ಮುಗ್ಧರನ್ನೇಕೆ ಕೊಲ್ಲುತ್ತೀರಿ, ಕಾಶ್ಮೀರ ಲೂಟಿ ಮಾಡಿದ ಭ್ರಷ್ಟ ರಾಜಕಾರಣಿಗಳಿಗೆ ಗುಂಡಿಕ್ಕಿ ಎಂದು ಉಗ್ರರಿಗೆ ಕರೆಕೊಟ್ಟ ಜಮ್ಮುಕಾಶ್ಮೀರ ರಾಜ್ಯಪಾಲ

Latest News

ಕರ್ನಾಟಕದ 250 ಥಿಯೇಟರ್​ಗಳಲ್ಲಿ ದಬಂಗ್ ರಿಲೀಸ್!

ಡಿಸೆಂಬರ್ 20ಕ್ಕೆ ಸಲ್ಮಾನ್ ಖಾನ್ ನಟನೆಯ ‘ದಬಂಗ್ 3’ ಸಿನಿಮಾ ಬಿಡುಗಡೆ ಆಗುತ್ತಿದೆ. ಇಷ್ಟು ದಿನ ಹಿಂದಿ ಭಾಷೆಯಲ್ಲಷ್ಟೇ ಅಬ್ಬರಿಸುತ್ತಿದ್ದ ಸಲ್ಮಾನ್, ಈ...

ಕಾರು-ಲಾರಿ ಮುಖಾಮುಖಿ ಡಿಕ್ಕಿಯಲ್ಲಿ ಮದುಮಗ ಸ್ಥಳದಲ್ಲೇ ಸಾವು: ನಾಲ್ವರಿಗೆ ಗಾಯ

ಉತ್ತರಕನ್ನಡ: ಟ್ಯಾಂಕರ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಲ್ಲಿ ಮದುಮಗ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಯಲ್ಲಾಪುರ-ಹುಬ್ಬಳ್ಳಿ ರಸ್ತೆಯ ಕೆ.ಮಿಲನ್ ಹೊಟೆಲ್ ಬಳಿ ಭಾನುವಾರ ದುರ್ಘಟನೆ ಸಂಭವಿಸಿದೆ. ಅಫ್ರೋಜ್...

ಬಾಳಾಠಾಕ್ರೆಗೆ ಮೊದಲಬಾರಿಗೆ ಶ್ರದ್ಧಾಂಜಲಿ ಅರ್ಪಿಸಿದ ಕಾಂಗ್ರೆಸ್ ಮತ್ತು ಎನ್​ಸಿಪಿ

ಮುಂಬೈ: ಶಿವಸೇನೆ ಸಂಸ್ಥಾಪಕ ಹಾಗೂ ಪ್ರಖರ ಹಿಂದುತ್ವವಾದಿ ದಿವಂಗತ ಬಾಳಾಠಾಕ್ರೆಗೆ ಕಾಂಗ್ರೆಸ್​ ಹಾಗೂ ಎನ್​ಸಿಪಿ ಮೊದಲಬಾರಿಗೆ ಶ್ರದ್ಧಾಂಜಲಿ ಸಲ್ಲಿಸಿವೆ. ಬಾಳಾಠಾಕ್ರೆ ಅವರ 7 ನೇ...

ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಸರ್ಕಾರ ರಚನೆ ಪಕ್ಕಾ? ಕುತೂಹಲಕ್ಕೆ ಕಾರಣವಾಯ್ತು ಅಮಿತ್​ ಷಾ ಮಾತು…

ನವದೆಹಲಿ: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಬಗ್ಗೆ ಯಾವುದೇ ಆತಂಕ ಬೇಡ. ಅಲ್ಲಿ ಬಿಜೆಪಿ ಶಿವಸೇನೆಯೊಂದಿಗೆ ಸೇರಿ ಸರ್ಕಾರ ರಚನೆ ಮಾಡಲಿದೆ ಎಂದು ರಾಷ್ಟ್ರೀಯ ಅಧ್ಯಕ್ಷ ಅಮಿತ್​...

ಚಾಂಪಿಯನ್ ಪಟ್ಟ ಅಲಂಕರಿಸಿದ ಆರು ತಂಡ

ಸಣ್ಣುವಂಡ ಕಿಶೋರ್ ನಾಚಪ್ಪ ಪೊನ್ನಂಪೇಟೆಕೋದಂಡ ಎ.ಪೂವಯ್ಯ ಜ್ಞಾಪಕಾರ್ಥ ಹಾಕಿಕೂರ್ಗ್ ವತಿಯಿಂದ ಕರ್ನಾಟಕ ಪಬ್ಲಿಕ್ ಶಾಲಾ ಮೈದಾನದಲ್ಲಿ ಆಯೋಜಿಸಿದ್ದ ಪ್ರಾಥಮಿಕ, ಪ್ರೌಢಶಾಲಾ ಬಾಲಕ, ಬಾಲಕಿಯರ...

ಶ್ರೀನಗರ: ಜಮ್ಮುಕಾಶ್ಮೀರದ ರಾಜ್ಯಪಾಲ ಸತ್ಯ ಪಾಲ್​ ಮಲ್ಲಿಕ್​ ಅವರು ತಮ್ಮ ಒಂದು ಹೇಳಿಕೆಯಿಂದ ಬಹುದೊಡ್ಡ ವಿವಾದ ಸೃಷ್ಟಿಸಿದ್ದಾರೆ.

ಮುಗ್ಧ ಜನರನ್ನು, ಯೋಧರನ್ನು ಹತ್ಯೆ ಮಾಡುವ ಬದಲು ಭ್ರಷ್ಟ ರಾಜಕಾರಣಿಗಳಿಗೆ ಗುಂಡಿಟ್ಟು ಕೊಲ್ಲಿ ಎಂದು ಉಗ್ರರಿಗೆ ಕರೆ ನೀಡುವ ಮೂಲಕ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಭಾನುವಾರ ಕಾರ್ಗಿಲ್​ನಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಉಗ್ರರು ಭದ್ರತಾ ಪಡೆಗಳನ್ನು, ವಿಶೇಷ ಪೊಲೀಸ್​ ಅಧಿಕಾರಿಗಳನ್ನು ಕೊಲ್ಲುತ್ತಾರೆ. ಅವರನ್ನೇಕೆ ಕೊಲ್ಲುತ್ತೀರಿ? ಕಾಶ್ಮೀರವನ್ನು ಲೂಟಿ ಮಾಡುತ್ತಿರುವ ಭ್ರಷ್ಟ ರಾಜಕಾರಣಿಗಳನ್ನು ಕೊಲ್ಲಿ. ಎಂದಾದರೂ ಅವರನ್ನು ಹತ್ಯೆ ಮಾಡಿದ್ದೀರಾ? ಎಂದು ಪ್ರಶ್ನಿಸಿದರು. ಕಾಶ್ಮೀರದ ರಾಜಕೀಯ ಪಕ್ಷಗಳು ಇಲ್ಲಿನ ಜನರ ಹಣ, ಸಂಪತ್ತನ್ನು ಕೊಳ್ಳೆಹೊಡೆದು ಜಗತ್ತಿನಾದ್ಯಂತ ಆಸ್ತಿ ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಲ್ಲಿನ ದೊಡ್ಡ ರಾಜಕೀಯ ಪಕ್ಷಗಳ ಮುಖಂಡರ ಬಳಿ ಲೆಕ್ಕಕ್ಕೆ ಸಿಗದಷ್ಟು ಸಂಪತ್ತು ಇದೆ. ಅವರಿಗೆ ಶ್ರೀನಗರದಲ್ಲಿ ಮನೆಯಿಲ್ಲದೆ ಇರಬಹುದು. ಆದರೆ ದೆಹಲಿಯಲ್ಲಿ ಒಂದು, ದುಬೈನಲ್ಲಿ ಮತ್ತೊಂದು, ಲಂಡನ್​ನಲ್ಲಿ ಇನ್ನೊಂದು ಎಂದು ಹಲವು ಮನೆಗಳಿವೆ. ದೊಡ್ಡ ಐಷಾರಾಮಿ ಹೋಟೆಲ್​ಗಳ ಪಾಲುದಾರರೂ ಹೌದು ಎಂದು ಆರೋಪಿಸಿದರು.

ಅದಾದ ಬಳಿಕ ಕೊನೆಯಲ್ಲಿ, ಹಿಂಸಾಚಾರವನ್ನು ದೂರ ಇಡಿ ಎಂದು ಕೂಡ ಮಲ್ಲಿಕ್​ ಮನವಿ ಮಾಡಿದರು. ಹಾಗೇ ಭಾರತ ಸರ್ಕಾರ ಎಂದಿಗೂ ಬಂದೂಕಿನ ಎದುರು ತಲೆ ಬಾಗುವುದಿಲ್ಲ ಎಂದರು.
ಜಮ್ಮುಕಾಶ್ಮೀರ ರಾಜ್ಯಪಾಲರ ಈ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಉಮರ್​ ಅಬ್ದುಲ್ಲಾ ಟ್ವೀಟ್​ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯಪಾಲರು ಸಂವಿಧಾನ ದತ್ತವಾದ ಒಂದು ಜವಾಬ್ದಾರಿಯುತ ಹುದ್ದೆಯಲ್ಲಿದ್ದಾರೆ. ಅವರೀಗ ಭ್ರಷ್ಟ ರಾಜಕಾರಣಿಗಳನ್ನು ಕೊಲ್ಲಿ ಎಂದು ಉಗ್ರರಿಗೆ ಕರೆ ನೀಡುತ್ತಿದ್ದಾರೆ. ಹೀಗೆ ಹತ್ಯೆಗಳನ್ನು ಮಾಡುವಂತೆ ಪ್ರಚೋದಿಸುವ ಮೊದಲು ತನ್ನ ಸ್ಥಾನ ಏನೆಂಬುದನ್ನು ಅರಿಯಬೇಕು ಎಂದು ಉಮರ್​ ಅಬ್ದುಲ್ಲಾ ಟ್ವೀಟ್​ ಮಾಡಿದ್ದಾರೆ.

ಅಲ್ಲದೆ, ಇನ್ನು ಮುಂದೆ ಜಮ್ಮುಕಾಶ್ಮೀರದಲ್ಲಿ ಯಾವುದಾದರೂ ಖ್ಯಾತ ರಾಜಕಾರಣಿಗಳು ಹತ್ಯೆಯಾದರೆ ಇಲ್ಲಿನ ರಾಜ್ಯಪಾಲರ ಆದೇಶದ ಮೇರೆಗೇ ಆಗಿರುತ್ತದೆ ಎಂದು ಕಿಡಿಕಾರಿದ್ದಾರೆ.

- Advertisement -

Stay connected

278,530FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....