20ರಂದು ಬೆಂಗಳೂರಿನಲ್ಲಿ ಜನ ಚಳವಳಿಗಳ ಜನಾಗ್ರಹ ಸಮಾವೇಶ

raita sanga press meet

ಶಿವಮೊಗ್ಗ: ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ಪ್ರಶ್ನಿಸಿ ಮೇ 20ರಂದು ಬೆಂಗಳೂರಿನಲ್ಲಿ ಕರ್ನಾಟಕ ಸಂಯುಕ್ತ ಹೋರಾಟದ ಸಂಘಟನೆ ನೇತೃತ್ವದಲ್ಲಿ ಜನ ಚಳವಳಿಗಳ ಜನಾಗ್ರಹ ಸಮಾವೇಶ ನಡೆಸುವುದಾಗಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ ಹೇಳಿದರು.

blank

ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರ, ಕೊಟ್ಟ ಮಾತು ಮರೆತಿದೆ. ರೈತರ, ದಲಿತರ, ಕಾರ್ಮಿಕರ ಯಾವುದೇ ಸಮಸ್ಯೆಗಳನ್ನು ಬಗೆಹರಿಸಿಲ್ಲ. ರೈತ ಉತ್ಪನ್ನಗಳ ನೆಲೆ ಕುಸಿತವಾದರೂ ಖರೀದಿ ಕೇಂದ್ರಗಳನ್ನು ತೆರೆದಿಲ್ಲ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದರು.
ಸರ್ಕಾರ ಬದಲಾದರೂ ಸರ್ಕಾರಿ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ, ಸರ್ಕಾರಿ ಕಚೇರಿಗಳಲ್ಲಿ ಲಂಚವಿಲ್ಲದೆ ಕೆಲಸಗಳು ಆಗುತ್ತಿಲ್ಲ. ನೀರಾವರಿ ಯೋಜನೆಗಳಿಗೆ ಕಾಲಮಿತಿಯೊಳಗೆ ಹಣ ಬಿಡುಗಡೆ ಮಾಡುತ್ತಿಲ್ಲ, ಅಭಿವೃದ್ಧಿ ಶೂನ್ಯವಾಗಿದೆ. ಕಾರ್ಮಿಕರ ದುಡಿಮೆ ಅವಧಿಯನ್ನು 8ರಿಂದ 12 ಗಂಟೆಗೆ ಏರಿಕೆ ಮಾಡಿರುವುದನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದರೂ ಅದಕ್ಕೆ ಸರ್ಕಾರ ಸೊಪ್ಪು ಹಾಕಿಲ್ಲ. ಇಂತಹ ಸಮಯದಲ್ಲಿ ಸರ್ಕಾರದ ಸಾಧನಾ ಸಮಾವೇಶ ಯಾಕೆ ಎಂದು ಪ್ರಶ್ನಿಸಿದರು.
ಜನಶಕ್ತಿ ಕರ್ನಾಟಕ ಸಂಘಟನೆ ಮುಖಂಡ ಕೆ.ಎಲ್.ಅಶೋಕ್ ಮಾತನಾಡಿ, ರಾಜ್ಯ ಸರ್ಕಾರ ಸಾಧನಾ ಸಮಾವೇಶ ಮಾಡುವ ಬದಲಿಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸಿದ್ದೇವಾ ಎನ್ನುವುದನ್ನು ಮನನ ಮಾಡಿಕೊಳ್ಳಬೇಕಿದೆ. ಇದು ಭರವಸೆ ಸರ್ಕಾರ ಮಾತ್ರವಾಗಿದೆ. ಇದರ ವಿರುದ್ಧ ಹೋರಾಟ ರೂಪಿಸುವುದರ ಭಾಗವಾಗಿಯೇ ಜನ ಚಳವಳಿಗಳ ಜನಾಗ್ರಹ ಸಮಾವೇಶ ಆಯೋಜಿಸಲಾಗಿದೆ ಎಂದರು.
ಡಿಎಸ್‌ಎಸ್ ಮುಖಂಡ ಟಿ.ಎಚ್.ಹಾಲೇಶಪ್ಪ ಮಾತನಾಡಿ, ಎಸ್‌ಟಿಪಿ/ ಟಿಎಸ್‌ಪಿ ಕಾಯ್ದೆ 7ಡಿ ತೆಗೆಯಬೇಕು. ಪಿಟಿಸಿಎಲ್ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೆ ತರಬೇಕೆನ್ನುವ ನಮ್ಮ ಬೇಡಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ದಲಿತರ ಬಗ್ಗೆ ಅಸಡ್ಡೆ ತೋರುತ್ತಿದೆ. ಈ ಹಿನ್ನೆಲೆಯಲ್ಲಿ ಸಂಯುಕ್ತ ಹೋರಾಟ ಕರ್ನಾಟಕವು ಸರ್ಕಾರದ ಸಾಧನಾ ಸಮಾವೇಶ ಪ್ರಶ್ನಿಸಿ ಆಯೋಜಿಸಿರುವ ಜನಾಗ್ರಹ ಸಮಾವೇಶಕ್ಕೆ ದಲಿತ ಸಂಘಟನೆ ಎಲ್ಲ ರೀತಿಯ ಬೆಂಬಲ ನೀಡಲಿದೆ ಎಂದರು.
ರೈತ ಸಂಘ ಜಿಲ್ಲಾಧ್ಯಕ್ಷ ರಾಘವೇಂದ್ರ, ಮುಖಂಡರಾದ ಜಗದೀಶ್, ವಸಂತ್ ಕುಮಾರ್, ನಾರಾಯಣ ಮತ್ತು ಹನುಮಮ್ಮ ಸುದ್ದಿಗೋಷ್ಠಿಯಲ್ಲಿದ್ದರು.

Share This Article
blank

ತೂಕ ಇಳಿಸಿಕೊಳ್ಳಬೇಕೆಂದರೆ ಸಂಜೆ 7 ಗಂಟೆಯ ಮೊದಲು ಮಾತ್ರ ಊಟ ಮಾಡಿ! dinner

dinner :  ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕಾಗಿ ಅವರು ವ್ಯಾಯಾಮ…

ಹೊಳೆಯುವ ಚರ್ಮಕ್ಕಾಗಿ ಬಾಳೆಹಣ್ಣಿನ ಸಿಪ್ಪೆ! banana peel ಬಳಸುವ ಸರಳ ಮಾರ್ಗಗಳು ಇಲ್ಲಿವೆ…

 banana peel : ಬಾಳೆಹಣ್ಣನ್ನು ತಿನ್ನಲು ಇಷ್ಟಪಡುತ್ತಾರೆ. ಅನೇಕ ಜನರು ಬಾಳೆಹಣ್ಣಿನಿಂದ ವಿವಿಧ ರುಚಿಕರವಾದ ಸಿಹಿತಿಂಡಿಗಳನ್ನು ಸಹ…

blank