More

    ನೀರು ಪೂರೈಕೆಗೆ 201 ಕೋಟಿ ರೂ.: ಸಚಿವ ಕೆ.ಎಸ್.ಈಶ್ವರಪ್ಪ

    ಮಂಗಳೂರು: ನಗರ ಉತ್ತರ ಕ್ಷೇತ್ರದ 13 ಗ್ರಾಪಂ, ಮೂಡುಬಿದಿರೆ ಹಾಗೂ ಬಂಟ್ವಾಳ ಕ್ಷೇತ್ರದ ಹಲವು ಗ್ರಾಮಗಳನ್ನು ಒಳಗೊಂಡಂತೆ ಜಲಜೀವನ್ ಮಿಷನ್ ಯೋಜನೆಯಡಿ ಗುರುಪುರ ಹಾಗೂ ನೇತ್ರಾವತಿ ನದಿಯ ಅಣೆಕಟ್ಟುಗಳಿಂದ ಕುಡಿಯುವ ನೀರು ಪೂರೈಸಲು ಡಿಪಿಆರ್ ಸಿದ್ಧಪಡಿಸಿ 201 ಕೋಟಿ ರೂ.ವೆಚ್ಚದಲ್ಲಿ ಕಾಮಗಾರಿ ಆರಂಭಿಸುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
    ಶುಕ್ರವಾರ ಜಲಜೀವನ್ ಮಿಷನ್ ಗ್ರಾಮೀಣ ಭಾಗದ ಜನತೆಗೆ ಮುಟ್ಟಿಸಲು ಬೇಕಾದ ಕ್ರಮಗಳ ಕುರಿತು ಬೆಂಗಳೂರಿನ ಸಭೆಯಲ್ಲಿ ಅವರು ಈ ಆದೇಶ ನೀಡಿದ್ದಾರೆ.

    ಶಾಸಕ ಡಾ.ಭರತ್ ಶೆಟ್ಟಿ ಮಾಹಿತಿ ನೀಡಿ, ಗ್ರಾಮೀಣ ಭಾಗದಲ್ಲಿ ನಿರಂತರ ನೀರು ಪೂರೈಕೆಗೆ ಸಮಸ್ಯೆಯಾಗುತ್ತಿದೆ. ಜಲಜೀವನ್ ಮಿಷನ್ ಮೂಲಕ ಈ ಹಿಂದೆ ಇದ್ದ ಬಹುಗ್ರಾಮ ನೀರು ಪೂರೈಕೆಯಂತೆ ಅಣೆಕಟ್ಟುಗಳಿಂದ ಕುಡಿಯುವ ನೀರು ಪೂರೈಕೆಗೆ ಜಲಜೀವನ್ ಮಿಷನ್‌ನಲ್ಲೂ ಅವಕಾಶ ನೀಡಬೇಕು. ಪೈಪ್‌ಲೈನ್, ಪಂಪ್ ಅಳವಡಿಕೆ, ನೀರು ಶುದ್ಧೀಕರಣ ಘಟಕ ಸಹಿತ ವಿವಿಧ ಸೌಲಭ್ಯಗಳಿಗೆ ಹೆಚ್ಚಿನ ಅನುದಾನದ ಅಗತ್ಯವಿದೆ ಎಂದು ಮನವಿ ಮಾಡಿದರು.
    ಕುಡಿಯುವ ನೀರಿನ ಪೂರೈಕೆಯಲ್ಲಿ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಇಲಾಖೆ ಸಹಕಾರ ನೀಡುತ್ತದೆ ಎಂದು ಸಚಿವರು ಭರವಸೆ ನೀಡಿದರು. ಶಾಸಕರಾದ ಉಮಾನಾಥ ಕೋಟ್ಯಾನ್, ರಾಜೇಶ್ ನಾಕ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts