ಬೆಂಗಳೂರಿನ ಹಲವು ಕಡೆ LED ಸ್ಕ್ರೀನ್ಗಳನ್ನು ಹಾಕಿ, ಸಿನಿಮಾದ ಟೀಸರ್ ಅನ್ನು ಅಭಿಮಾನಿಗಳು ಕಣ್ತುಂಬಿಕೊಂಡರು. ಟೀಸರ್ನ ಹಲವು ದೃಶ್ಯಗಳು ಕೂಡಾ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಇನ್ನು, 'ಜೇಮ್ಸ್' ಸಿನಿಮಾ ಮಾರ್ಚ್ 17ರಂದು 5 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಚೇತನ್ ಕುಮಾರ್ ಅವರು ಆಕ್ಷನ್ ಕಟ್ ಹೇಳಿರುವ ಈ ಸಿನಿಮಾಗೆ ಕಿಶೋರ್ ಪತ್ತಿಕೊಂಡ ಅವರು ನಿರ್ಮಾಪಕರು. ನಟಿ ಪ್ರಿಯಾ ಆನಂದ್ ಅವರು ನಾಯಕಿಯಾಗಿ ಕಾಣಿಸಿಕೊಂಡಿದ್ದು, ಶರತ್ ಕುಮಾರ್, ರಂಗಾಯಣ ರಘು, ಸಾಧು ಕೋಕಿಲ, ಚಿಕ್ಕಣ್ಣ, ಸುಚೇಂದ್ರ ಪ್ರಸಾದ್, ಶ್ರೀಕಾಂತ್ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.