20.5 C
Bangalore
Monday, December 9, 2019

ಬೇಡಿಕೆ ಇರುವ ಕೋರ್ಸ್ ತೆರೆಯಿರಿ

Latest News

ಸೊಂಡೇಕೆರೆಯಲ್ಲಿ ಕನಕ ಜಯಂತಿ

ಹಿರಿಯೂರು: ತಾಲೂಕಿನ ಸೊಂಡೇಕೆರೆ ಗ್ರಾಮದಲ್ಲಿ ಭಾನುವಾರ ಭಕ್ತ ಕನಕದಾಸ ಜಯಂತ್ಯುತ್ಸವ ಸಂಭ್ರಮದಿಂದ ಆಚರಿಸಲಾಯಿತು. ಗ್ರಾಮದ ಮುಖ್ಯ ವೃತ್ತದಲ್ಲಿನ ಕನಕ ಪ್ರತಿಮೆಯನ್ನು ಹೂವುಗಳಿಂದ ಅಲಂಕರಿಸಲಾಗಿತ್ತು. ಗ್ರಾಮದ...

ಸಂತೆಬೆನ್ನೂರಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಗುರುವಂದನೆ

ಚನ್ನಗಿರಿ: ಶಿಕ್ಷಕ ವೃತ್ತಿಗೆ ಸಮಾಜದಲ್ಲಿ ಉನ್ನತ ಸ್ಥಾನವಿದ್ದು, ಅದಕ್ಕೆ ಧಕ್ಕೆ ಬಾರದಂತೆ ನಡೆದುಕೊಳ್ಳಬೇಕು ಎಂದು ಬಿಇಒ ಕೆ. ಮಂಜುನಾಥ್ ಸಲಹೆ ನೀಡಿದರು. ತಾಲೂಕಿನ ಸಂತೆಬೆನ್ನೂರಿನ...

ವಿದ್ಯಾರ್ಥಿ ಜೀವನ ಓದಿಗೆ ಮೀಸಲಿಡಿ

ಹರಿಹರ: ವಿದ್ಯೆ ಕಲಿಸಿದ ಗುರು, ಓದಿದ ಶಾಲೆಯನ್ನು ಎಂದಿಗೂ ಮರೆಯಬಾರದು ಎಂದು ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಬಿ.ಡಿ.ನಾರಾಯಣ ಹೇಳಿದರು. ನಗರದ ಎಂಕೆಇಟಿ ಶಾಲೆಯ...

ಮಹಿಳೆಯರ ಸುರಕ್ಷತೆಗೆ 24X7 ಸಹಾಯವಾಣಿ ಆರಂಭಿಸಿದ ದಾವಣಗೆರೆ ಪೊಲೀಸ್

ದಾವಣಗೆರೆ: ಮಹಿಳೆಯರು, ಮಕ್ಕಳು ಮತ್ತು ವೃದ್ಧರ ಸುರಕ್ಷತೆಗೆ ಜಿಲ್ಲಾ ಪೊಲೀಸ್ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಎಸ್ಪಿ ಹನುಮಂತರಾಯ ಹೇಳಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ...

ಸಂಕಷ್ಟಕ್ಕೆ ಸಿಲುಕಿದೆ ರಂಗಭೂಮಿ ಕ್ಷೇತ್ರ

ಚಳ್ಳಕೆರೆ: ಆಧುನಿಕ ಮಾಧ್ಯಮಗಳ ನಡುವೆ ಸಾಹಿತ್ಯ, ಕಲೆ ಮತ್ತು ಸಂಗೀತ ಅಭಿರುಚಿ ಉಳಿಸಿಕೊಳ್ಳುವುದು ಕಷ್ಟವಾಗುತ್ತಿದೆ ಎಂದು ನಾಟಕ ಅಕಾಡೆಮಿ ಮಾಜಿ ಸದಸ್ಯ ಪಿ.ತಿಪ್ಪೇಸ್ವಾಮಿ...

ಜಮಖಂಡಿ: ಪದವಿ ಪಡೆದ ನಂತರ ಕ್ಯಾಂಪಸ್ ಸಂದರ್ಶನದಲ್ಲಿ ಉದ್ಯೋಗಾಕಾಂಕ್ಷಿ ವಿದ್ಯಾರ್ಥಿಗಳ ಮನಸ್ಸಿನಲ್ಲಿ ನಾವು ಆಯ್ಕೆಯಾಗುತ್ತೇವೆ ಎಂಬ ಆತ್ಮವಿಶ್ವಾಸ ಮೂಡಿದಲ್ಲಿ ವಿಶ್ವವಿದ್ಯಾಲಯದ ಉದ್ದೇಶ ಈಡೇರಿದಂತಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.

ನಗರದ ಮುಧೋಳ ರಸ್ತೆ ಪಕ್ಕದ ಕಟ್ಟಡದಲ್ಲಿ ಆರಂಭಿಸಲಾಗಿರುವ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ಸಾಂಪ್ರದಾಯಿಕ ಕೋರ್ಸ್‌ಗಳನ್ನು ತೆರೆಯದೆ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆ ಇರುವ ಕೋರ್ಸ್‌ಗಳನ್ನು ತೆರೆಯಬೇಕು. ಇಂದು ಬದಲಾವಣೆ ಬಯಸುತ್ತದೆ. ಇದಕ್ಕೆ ವಿಶ್ವವಿದ್ಯಾಲಯ ಸ್ಪಂದಿಸಬೇಕು ಎಂದು ಸಲಹೆ ನೀಡಿದರು.

ಕುಲಪತಿ ಶಿವಾನಂದ ಹೊಸಮನಿ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿನಿಯರು ಉನ್ನತ ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಜಮಖಂಡಿಯಲ್ಲಿ ಸ್ನಾತಕೋತ್ತರ ಕೇಂದ್ರ ತೆರೆಯಲಾಗಿದೆ. ಉದ್ಯಮಿಗಳಿಗೆ ಮತ್ತು ವ್ಯಾಪಾರೀಕರಣಕ್ಕೆ ಬೇಕಾಗುವ ಕೋರ್ಸ್‌ಗಳನ್ನು ಸ್ನಾತಕೋತ್ತರ ಕೇಂದ್ರದಲ್ಲಿ ಆರಂಭಿಸಲಾಗುವುದು ಎಂದು ಹೇಳಿದರು.

ಶಾಸಕ ಆನಂದ ನ್ಯಾಮಗೌಡ, ಮಾಜಿ ಸಿಂಡಿಕೇಟ್ ಸದಸ್ಯ ಸಂದೀಪ ಬೆಳಗಲಿ, ಕುಲಸಚಿವ ಸಿದ್ದು ಆಲಗೂರ ಮಾತನಾಡಿದರು. ಸಿಂಡಿಕೇಟ್ ಸದಸ್ಯರಾದ ನರಸಿಂಹ ರಾಯಚೂರ, ಪೂರ್ಣಿಮಾ ಪಟ್ಟಣಶೆಟ್ಟಿ, ನರಸಿಂಗ ಚಲವಾದಿ, ಉಪವಿಭಾಗಾಧಿಕಾರಿ ಇಕ್ರಮ್, ತಹಸೀಲ್ದಾರ್ ಪ್ರಶಾಂತ ಚನಗೊಂಡ, ವಕೀಲ ಎನ್.ಎಸ್. ದೇವರವರ, ಸಿಂಡಿಕೇಟ್ ಮಾಜಿ ಸದಸ್ಯ ರಮೇಶ ಸವದಿ ಇದ್ದರು.

ಸ್ನಾತಕೋತ್ತರ ಕೇಂದ್ರದ ಸಂಯೋಜಕ ಪ್ರೊ. ಮಲ್ಲಿಕಾರ್ಜುನ ಮರಡಿ ಸ್ವಾಗತಿಸಿದರು. ಉಪನ್ಯಾಸಕ ಸಿದ್ದಪ್ಪ ಮ್ಯಾಗೇರಿ ನಿರೂಪಿಸಿದರು.

ಮನವಿ ಸಲ್ಲಿಕೆ
ಸ್ನಾತಕೋತ್ತರ ಕೇಂದ್ರಕ್ಕೆ ದಿ. ಸಿದ್ದು ನ್ಯಾಮಗೌಡ ಸ್ನಾತಕೋತ್ತರ ಕೇಂದ್ರ ಎಂದು ನಾಮಕರಣ ಮಾಡಲು ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಕುಲಪತಿಗೆ ನಾಗರಿಕರ ಪರವಾಗಿ ಮನವಿ ಸಲ್ಲಿಸಲಾಯಿತು.





Stay connected

278,746FansLike
586FollowersFollow
622,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...