More

  ತಮಿಳುನಾಡು ಕಾಂಗ್ರೆಸ್‌ನಿಂದ ‘ಜಲಶಕ್ತಿ’ ಖ್ಯಾತೆ; ಹಸ್ತಕ್ಷೇಪ ಬೇಡವೆಂದ ಡಿಸಿಎಂ!

  ಬೆಂಗಳೂರು: ಕೇಂದ್ರ ಸಂಪುಟದಲ್ಲಿ ತುಮಕೂರು ಸಂಸದ ವಿ.ಸೋಮಣ್ಣ ಅವರಿಗೆ ಜಲಶಕ್ತಿ ಖಾತೆ ನೀಡಿರುವುದಕ್ಕೆ ತಮಿಳುನಾಡು ಕಾಂಗ್ರೆಸ್ ಖ್ಯಾತೆ ತೆಗೆದಿದೆ.
  ಕಾವೇರಿ ನದಿ ನೀರು ಹಂಚಿಕೆ ವಿವಾದ ವ್ಯಾಜ್ಯರೂಪದಲ್ಲಿ ಇರುವಾಗ ಕರ್ನಾಟಕದ ಸಂಸದರಿಗೆ ಜಲಶಕ್ತಿ ಖಾತೆ ನೀಡುವುದು ಎಷ್ಟು ನ್ಯಾಯಸಮ್ಮತ ಎಂಬುದು ಕಾಂಗ್ರೆಸ್‌ನ ತಮಿಳುನಾಡು ಘಟಕದ ಪ್ರಶ್ನೆಯಾಗಿದೆ. ಈ ಕೂಡಲೇ ಖಾತೆ ಬದಲಿಸುವಂತೆಯೂ ಕೋರಿದೆ. ಜತೆಗೆ ಸುಪ್ರಿಂಕೋರ್ಟ್ ಮೆಟ್ಟಿಲೇರಲೂ ಅಲ್ಲಿನ ಸರ್ಕಾರವನ್ನು ಆಗ್ರಹಿಸಿದೆ.
  ಚೆನ್ನೈನಲ್ಲಿ ಮಂಗಳವಾರ ಶಾಸಕರೂ ಆಗಿರುವ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸೆಲ್ವ ಪೆರುಂದಗೈ ಅಧ್ಯಕ್ಷತೆಯಲ್ಲಿ ಸರ್ವಸದಸ್ಯರ ಸಭೆ ನಡೆದಿದ್ದು, ಏಳು ನಿರ್ಣಯ ಕೈಗೊಳ್ಳಲಾಗಿತ್ತು. ಅದರಲ್ಲಿ ಆರನೇಯದು ಕೇಂದ್ರದ ತೀರ್ಮಾನದ ವಿರುದ್ಧ ಖಂಡನಾ ನಿರ್ಣಯವಾಗಿತ್ತು.
  ನರೇಂದ್ರ ಸಂಪುಟದಲ್ಲಿ ಜಲಶಕ್ತಿ, ರೈಲ್ವೆ ಸಚಿವರನ್ನಾಗಿ ಸೋಮಣ್ಣಗೆ ಅವಕಾಶ ನೀಡಿದ್ದಾರೆ. ಇದರಿಂದ ಕಾವೇರಿ ನದಿ ನೀರು ಹಂಚಿಕೆ ಮತ್ತು ಸಂಬಂಧಿಸಿದ ಯೋಜನೆಗಳಿಗೆ ತೊಂದರೆಯಾಗಬಹುದು. ಕಾವೇರಿ, ಮುಳ್ಳೆಪಿರಿಯಾರ್, ಪಾಲಾರ್ ಜಲ ವಿವಾದವಿದ್ದು ತಮಿಳುನಾಡು ಹಕ್ಕು ಮೊಟಕು ಮಾಡಬಹುದು. ಇದೇ ಕಾರಣಕ್ಕೆ ರಾಜ್ಯ ಸರ್ಕಾರ (ತ.ನಾಡು) ಸುಪ್ರಿಂಕೋರ್ಟ್‌ಗೆ ಹೋಗಬೇಕು ಎಂದು ಸಭೆ ಒಕ್ಕೊರಲ ನಿರ್ಣಯ ಅಂಗೀಕರಿಸಿದೆ.
  ವಿ.ಸೋಮಣ್ಣ ಅವರಿಗೆ ಮೋದಿ ಸಂಪುಟದಲ್ಲಿ ಜಲಸಂಪನ್ಮೂಲ ಸ್ಟೇಟ್‌ದರ್ಜೆ ಸಚಿವ ಸ್ಥಾನಮಾನ ನೀಡಲಾಗಿದ್ದು, ಇದನ್ನು ಇದು ತಮಿಳುನಾಡು ನಾಯಕರು ಗಂಭೀರವಾಗಿ ಪರಿಗಣಿಸಿದ್ದು, ಅವರ ಕಣ್ಣು ಕೆಂಪಾಗುವಂತೆ ಮಾಡಿರುವುದು ಸ್ಪಷ್ಟವಾಗಿದೆ.
  ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಯಾವುದೇ ಕೆಲಸವಾದರೂ ಕಾನೂನು ಬದ್ಧವಾಗಿ ಅವಕಾಶ ಇದ್ದರೆ ಅದನ್ನು ಮಾಡುತ್ತಾರೆ. ಆದರೆ ಕಾವೇರಿ ವಿಚಾರ ನ್ಯಾಯಾಲಯಕ್ಕೆ ಸಂಬಂಧಿಸಿದ ವಿಚಾರವಾಗಿದೆ. ತಮಿಳುನಾಡಿನವರು ತಮ್ಮ ಅಭಿಪ್ರಾಯವನ್ನು ಬರೆದಿದ್ದಾರೆ. ಪ್ರಧಾನಮಂತ್ರಿಗಳು ಅಂತಿಮ ತೀರ್ಮಾನ ಮಾಡುತ್ತಾರೆ. ನಾವು ಆ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ಬೇಡ ಎಂದರು.
  ಒಮ್ಮೆ ಸಚಿವರಾದರೆ ಅವರು, ಇಡೀ ದೇಶಕ್ಕೆ ಸಚಿವರಾಗುತ್ತಾರೆಯೇ ಹೊರತು ಅವರು ಪ್ರತಿನಿಧಿಸುವ ರಾಜ್ಯಕ್ಕೆ ಸಚಿವರಾಗುವುದಿಲ್ಲ. ಹಾಗೆಯೇ, ಯಾವುದೇ ರಾಜಕಾರಣಿಯಾದರೂ ತಮ್ಮ ರಾಜ್ಯ ಹಾಗೂ ಊರಿಗೆ ಹೆಚ್ಚಿನ ಅನುಕೂಲ ಮಾಡಿಕೊಡುವುದು ಸಹಜ. ನಾನು ಸಚಿವನಾಗಿದ್ದಾಗ ಪೈಲೆಟ್ ಯೋಜನೆಗಳನ್ನು ನನ್ನ ಕ್ಷೇತ್ರಕ್ಕೆ ತೆಗೆದುಕೊಂಡು ಹೋಗಿದ್ದೆ. ಖರ್ಗೆ ಅವರು ಕಾರ್ಮಿಕ ಸಚಿವರಾಗಿದ್ದಾಗ ಕಲುಬುರಗಿಯಲ್ಲಿ ಇಎಸ್‌ಐ ಆಸ್ಪತ್ರೆ ಕಟ್ಟಿಸಿದರು. ಇದು ಸಹಜ ಎಂದು ಹೇಳಿದರು.
  ಸೋಮಣ್ಣ ಅವರು ಈಗಷ್ಟೇ ಸಚಿವರಾಗಿ ಕಣ್ಣು ಬಿಡುತ್ತಿದ್ದಾರೆ. ನಮ್ಮ ರಾಜ್ಯದಿಂದ ಮಂತ್ರಿಯಾದವರು ರಾಜ್ಯಕ್ಕೆ ಶಕ್ತಿ ತುಂಬಲಿ. ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವೆಯಾಗಿ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಘೋಷಣೆ ಮಾಡಿದರು. ಆದರೆ ಹಣ ಬರಲಿಲ್ಲ. ಏನು ಮಾಡಲು ಸಾಧ್ಯ? ಎಂದು ಹೇಳಿದರು.

  See also  ಕೇರಳದಲ್ಲಿ ಬಿಜೆಪಿ ಭಾರೀ ಬೆಳವಣಿಗೆ! ಭವಿಷ್ಯ ನುಡಿದ ಮತಗಟ್ಟೆ ಸಮೀಕ್ಷೆಗಳು, ಯಾರಿಗೆ ಎಷ್ಟು ಸೀಟು? ಇಲ್ಲಿದೆ ವಿವರ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts