Friday, 16th November 2018  

Vijayavani

ಜನಾರ್ದನರೆಡ್ಡಿ ಕೇಸ್ ಬೆನ್ನಲ್ಲೇ ಡಿಕೆಶಿಗೆ ಬಂಧನ ಭೀತಿ - ಇಡಿಯಿಂದ 3ನೇ ಬಾರಿ ಇಡಿ ನೋಟಿಸ್ ಜಾರಿ        ಆ್ಯಂಬಿಂಡೆಟ್ ಪ್ರಕರಣದಲ್ಲಿ ಇಡಿ ಹೆಸರಿಗೆ ಆಕ್ಷೇಪ - ಸಿಸಿಬಿ ವಿರುದ್ಧ ಇಡಿ ಜಂಟಿ ನಿರ್ದೇಶಕ ಗರಂ        ಸಚಿವ ಸಂಪುಟ ವಿಸ್ತರಣೆಗೆ ಧನುರ್ಮಾಸದ ಎಫೆಕ್ಟ್ - ಸದ್ಯಕ್ಕಿಲ್ಲ ಆಕಾಂಕ್ಷಿಗಳಿಗೆ ಸಚಿವ ಭಾಗ್ಯ - ಕಾಂಗ್ರೆಸ್ಸಿಗರಲ್ಲಿ ಮತ್ತೆ ಅಸಮಾಧಾನ        ರಾಜ್ಯಾದ್ಯಂತ ಭುಗಿಲೆದ್ದ ರೈತರ ಹೋರಾಟದ ಕಿಚ್ಚು - ರೈತರನ್ನು ಭೇಟಿಯಾಗುವುದಾಗಿ ಹೇಳಿದ ಕುಮಾರಸ್ವಾಮಿ        ಗಾಂಧಿ ಕುಟುಂಬ ಬಿಟ್ಟು ಬೇರೆಯವರು ಎಐಸಿಸಿ 5 ಅಧ್ಯಕ್ಷರಾಗಲಿ - ಕಾಂಗ್ರೆಸ್​ಗೆ ಪ್ರಧಾನಿ ಮೋದಿಯಿಂದ ನೇರ ಸವಾಲು        ತಮಿಳುನಾಡಿನಾದ್ಯಂತ ಗಜ ಚಂಡಮಾರುತದ ಅರ್ಭಟ - 20ಕ್ಕೂ ಹೆಚ್ಚು ಮಂದಿ ದುರ್ಮರಣ - ಅಪಾರ ಆಸ್ತಿ ಪಾಸ್ತಿ, ಬೆಳೆ ನಾಶ       
Breaking News

ರಕ್ತ ಕಲಾವಿದನ ಕುಂಚದಲ್ಲಿ ಅರಳಿದ ಅಟಲ್​

Saturday, 18.08.2018, 7:11 PM       No Comments

ಜಮಖಂಡಿ (ಬಾಗಲಕೋಟೆ): ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರವನ್ನು ಕಲಾವಿದ ಡಾ. ಸಂಗಮೇಶ ಬಗಲಿ ಅವರು ರಕ್ತದಲ್ಲಿ ಬಿಡಿಸಿ ವಿಭಿನ್ನ ರೀತಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು.

ತಾಲೂಕಿನ ತುಬಚಿ ಸರ್ಕಾರಿ ಪ್ರೌಢಶಾಲೆಯಲ್ಲಿ ಚಿತ್ರಕಲೆ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವ ಬಗಲಿ ‘ರಕ್ತ ಕಲಾವಿದ’ ಎಂದೇ ಹೆಸರು ವಾಸಿಯಾಗಿದ್ದಾರೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನ ಹಿನ್ನೆಲೆಯಲ್ಲಿ ಸಂಗಮೇಶ ಆರ್ಟ್ ಗ್ಯಾಲರಿಯಲ್ಲಿ ತಮ್ಮ ರಕ್ತದಿಂದ ಅಟಲ್​ಜೀ ಭಾವಚಿತ್ರ ಬಿಡಿಸಿ ಗಮನ ಸೆಳೆದರು.

ಸರ್ವಶಿಕ್ಷಣ ಅಭಿಯಾನ ಅಟಲ್​ಜೀ ಕಲ್ಪನೆಯ ಕೂಸು. ಅವರು ದೇಶದ ಪ್ರಧಾನಿಯಾದ ಬಳಿಕ ಸರ್ಕಾರಿ ಶಾಲೆಗಳಿಗೆ ಹೊಸರೂಪ ನೀಡಿದರು. ಇಂತಹ ಶಿಕ್ಷಣ ಪ್ರೇಮಿಗೆ ದೇಶದ ಶಿಕ್ಷಕರು ಹಾಗೂ ಸರ್ಕಾರಿ ಶಾಲೆಯ ಮಕ್ಕಳ ಪರ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದೇನೆ.

| ಡಾ. ಸಂಗಮೇಶ ಬಗಲಿ, ರಕ್ತ ಕಲಾವಿದ

 

Leave a Reply

Your email address will not be published. Required fields are marked *

Back To Top