ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಅವರನ್ನು ರಾಜ್ಯ ಸರ್ಕಾರ ಸಾರ್ವಜನಿಕ ಭದ್ರತೆ ಕಾಯ್ದೆಯಡಿ ಬಂಧಿಸಿದೆ. ಶ್ರೀನಗರದಲ್ಲಿರುವ ಅವರ ನಿವಾಸವನ್ನೇ ತಾತ್ಕಾಲಿಕ ಜೈಲಾಗಿ ಪರಿವರ್ತಿಸಿ, ಅವರನ್ನು ಅಲ್ಲಿರಿಸಲಾಗಿದೆ.
ಫಾರೂಕ್ ಅಬ್ದುಲ್ಲಾ ಅವರ ತಂದೆ ಶೇಖ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರದ ಸಿಎಂ ಆಗಿದ್ದಾಗ ಸಾರ್ವಜನಿಕ ಭದ್ರತಾ ಕಾಯ್ದೆಯನ್ನು ಜಾರಿಗೊಳಿಸಲಾಗಿತ್ತು. ಈ ಕಾಯ್ದೆಯ ಪ್ರಕಾರ ಈ ಕಾಯ್ದೆಯಡಿ ಬಂಧಿತ ವ್ಯಕ್ತಿಯನ್ನು ಯಾವುದೇ ವಿಚಾರಣೆ ಇಲ್ಲದೆ 2 ವರ್ಷ ಜೈಲಿನಲ್ಲಿರಿಸಬಹುದಾಗಿದೆ.
ಎಂಡಿಎಂಕೆ ನಾಯಕ ವೈಕೋ ಜಮ್ಮು ಮತ್ತು ಕಾಶ್ಮೀರದ ಹಿರಿಯ ರಾಜಕೀಯ ಮಿತ್ರನನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಅವರನ್ನು ತಕ್ಷಣವೇ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚಿಸಬೇಕು ಎಂದು ಕೋರಿ ಸುಪ್ರೀಂಕೋರ್ಟ್ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ದಾಖಲಿಸಿದ್ದರು. ಸುಪ್ರೀಂಕೋರ್ಟ್ ಸೋಮವಾರ ಈ ಅರ್ಜಿಯ ವಿಚಾರಣೆ ನಡೆಸಬೇಕಿತ್ತು. ಇದಕ್ಕೆ ಕೆಲವೇ ನಿಮಿಷಗಳ ಮೊದಲು ಈ ಸಂಗತಿ ಬಹಿರಂಗಗೊಂಡಿತು. (ಏಜೆನ್ಸೀಸ್)