭಾರತದ ವಿರುದ್ಧ ದಾಳಿ ನಡೆಸಲು ಉಗ್ರರಿಗೆ ಅಗತ್ಯ ಬೆಂಬಲ ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಉಗ್ರ ಸಂಘಟನೆಗಳ ಮೇಲಿದ್ದ ಹಲವು ನಿರ್ಬಂಧಗಳನ್ನು ಪಾಕ್​ ಸರ್ಕಾರ ತೆರವುಗೊಳಿಸಿದೆ. ಈ ಹಿನ್ನೆಲೆಯಲ್ಲಿ ಜೈಷ್​ ಎ ಮೊಹಮದ್​ ಉಗ್ರ ಸಂಘಟನೆ ಬಾಲಾಕೋಟ್​ನಲ್ಲಿ ಬಾಂಬ್​ ದಾಳಿಗೆ ತುತ್ತಾಗಿದ್ದ ತಮ್ಮ ನೆಲೆಯನ್ನು ಸಕ್ರಿಯಗೊಳಿಸಿದ್ದು, ಅಲ್ಲಿ 40 ಉಗ್ರರಿಗೆ ತರಬೇತಿ ನೀಡುತ್ತಿದೆ. ಅಲ್ಲಿ ತರಬೇತಿ ಪಡೆದ ಉಗ್ರರನ್ನು ಭಾರತದೊಳಗೆ ನುಸುಳಿಸಿ ಇಲ್ಲಿ ದಾಳಿ ನಡೆಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿದು ಬಂದಿದೆ.

370ನೇ ವಿಧಿಯ ರದ್ದತಿಯ ನಂತರ ಜೈಷ್​ ಎ ಮೊಹಮದ್​ನ ಕಮಾಂಡರ್​ ಮುಫ್ತಿ ಅಬ್ದುಲ್​ ರೌಫ್​ ಅಸ್ಗರ್​ ಪಾಕ್​ ಗುಪ್ತಚರ ಸಂಸ್ಥೆ ಐಎಸ್​ಐನ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದ. ಆ ನಂತರ ಆತ ಹೆಚ್ಚು ಸಕ್ರಿಯವಾಗಿ ಭಾರತದ ವಿರುದ್ಧ ಕಾರ್ಯಚಟುವಟಿಕೆಗಳನ್ನು ಆರಂಭಿಸಿದ್ದ. ಗುಪ್ತಚರ ಮಾಹಿತಿಯಂತೆ ಪೂಂಚ್​ ಮತ್ತು ರಜೌರಿ ಸೆಕ್ಟರ್​ನ ನೀಲಂ ಮತ್ತು ಲೀಪಾ ಕಣಿವೆಯಲ್ಲಿ ಪಾಕ್​ನಲ್ಲಿರುವ ಲಾಂಚ್​ ಪ್ಯಾಡ್​ಗಳಲ್ಲಿ 100 ಕ್ಕೂ ಹೆಚ್ಚು ಜೈಷ್​ ಉಗ್ರರು ಭಾರತದೊಳಗೆ ನುಸುಳಲು ಹೊಂಚು ಹಾಕುತ್ತಿದ್ದಾರೆ. ಜಮ್ಮುವಿನಲ್ಲಿರುವ ಸೇನೆಯ ಕಂಟೋನ್ಮೆಂಟ್​ ಮತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೇನೆಯ ವಾಹನಗಳ ಮೇಲೆ ದಾಳಿ ನಡೆಸಲು ಯೋಜನೆ ರೂಪಿಸುವಂತೆ ಉಗ್ರರಿಗೆ ಅಸ್ಗರ್​ ಸೂಚಿಸಿದ್ದಾನೆ ಎಂದು ತಿಳಿದು ಬಂದಿದೆ.

ಜೈಷ್​ ಉಗ್ರರು ಜಮ್ಮು ಮತ್ತು ಕಾಶ್ಮೀರದ ಜತೆಯಲ್ಲೇ ಗುಜರಾತ್​ ಮತ್ತು ಮಹಾರಾಷ್ಟ್ರದಲ್ಲೂ ದಾಳಿ ನಡೆಸಲು ಯೋಜನೆ ರೂಪಿಸಿದ್ದಾರೆ. ಜತೆಗೆ ಕಾಶ್ಮೀರದಲ್ಲಿ ಈಗಾಗಲೇ ಸಕ್ರಿಯವಾಗಿ ಉಗ್ರ ಸಂಘಟನೆಗಳ ನೆರವನ್ನೂ ಜೈಷ್​ ಸಂಘಟನೆ ಪಡೆಯಲಿದೆ ಎಂದು ತಿಳಿದು ಬಂದಿದೆ.

ಬಾಲಾಕೋಟ್​ನಲ್ಲಿ ಭಾರತ ನಡೆಸಿದ್ದ ದಾಳಿಯಲ್ಲಿ ಸತ್ತವರೆಷ್ಟು? ಗಾಯಗೊಂಡವರೆಷ್ಟು: ಸವಿಸ್ತಾರ ವರದಿ ಮಾಡಿದ ಇಟಾಲಿಯನ್​ ಪತ್ರಕರ್ತೆ

ಬಾಲಾಕೋಟ್​ ದಾಳಿ ಕುರಿತು ಕೇಂದ್ರ ಸರ್ಕಾರಕ್ಕೆ ಸಾಕ್ಷಿ ಒದಗಿಸಿದ ವಾಯುಪಡೆ

ಬಾಲಾಕೋಟ್​ನಲ್ಲಿ ಬಾಂಬ್​ ಹಾಕಿ 19 ಮರ ನಾಶಪಡಿಸಿದ ಭಾರತೀಯ ಪೈಲಟ್​ಗಳ ವಿರುದ್ಧ ಎಫ್​ಐಆರ್​ ದಾಖಲಿಸಿದ ಪಾಕ್​

ಬಾಲಾಕೋಟ್​ನಿಂದ ಕಾಲ್ಕಿತ್ತಿರುವ ಪಾಕ್​ ಉಗ್ರರಿಗೆ ಅಫ್ಘಾನಿಸ್ತಾನ ತಾಲಿಬಾನ್​ ಉಗ್ರರ ಆಶ್ರಯ, ಅಲ್ಲೇ ತರಬೇತಿ

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...