Wednesday, 21st November 2018  

Vijayavani

ಕಬ್ಬು ಬೆಳೆಗಾರರ ಹೋರಾಟಕ್ಕೆ ಕೇಸರಿ ಬಲ - ರಾಜ್ಯಾದ್ಯಂತ ಇಂದು ಬಿಜೆಪಿ ಬೃಹತ್ ಪ್ರತಿಭಟನೆ        ಗದಗಿನ ಕದಡಿ ಬಳಿ ಒಡೆದ ಕಾಲುವೆ- ಜಮೀನುಗಳಿಗೆ ನುಗ್ಗಿದ ಅಪಾರ ನೀರು - ಅಧಿಕಾರಿಗಳ ವಿರುದ್ಧ ಆಕ್ರೋಶ        ದ್ರಾಕ್ಷಿ ತೋಟದಲ್ಲಿ ಕರೆಂಟೂ, ನೆಲದಲ್ಲೂ ಕರೆಂಟು - ಚಿಕ್ಕಬಳ್ಳಾಪುರದ ಪವರ್​ ಗ್ರಿಡ್ ಕಂಟಕ        ಮದ್ದೂರು ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ - ಒಬ್ಬ ಲ್ಯಾಬ್ ಟೆಕ್ನೀಷಿಯನ್ ಸ್ಥಿತಿ ಗಂಭೀರ-        ಸ್ಯಾಂಡಲ್​ವುಡ್​​ನಲ್ಲಿ ಮತ್ತೊಂದು ಗಟ್ಟಿಮೇಳ - ಡಿ.11, 12ರಂದು ಹಸೆಮಣೆ ಏರುತ್ತೆ ಐಂದ್ರಿತಾ, ದಿಗಂತ್ ಜೋಡಿ       
Breaking News

ಚಾಲಕನ ನಿಯಂತ್ರಣ ತಪ್ಪಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಬಸ್​: 13 ಸಾವು

Friday, 14.09.2018, 2:58 PM       No Comments

ಶ್ರೀನಗರ: ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್​ ಕಂದಕಕ್ಕೆ ಉರುಳಿಬಿದ್ದ ಪರಿಣಾಮ 13 ಮಂದಿ ಸಾವಿಗೀಡಾಗಿ, ಹಲವರು ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.

ಕೆಸ್ವಾನ್​ ಪ್ರದೇಶದಿಂದ ಕಿಶ್ತ್ವಾರ್ ಜಿಲ್ಲೆಗೆ ತೆರಳುತ್ತಿದ್ದ ಮಿನಿ ಬಸ್​ ಚಾಲಕನ ನಿಯಂತ್ರಣ ಕಳೆದುಕೊಂಡು​ ಥಕ್ರಾಯ್​ ಬಳಿ ದಂಡಾರಣ್​ನಲ್ಲಿರುವ ಸುಮಾರು 300 ಅಡಿ ಆಳದ ಕಂದಕ್ಕೆ ಉರುಳಿ ಬಿದ್ದಿದೆ.

ಬಸ್​ನಲ್ಲಿ 30 ಮಂದಿ ಪ್ರಯಾಣಿಸುತ್ತಿದ್ದರು. ಇದರಲ್ಲಿ 13 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಮಾಹಿತಿ ತಿಳಿದ ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿ, ಕೆಲವರನ್ನು ರಕ್ಷಿಸಲಾಗಿದೆ ಎಂದು ಕಿಶ್ತ್ವಾರ್ ಜಿಲ್ಲೆಯ ಹಿರಿಯ ಪೊಲೀಸ್​ ವರಿಷ್ಠಾಧಿಕಾರಿ ರಾಜಿಂದರ್​ ಗುಪ್ತಾ ತಿಳಿಸಿದ್ದಾರೆ.

ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ನೀಡಲಾಗುವುದು ಎಂದು ಕಿಶ್ತ್ವಾರ್ ಜಿಲ್ಲೆಯ ಉಪ ಆಯುಕ್ತ ಅಂಗ್ರೆಜ್ ಸಿಂಗ್ ರಾಣಾ ಅವರು ತಿಳಿಸಿದ್ದಾರೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top