ಗುಣಮಟ್ಟದ ಕಾಮಗಾರಿ ನಡೆಸಿ: ಶಾಸಕ ರವಿಕುಮಾರ್ ಗಣಿಗ ಸೂಚನೆ

Jaljeevan Mission project started mandya
Published on

ಮಂಡ್ಯ: ತಾಲೂಕಿನ ಹೊಡಘಟ್ಟ ಗ್ರಾಮದಲ್ಲಿ 2023ನೇ ಸಾಲಿನ ಜಲಜೀವನ್ ಮಿಷನ್ ಯೋಜನೆಗೆ ಶಾಸಕ ರವಿಕುಮಾರ್ ಗಣಿಗ ಚಾಲನೆ ನೀಡಿದರು.

ಜಿಲ್ಲಾ ಪಂಚಾಯಿತಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾಮಗಾರಿಗೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ಗ್ರಾಮದಲ್ಲಿ ಕುಡಿಯುವ ನೀರಿನ ಪೈಪ್‌ಲೈನ್, ನೀರಿನ ಟ್ಯಾಂಕ್ ಮತ್ತು ಗ್ರಾಮದ 262 ಕುಟುಂಬಗಳಿಗೆ ನಲ್ಲಿ ಸಂಪರ್ಕ ಕಾಮಗಾರಿಗೆ 69.58 ಲಕ್ಷ ರೂ ವೆಚ್ಚದಲ್ಲಿ ಕಾಮಗಾರಿ ಮಾಡಲಾಗುತ್ತಿದೆ. ಕೆಲಸವನ್ನು ಶೀಘ್ರವಾಗಿ ಮುಗಿಸಬೇಕು. ಪ್ಲೋರೆಡ್ ಯುಕ್ತ ನೀರು ಬರುತ್ತಿದ್ದ ಕಾರಣ ಕುಡಿಯುವ ನೀರಿಗೆ ಸಂಕಷ್ಟ ಎದುರಾಗಿತ್ತು. ಇದನ್ನು ತಪ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನದಡಿ ಕೋಡಿಕೊಪ್ಪಲು ಮತ್ತು ಹೊಡಘಟ್ಟದಲ್ಲಿ ಕಾಮಗಾರಿ ಮಾಡಲಾಗುತ್ತಿದೆ. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಯನ್ನು ನಡೆಸಬೇಕು ಎಂದು ಸೂಚನೆ ನೀಡಿದರು.

ಗ್ರಾ.ಪಂ ಅಧ್ಯಕ್ಷ ಮಹೇಶ್, ಸದಸ್ಯರಾದ ಪ್ರತಿಮಾ ಚಲುವರಾಜು, ಗಣೇಶ್, ನಿತ್ಯಶ್ರೀ, ಮುಖಂಡ ರವಿ, ಗುತ್ತಿಗೆದಾರ ಅಭಿಷೇಕ್, ಎಇಇ ರಾಕೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net