16 C
Bangalore
Saturday, December 7, 2019

ಬಿಗಿ ಭದ್ರತೆಯಲ್ಲಿ ಬಕ್ರೀದ್: ಕಾಶ್ಮೀರ ಶಾಂತಿಯುತ, ಪ್ರಾರ್ಥನೆ, ಶುಭಾಶಯ ವಿನಿಮಯ

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ನವದೆಹಲಿ: ವಿಶೇಷ ಸ್ಥಾನಮಾನ ರದ್ದತಿ ಬಳಿಕ ಕೈಗೊಳ್ಳಲಾಗಿರುವ ಬಿಗಿ ಭದ್ರತೆ ನಡುವೆಯೇ ಜಮ್ಮು-ಕಾಶ್ಮೀರದಲ್ಲಿ ಬಕ್ರೀದ್ ಆಚರಣೆ ಶಾಂತಿಯುತವಾಗಿ ನಡೆಯಿತು. ಬಕ್ರೀದ್ ದಿನ ಉಗ್ರ ದಾಳಿ, ಹಿಂಸಾಚಾರ ಸಾಧ್ಯತೆ ಇದೆ ಎಂದು ಈ ಹಿಂದೆ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದ್ದ ಹಿನ್ನೆಲೆಯಲ್ಲಿ ಶಾಂತಿ ಕಾಪಾಡಿಕೊಳ್ಳುವುದು ಭದ್ರತಾ ಪಡೆಗಳಿಗೆ ಸವಾಲಿನ ಕೆಲಸವಾಗಿತ್ತು. ಸೋಮವಾರ ಇಡೀ ದಿನ ಯಾವುದೇ ಹಿಂಸಾಚಾರ ನಡೆದಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮುಸಲ್ಮಾನರು ಮಸೀದಿಗಳಿಗೆ ತೆರಳಿ ಪ್ರಾರ್ಥನೆ ಮಾಡಿ, ಸ್ನೇಹಿತರು ಬಂಧುಗಳೊಂದಿಗೆ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಆದರೆ ಕೆಲ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ದೃಷ್ಟಿಯಿಂದಾಗಿ ಜನರ ಗುಂಪು ಸೇರಲು ಅನುಮತಿ ನಿರಾಕರಿಸಲಾಗಿತ್ತು. ಇಂಟರ್​ನೆಟ್ ಹಾಗೂ ಮೊಬೈಲ್ ಸಂಪರ್ಕ ಕಡಿತಗೊಂಡಿರುವ ಪ್ರದೇಶಗಳ ಜನರು ತಮ್ಮ ದೂರದ ಬಂಧುಗಳ ಜತೆ ಶುಭಾಶಯ ವಿನಿಮಯ ಮಾಡಲು 300 ತಾತ್ಕಾಲಿಕ ಟೆಲಿಫೋನ್ ಬೂತ್​ಗಳನ್ನು ಏರ್ಪಾಡು ಮಾಡಲಾಗಿತ್ತು. ಗೃಹ ಸಚಿವಾಲಯದ ಮಾಹಿತಿ ಪ್ರಕಾರ, ಬಾರಾಮೂಲಾದಲ್ಲಿ ಸುಮಾರು 10 ಸಾವಿರ ಹಾಗೂ ಬಂಡಿಪೋರಾದಲ್ಲಿ 5 ಸಾವಿರ ಜನರು ಜಮಾವಣೆಗೊಂಡು ಶಾಂತ ರೀತಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಜಮ್ಮು-ಕಾಶ್ಮೀರದ ಆರ್​ಎಸ್ ಪುರದಲ್ಲಿ ನಮಾಜ್ ಬಳಿಕ ಕೆಲ ಮಕ್ಕಳು ರಾಷ್ಟ್ರಧ್ವಜ ಹಿಡಿದು ‘ಭಾರತ್ ಮಾತಾ ಕೀ ಜೈ’ ಎಂದು ಘೋಷಣೆ ಕೂಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ. ಕಣಿವೆಯ ಭದ್ರತೆಯ ಜವಾಬ್ದಾರಿ ಹೊತ್ತಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಶ್ರೀನಗರ, ಪಂಪೋರಾ, ಅವಂತಿಪೋರಾ, ಲಾಲ್​ಚೌಕ್, ಪುಲ್ವಾಮಾ, ಬೆಲ್ಗಮ್ ಸೇರಿ ವಿವಿಧ ಪ್ರದೇಶಗಳಲ್ಲಿ ಭದ್ರತೆ ಪರಿಶೀಲನೆ ನಡೆಸಿದರು. ಜತೆಗೆ ಅಲ್ಲಿನ ಜನರ ಜತೆ ಬೆರೆತರು. ಮಾರುಕಟ್ಟೆಗಳಲ್ಲಿನ ಜನರ ಬಳಿ ವ್ಯಾಪಾರದ ಬಗ್ಗೆ ವಿಚಾರಿಸಿದರು. ಮೊದಲಿಗಿಂತಲೂ ಅಧಿಕ ಶಾಂತ ಸ್ಥಿತಿ ನಿರ್ವಣವಾಗಿದ್ದು, 5 ಜಿಲ್ಲೆಗಳಲ್ಲಿನ ನಿಷೇಧಾಜ್ಞೆ ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ. ಬಕ್ರೀದ್ ಹಾಗೂ ಸ್ವಾತಂತ್ರ್ಯ ದಿನಾಚರಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಸೂಕ್ಷ್ಮ ಪ್ರದೇಶಗಳಲ್ಲಿನ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಜಮ್ಮು-ಕಾಶ್ಮೀರದ ಬಹುತೇಕ ಕಡೆಗಳಲ್ಲಿ ವಾಹನ ಸಂಚಾರ ಯಥಾಸ್ಥಿತಿಗೆ ಮರಳಿತ್ತು.

ಮೋದಿ ಈದ್ ಮುಬಾರಕ್

ಬಕ್ರೀದ್ ಹಬ್ಬಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ ಕೋವಿಂದ ಶುಭ ಕೋರಿದ್ದಾರೆ. ಟ್ವೀಟ್ ಮಾಡಿರುವ ಮೋದಿ, ಮುಸಲ್ಮಾನರಿಗೆ ತ್ಯಾಗ ಬಲಿದಾನದ ಸಂಕೇತವಾದ ಈದ್-ಅಲ್-ಅಧಾದ್ ಶುಭಾಶಯಗಳು. ಈ ಹಬ್ಬ ನಮ್ಮ ಸಮಾಜದಲ್ಲಿ ಶಾಂತಿ ಮತ್ತು ಸಂತೋಷದ ಮನೋಭಾವವನ್ನು ಹೆಚ್ಚಿಸುತ್ತದೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ. ಭಾರತ ಮತ್ತು ವಿದೇಶದಲ್ಲಿರುವ ಮುಸ್ಲಿಮ್ ಸಹೋದರ-ಸಹೋದರಿಯರಿಗೆ ಈದ್ ಮುಬಾರಕ್. ಬಕ್ರೀದ್ ಪ್ರೀತಿ, ಭ್ರಾತೃತ್ವ ಮತ್ತು ಮಾನವೀಯತೆಯನ್ನು ಸಂಕೇತಿಸುತ್ತದೆ ಎಂದು ರಾಷ್ಟ್ರಪತಿ ಕೋವಿಂದ ತಿಳಿಸಿದ್ದಾರೆ.

ಸುಳ್ಳು ಹಬ್ಬಿಸುವ ಟ್ವಿಟ್ಟರ್ ಖಾತೆ ಬಂದ್?

ಜಮ್ಮು-ಕಾಶ್ಮೀರದ ಶಾಂತಿ ಕದಡಲು ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿರುವ ಟ್ವಿಟ್ಟರ್ ಖಾತೆಗಳನ್ನು ಸ್ಥಗಿತಗೊಳಿಸುವಂತೆ ಕೇಂದ್ರ ಗೃಹ ಸಚಿವಾಲಯ ಟ್ವಿಟ್ಟರ್ ಸಂಸ್ಥೆಗೆ ಪತ್ರ ಬರೆದಿದೆ. 8 ಟ್ವಿಟ್ಟರ್ ಖಾತೆಗಳನ್ನು ಇದರಲ್ಲಿ ಪಟ್ಟಿ ಮಾಡಲಾಗಿದೆ. ಜಮ್ಮು-ಕಾಶ್ಮೀರದ ಪರಿಸ್ಥಿತಿ ಬಗ್ಗೆ ವದಂತಿಗಳನ್ನು ಹಬ್ಬಿಸಿ, ಶಾಂತಿ ಕದಡುವ ಯತ್ನ ಮಾಡಲಾಗುತ್ತಿದ್ದು, ಈ ಖಾತೆಗಳನ್ನು ಸ್ಥಗಿತಗೊಳಿಸುವಂತೆ ಕೇಂದ್ರ ಆಗ್ರಹಿಸಿದೆ. ವಾಸ್ತವವಾಗಿ ಕಣಿವೆ ಶಾಂತವಾಗಿದ್ದರೂ ಇಂಥ ವದಂತಿಗಳಿಂದಾಗಿ ಕೆಲ ಅಂತಾರಾಷ್ಟ್ರೀಯ ಮಾಧ್ಯಮಗಳು ಸತ್ಯಕ್ಕೆ ದೂರವಾದ ವರದಿಗಳನ್ನು ಪ್ರಕಟಿಸಿವೆ.

ಹಿಂದು ಬಾಹುಳ್ಯವಿದ್ದರೆ ರದ್ದಾಗುತ್ತಿರಲಿಲ್ಲ

ಜಮ್ಮು- ಕಾಶ್ಮೀರದಲ್ಲಿ ಹಿಂದುಗಳು ಬಹುಸಂಖ್ಯಾತರಾಗಿದ್ದರೆ ಬಿಜೆಪಿ ಸರ್ಕಾರ ವಿಶೇಷ ಸ್ಥಾನಮಾನ ರದ್ದುಗೊಳಿಸುತ್ತಿರಲಿಲ್ಲ ಎಂದು ಕಾಂಗ್ರೆಸ್​ನ ಹಿರಿಯ ನಾಯಕ ಪಿ. ಚಿದಂಬರಂ ಹೇಳಿದ್ದಾರೆ. ಬಿಜೆಪಿ ಬಲ ಪ್ರಯೋಗದಿಂದ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆದಿದೆ. ಇದರಿಂದಾಗಿ ಅಲ್ಲಿ ಅಸ್ಥಿರತೆ ಉಂಟಾಗಿದ್ದು, ಅಂತಾರಾಷ್ಟ್ರೀಯ ಮಾಧ್ಯಮಗಳು ಈ ಬಗ್ಗೆ ವರದಿ ಮಾಡಿವೆ. ಆದರೆ ಭಾರತದ ಮಾಧ್ಯಮಗಳಲ್ಲಿ ಅಲ್ಲಿನ ಸ್ಥಿತಿ ಬಗ್ಗೆ ವರದಿಯಾಗುತ್ತಿಲ್ಲ. ಕಣಿವೆಯಲ್ಲಿ ಬಿಜೆಪಿ ನಿರ್ಧಾರ ವಿರೋಧಿಸಿ ಜನರು ಪ್ರತಿಭಟನೆ ನಡೆಸಿದ್ದಾಗ ಪೊಲೀಸರು ಗುಂಡು ಹಾರಿಸಿದ್ದು ನಿಜ. ಜತೆಗೆ ಕೇಂದ್ರ ಸರ್ಕಾರದ ಮೇಲಿನ ಭಯದಿಂದಾಗಿ ಸ್ಥಳೀಯ ಪಕ್ಷಗಳು ಬಿಜೆಪಿ ವಿರುದ್ಧದ ನಮ್ಮ ನಿಲುವನ್ನು ಬೆಂಬಲಿಸಲಿಲ್ಲ ಎಂದಿದ್ದಾರೆ.

ಸಿಹಿ ನಿರಾಕರಣೆ

ಈ ಬಾರಿ ಈದ್ ಹಬ್ಬಕ್ಕೆ ಬಿಎಸ್​ಎಫ್​ನಿಂದ ಸಿಹಿ ಪಡೆಯಲು ಪಾಕ್ ನಿರಾಕರಿಸಿದೆ. ಪ್ರತಿ ಬಾರಿ ಹಬ್ಬಕ್ಕೆ ಒಂದು ದಿನ ಮುಂಚಿತವಾಗಿ ಸಿಹಿ ವಿನಿಮಯದ ಬಗ್ಗೆ ಪಾಕ್​ನಿಂದ ಸಂದೇಶ ಬರುತ್ತದೆ. ಈ ಬಾರಿ ಭಾರತ ಸಿಹಿ ವಿನಿಮಯಕ್ಕೆ ಮುಂದಾಗಿತ್ತು. ಪಾಕ್​ನಿಂದ ಪ್ರತಿಕ್ರಿಯೆ ಬಂದಿರಲಿಲ್ಲ.

ಭಾರತ ಬಸ್ ಸಂಚಾರ ಸ್ಥಗಿತ

1999ರಲ್ಲಿ ದೆಹಲಿ ಮತ್ತು ಲಾಹೋರ್ ನಡುವೆ ಪ್ರಾರಂಭಿಸಿದ್ದ ಬಸ್ ಸೇವೆಯನ್ನು ಈಗಾಗಲೇ ಪಾಕ್ ಹಿಂಪಡೆದಿದ್ದು, ಸೋಮವಾರ ಭಾರತ ಕೂಡ ಬಸ್ ಸಂಚಾರವನ್ನು ಸ್ಥಗಿತಗೊಳಿಸಿದೆ. ಭಾರತ ಮತ್ತು ಪಾಕ್​ನ ಒಂದೊಂದು ಬಸ್​ಗಳು ದೆಹಲಿ-ಲಾಹೋರ್ ನಡುವೆ ಪ್ರಯಾಣ ನಡೆಸುತ್ತಿದ್ದು, ಸದ್ಯ ಎರಡೂ ದೇಶಗಳು ಬಸ್ ಸಂಚಾರ ಸ್ಥಗಿತಗೊಳಿಸಿವೆ. 1999ರ ಫೆಬ್ರವರಿ 19ರಂದು ಅಟಲ್ ಬಿಹಾರಿ ವಾಜಪೇಯಿ ಪ್ರಧಾನಮಂತ್ರಿಯಾಗಿದ್ದಾಗ ಮೊದಲ ಬಾರಿ ದೆಹಲಿಯಿಂದ ಲಾಹೋರ್​ಗೆ ಬಸ್ ಸೇವೆ ಪ್ರಾರಂಭಿಸಿದ್ದರು.

ಸುಪ್ರೀಂನಲ್ಲಿ ಅರ್ಜಿ ವಿಚಾರಣೆ

ಜಮ್ಮು-ಕಾಶ್ಮೀರದಲ್ಲಿ ವಿಧಿಸಿರುವ ಕರ್ಫ್ಯೂ ಹಾಗೂ ಇತರ ನಿರ್ಬಂಧಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ವಿಚಾರಣೆ ನಡೆಸಲಿದೆ. ಕಾಂಗ್ರೆಸ್ ಕಾರ್ಯಕರ್ತ ತೆಹಸೀನ್ ಪುನಾವಾಲಾ ಕೇಂದ್ರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ, ಎಂ.ಆರ್. ಷಾ, ಅಜಯ್ ರಸ್ತೋಗಿ ನೇತೃತ್ವದ ಪೀಠ ವಿಚಾರಣೆ ನಡೆಸಲಿದೆ.

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...