More

    ಟೆಸ್ಟ್​​ ಕ್ರಿಕೆಟ್​ನಲ್ಲಿ ವಿಶ್ವದಾಖಲೆ ಬರೆದ ಜೇಮ್ಸ್​ ಆ್ಯಂಡರ್ಸನ್​

    ಧರ್ಮಶಾಲಾ: ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್​ ಅಸೋಸಿಯೇಷನ್​ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್​ ನಡುವಿನ ಐದನೇ ಟೆಸ್ಟ್​ ಪಂದ್ಯವು ಹಲವು ಮಹತ್ತರ ಕ್ಷಣಗಳಿಗೆ ಸಾಕ್ಷಿಯಾಗುತ್ತಿದ್ದು, ಈಗ ಮತ್ತೊಂದು ದಾಖಲೆಗೆ ಸಾಕ್ಷಿಯಾಗಿದೆ. ಆದರೆ, ಈ ಬಾರಿ ದಾಖಲೆ ಬರೆದಿರುವುದು ಇಂಗ್ಲೆಂಡ್​ ತಂಡದ ಆಟಗಾರ ಎನ್ನುವುದು ವಿಶೇಷ.

    ಇಂಗ್ಲೆಂಡ್​ ತಂಡದ ಹಿರಿಯ ವೇಗಿ ಜೇಮ್ಸ್​ ಆ್ಯಂಡರ್ಸನ್​ ಭಾರತದ ವಿರುದ್ಧದ ಮೊದಲನೇ ಇನಿಂಗ್ಸ್​ನಲ್ಲಿ ಈ ಸಾಧನೆ ಮಾಡಿದ್ದು, ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ವಿಶ್ವದ ಮೊದಲ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

    ಇದನ್ನೂ ಓದಿ: ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಫಾರಿ; ವಿಡಿಯೋ ವೈರಲ್

    ಅಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ 700 ವಿಕೆಟ್​ ಕಬಳಿಸಿದ ವಿಶ್ವದ ಮೊದಲ ವೇಗದ ಬೌಲರ್ ಎಂಬ ವಿಶ್ವ ದಾಖಲೆಯನ್ನು ಜೇಮ್ಸ್ ಅ್ಯಂಡರ್ಸನ್ ನಿರ್ಮಿಸಿದ್ದಾರೆ. ಹಾಗೆಯೇ ಈ ಸಾಧನೆ ಮಾಡಿದ ವಿಶ್ವದ ಮೂರನೇ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಮತ್ತು ಆಸ್ಟ್ರೇಲಿಯಾದ ಶೇನ್ ವಾರ್ನ್ ಟೆಸ್ಟ್​ ಕ್ರಿಕೆಟ್​ನಲ್ಲಿ 700ಕ್ಕೂ ಹೆಚ್ಚು ವಿಕೆಟ್​ಗಳನ್ನು ಕಬಳಿಸಿದ್ದಾರೆ.

    ಈವರೆಗೂ 187 ಟೆಸ್ಟ್​ ಪಂದ್ಯಗಳನ್ನು ಆಡಿರುವ 41 ವರ್ಷದ ಜೇಮ್ಸ್​ ಆ್ಯಂಡರ್ಸನ್​ 700 ವಿಕೆಟ್​ಗಳ ಸಾಧನೆ ಮಾಡಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ ಏಕೈಕ ವೇಗದ ಬೌಲರ್​ ಎನಿಸಿಕೊಂಡಿದ್ದಾರೆ. 2003ರಲ್ಲಿ ಜಿಂಬಾಬ್ವೆ ವಿರುದ್ಧದ ಪಂದ್ಯದ ಮೂಲಕ ಟೆಸ್ಟ್ ಕೆರಿಯರ್ ಆರಂಭಿಸಿದ ಜೇಮ್ಸ್ ಅ್ಯಂಡರ್ಸನ್ ಇದುವರೆಗೆ 39873* ಎಸೆತಗಳನ್ನು ಎಸೆದಿದ್ದಾರೆ. 32 ಬಾರಿ 5 ವಿಕೆಟ್ ಕಬಳಿಸಿದರೆ, 3 ಬಾರಿ 10 ವಿಕೆಟ್​ಗಳ ಸಾಧನೆ ಮಾಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts