More

    ಕಾಶ್ಮೀರದ ಪುಲ್ವಾಮಾ ಜಿಲ್ಲೆ ಬಳಿ ಮೂವರು ಉಗ್ರರ ಎನ್​ಕೌಂಟರ್​; ಶಸ್ತ್ರ, ಮದ್ದುಗುಂಡುಗಳು ವಶಕ್ಕೆ

    ಕಾಶ್ಮೀರ: ಪುಲ್ವಾಮಾ ಜಿಲ್ಲೆಯ ತ್ರಾಲ್​ ಎಂಬಲ್ಲಿ ಜಮ್ಮು ಕಾಶ್ಮೀರ ಪೊಲೀಸ್​ ಮತ್ತು ರಕ್ಷಣಾ ಪಡೆಗಳು ಮೂವರು ಉಗ್ರರನ್ನು ಹೊಡೆದುರುಳುಸಿವೆ.

    ಮೃತ ಉಗ್ರವಾದಿಗಳಿಂದ ಶಸ್ತ್ರಾಸ್ತ್ರ, ಮದ್ದು ಗುಂಡುಗಳು ವಶಪಡಿಸಿಕೊಳ್ಳಲಾಗಿದೆ. ಉಗ್ರರನ್ನು ಒಮರ್​ ಫಯಾಜ್​, ಅದಿಲ್​ ಬಷೀರ್​, ಫೈಜನ್​ ಹಮೀದ್​ ಎಂದು ಗುರುತಿಸಲಾಗಿದೆ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

    ಈ ಮೂವರು ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿದ್ದರು ಎನ್ನುವ ಬಗ್ಗೆ ದಾಖಲಾತಿ ಇದ್ದು, ಈ ಹಿಂದೆ ಇವರ ಬಗ್ಗೆ ದೂರುಗಳು ದಾಖಲಾಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

    ಇಂದು ಬೆಳಗ್ಗೆಯಿಂದಲೇ ಪೊಲೀಸರು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿತ್ತು. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts