ಜೈಶ್​ ಎ ಮೊಹಮ್ಮದ್​ ಉಗ್ರ ಸಂಘಟನೆಯೊಂದಿಗೆ ನಂಟು ಶಂಕೆ: ಪಟನಾದಲ್ಲಿ ಓರ್ವನ ಬಂಧನ

ಪಟನಾ: ಪುಲ್ವಾಮಾದಲ್ಲಿ ಉಗ್ರದಾಳಿ ನಡೆಸಿದ ಸಂಘಟನೆಯೊಂದಿಗೆ ನಂಟು ಹೊಂದಿರುವ ಶಂಕಿತ ವ್ಯಕ್ತಿಯೋರ್ವನನ್ನು ಬಿಹಾರದ ಬಂಕಾ ಜಿಲ್ಲೆಯಲ್ಲಿ ಇಂದು ಪೊಲೀಸರು ಬಂಧಿಸಿದ್ದಾರೆ.

ರೆಹಾನ್​ ಎಂಬಾತನನ್ನು ಬಂಧಿಸಲಾಗಿದ್ದು, ಈತ ಫೆ.14ರಂದು ಸಿಆರ್​ಪಿಎಫ್​ ಯೋಧರನ್ನು ಹತ್ಯೆಗೈದ ಜೈಶ್​ ಎ ಮೊಹಮ್ಮದ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕದಲ್ಲಿದ್ದಾನೆ ಎಂಬ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಹಿರಿಯ ಪೊಲೀಸ್​ ಅಧಿಕಾರಿ ಗುಪ್ತೇಶ್ವರ್​ ಪಾಂಡೆ ತಿಳಿಸಿದ್ದಾರೆ.
ಬಂಕಾ ಜಿಲ್ಲೆಯ ಬೇಲಾರಿ ಗ್ರಾಮದಲ್ಲಿ ಈತನನ್ನು ಬಂಧಿಸಲಾಗಿದೆ. ಇನ್ನೊಬ್ಬ ಶಂಕಿತ ಪರಾರಿಯಾಗಿದ್ದಾನೆಂದು ಬಂಕಾ ಹಿರಿಯ ಪೊಲೀಸ್​ ಅಧಿಕಾರಿ ಸ್ವಪ್ನಾ ಮಾಹಿತಿ ನೀಡಿದ್ದಾರೆ.

ನಾಳೆ ಪ್ರಧಾನಿ ಮೋದಿಯವರು ಪಟನಾದಲ್ಲಿ ನಡೆಯಲಿರುವ ವಿಜಯ ಸಂಕಲ್ಪ ರ‍್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ.