ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್ ಪಡೆ

bsf
Published on

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್) ಹೊಡೆದುರುಳಿಸಿದೆ.

ಬಿಎಸ್ಎಫ್ ಯೋಧರು ಶುಕ್ರವಾರ ತಡರಾತ್ರಿ ಪಾಕ್ ಗಡಿಯಲ್ಲಿ ಡ್ರೋನ್ ಹಾರಾಟ ನಡೆಸುತ್ತಿರುವುದನ್ನು ಪತ್ತೆ ಹಚ್ಚಿದ್ದರು. ಕೂಡಲೇ ಹಲವು ಸುತ್ತು ಗುಂಡು ಹಾರಿಸುವ ಮೂಲಕ ಡ್ರೋನ್ ಅನ್ನು ಹೊಡೆದುರುಳಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಡ್ರೋನ್ ಯಾವುದೇ ಶಸ್ತ್ರಾಸ್ತ್ರಗಳು ಅಥವಾ ಮಾದಕ ದ್ರವ್ಯಗಳನ್ನು ಬೀಳಿಸಲಿಲ್ಲ ಎಂದು ಖಚಿತಪಡಿಸಿಕೊಳ್ಳಲು ಗಡಿ ಹೊರಠಾಣೆ ಪ್ರದೇಶವನ್ನು ಸ್ವಚ್ಛಗೊಳಿಸಲು ಶನಿವಾರ ಬೆಳಗ್ಗೆ ರಾಮ್‌ಘರ್ ಸೆಕ್ಟರ್‌ನ ನಾರಾಯಣಪುರದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಅವರು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net