More

    ಜಮ್ಮು-ಕಾಶ್ಮೀರದಲ್ಲಿ 4.3 ತೀವ್ರತೆಯ ಭೂಕಂಪ

    ಕಾರ್ಗಿಲ್​: ಜಮ್ಮು-ಕಾಶ್ಮೀರದ ಕಾರ್ಗಿಲ್​ನ,ಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗ್ಗೆ 7:22ರ ಸುಮಾರಿಗೆ ಭೂಕಂಪ ಸಂಭವಿಸಿದೆ ಎಂದು ವರದಿಯಾಗಿದೆ.

    ಬೆಳಗ್ಗೆ 7:22ರ ಸುಮಾರಿಗೆ ಭೂಮಿ ಕಂಪಿಸಿರುವ ಬಗ್ಗೆ ರಾಷ್ಟ್ರೀಯ ಭೂಕಂಪನ ಕೇಂದ್ರವು ಭೂಕಂಪವನ್ನು ದೃಢಪಡಿಸಿದೆ ಮತ್ತು ಅದರ ತೀವ್ರತೆಯನ್ನು ಅಂದಾಜಿಸಿದೆ. ಕ್ಷಣವೇ ಜನರು ಮನೆಯಿಂದ ಹೊರಗೆ ಓಡಿಬಂದಿದ್ದಾರೆ. ಕಾರ್ಗಿಲ್‌ನಲ್ಲಿ ಹಠಾತ್ತನೆ ಹವಾಮಾನ ಹದಗೆಟ್ಟಿತು. ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ.

    ಕಳೆದ ಕೆಲವು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಪದೇ ಪದೇ ಭೂಕಂಪಗಳು ಕಂಡುಬರುತ್ತಿವೆ. ಮೇ 1 ರಂದು ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಮಧ್ಯರಾತ್ರಿ ಭೂಕಂಪದ ಅನುಭವವಾಗಿತ್ತು. ಆ ಸಮಯದಲ್ಲಿ ರಿಕ್ಟರ್ ಮಾಪಕದಲ್ಲಿ 3.4 ರ ತೀವ್ರತೆ ಕಂಡುಬಂದಿತ್ತು. ಬುಧವಾರ ರಾತ್ರಿ 1:33ಕ್ಕೆ ಭೂಕಂಪ ಸಂಭವಿಸಿದೆ ಎಂದು ಎನ್‌ಸಿಎಸ್ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts