

ಪುತ್ತೂರು ಗ್ರಾಮಾಂತರ: ರಾಷ್ಟ್ರೀಕೃತ ಬ್ಯಾಂಕ್ ಮತ್ತು ಖಾಸಗಿ ಬ್ಯಾಂಕ್ನಲ್ಲಿ ಖಾತೆ ಹೊಂದಿದವರಿಗೆ ವಿವಿಧ ಯೋಜನೆಗಳ ಮಾಹಿತಿ ಹಾಗೂ ವಿಮೆಗಳ ನೋಂದಣಿ ಕಾರ್ಯಕ್ರಮ ಜನಸುರಕ್ಷಾ ಕ್ಯಾಂಪ್ ಒಳಮೊಗ್ರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಅಧ್ಯಕ್ಷತೆಯಲ್ಲಿ ಶನಿವಾರ ನಡೆಯಿತು.
ಸಾಮಾಜಿಕ ಭದ್ರತಾ ಯೋಜನೆಗಳಾದ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ, ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆಗಳ ಕುರಿತು ಮಾಹಿತಿ ಹಾಗೂ ವಿಮೆಗಳ ನೋಂದಣಿ ನಡೆಯಿತು. ರೈತರ ಕಲ್ಯಾಣ ಯೋಜನೆಗಳ ಮಾಹಿತಿ ನೀಡಲಾಯಿತು.
ಕುಂಬ್ರ ಬ್ಯಾಂಕ್ ಆಫ್ ಬರೋಡಾದ ಮ್ಯಾನೇಜರ್ ಲಕ್ಷ್ಮೀಪತಿರಾಜು ಹಾಗೂ ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರದ ಆಪ್ತ ಸಮಾಲೋಚಕಿ ಗೀತ ವಿಜಯ್ ಮಾಹಿತಿ ನೀಡಿದರು. ಗ್ರಾಪಂ ಸದಸ್ಯ ಮಹೇಶ್ ಕೇರಿ ಉಪಸ್ಥಿತರಿದ್ದರು. ಗ್ರಾಪಂ ಅಭಿವೃದ್ಧಿ ಅಧಿಕಾರಿ ಮನ್ಮಥ ಅಜಿರಂಗಳ ಸ್ವಾಗತಿಸಿ, ವಂದಿಸಿದರು.