More

  ‘ಜೇಮ್ಸ್’ ಚಿತ್ರದ ನಿರ್ಮಾಪಕ ಅಸ್ವಸ್ಥ; ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

  ಬೆಂಗಳೂರು: ಕೆಲವು ದಿನಗಳ ಹಿಂದೆ ವಿಕ್ರಾಂತ್ ರೋಣ ಚಿತ್ರದ ನಿರ್ಮಾಪಕ ಜಾಕ್ ಮಂಜುನಾಥ್ ಅಸ್ವಸ್ಥರಾಗಿ ಆಸ್ಪತ್ರೆಗೆ ಸೇರಿದ್ದರು. ಅದಾದ ಬಳಿಕ ಕನ್ನಡದ ಮತ್ತೊಬ್ಬ ಚಿತ್ರ ನಿರ್ಮಾಪಕ ಅಸ್ವಸ್ಥಗೊಂಡಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

  ಪುನೀತ್ ರಾಜಕುಮಾರ್ ಅಭಿನಯದ ಕಟ್ಟಕಡೆಯ ಸಿನಿಮಾ ಜೇಮ್ಸ್ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಆಸ್ಪತ್ರೆಗೆ ದಾಖಲಾದವರು. ತೀವ್ರ ಅಸ್ವಸ್ಥಗೊಂಡ ಅವರನ್ನು ನಿನ್ನೆ ಸಂಜೆ ಶೇಷಾದ್ರಿಪುರದ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಆಸ್ಪತ್ರೆಯವರು ಅವರ ಆರೋಗ್ಯ ಸ್ಥಿತಿಯ ಕುರಿತು ಅಧಿಕೃತ ಮಾಹಿತಿ ಬಿಡುಗಡೆ ಮಾಡಿದ್ದಾರೆ.

  ಇದನ್ನೂ ಓದಿ: ಕಬ್ಬಿನ ಹಾಲು ತೆಗೆಯುವ ಯಂತ್ರದಲ್ಲಿ ರಕ್ತ; ಬಟ್ಟೆ ಸಿಲುಕಿ ಮಹಿಳೆಯ ಸಾವು..

  ನಿನ್ನೆ ಸಂಜೆ ಕಿಶೋರ್ ಪತ್ತಿಕೊಂಡ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಅವರ ಮೆದುಳಿನ ಎಡಭಾಗದಲ್ಲಿ ರಕ್ತಸ್ರಾವವಾಗಿತ್ತು. ವೈದ್ಯರು ರಾತ್ರಿ ಸರ್ಜರಿ ಮಾಡಿ, ಇಂದು ಬೆಳಗಿನ ಜಾವ ಐಸಿಯುಗೆ ಸ್ಥಳಾಂತರಿಸಿದ್ದಾರೆ. ಸದ್ಯ ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಕೃತಕ ಉಸಿರಾಟದ ವ್ಯವಸ್ಥೆಯಲ್ಲಿದ್ದು, ತೀವ್ರ ಗಮನ ಇಡಲಾಗಿದೆ ಎಂದು ಆಸ್ಪತ್ರೆಯವರು ತಿಳಿಸಿದ್ದಾರೆ.

  ರಾಜ್ಯಾದ್ಯಂತ ಭಾರಿ ಮಳೆ, ಶಾಲೆಗಳಿಗೂ ರಜೆ: ಎಲ್ಲೆಲ್ಲಿ ಎಷ್ಟು ದಿನ? ಇಲ್ಲಿದೆ ಮಾಹಿತಿ..

  ಸಮುದ್ರದೊಳಕ್ಕೇ ಹೊಕ್ಕಿದ್ದ ಕಾರು; ನಾಪತ್ತೆಯಾಗಿದ್ದವನ ಶವ ಇಂದು ಪತ್ತೆ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts