More

    ಜನಪದ ರಸೋತ್ಸವ ಕಾರ್ಯಕ್ರಮ

    ರಬಕವಿ/ಬನಹಟ್ಟಿ: ಕಲಾವಿದರ ಶ್ರೇಯೋಭಿವೃದ್ಧಿಗಾಗಿ ಕಸಾಪ, ಕಜಾಪ ಹಾಗೂ ಕರ್ನಾಟಕ ಬಯಲಾಟ ಅಕಾಡೆಮಿ ನಿರಂತರ ಶ್ರಮಿಸುತ್ತಿದ್ದು, ಕಲಾವಿದರು ಸಂಘಟನೆಗಳ ಜತೆ ಒಡನಾಟ ಹೊಂದಿ ತಮ್ಮಲ್ಲಿರುವ ಪ್ರತಿಭೆ ಹೊರಹೊಮ್ಮುವಂತೆ ಮಾಡಬೇಕು ಎಂದು ಕಸಾಪ ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಹೇಳಿದರು.

    ಕಸಾಪ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಘಟಕದ ಆಶ್ರಯದಲ್ಲಿ ಬನಹಟ್ಟಿಯ ಸರ್ಕಾರಿ ಪಪೂ ಕಾಲೇಜಿನಲ್ಲಿ ಗಂಗಾತನಯ ಅಪ್ಪಣ್ಣಪ್ಪ ಜಂಬಗಿ ಅವರ 96ನೇ ಪುಣ್ಯ ಸ್ಮರಣಾರ್ಥ ಸೋಮವಾರ ಹಮ್ಮಿಕೊಂಡಿದ್ದ ಜನಪದ ರಸೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ರಬಕವಿ-ಬನಹಟ್ಟಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅಕ್ಟೋಬರ್‌ನಲ್ಲಿ ಹಮ್ಮಿಕೊಳ್ಳಲಾಗುವುದು. ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳು, ಸಮಸ್ತ ಕನ್ನಡಿಗರು ಸಹಾಯ, ಸಹಕಾರ ನೀಡುವ ಮೂಲಕ ಯಶಸ್ವಿಗೊಳಿಸಬೇಕು. ಕನ್ನಡ ಕಟ್ಟುವ ಕಾರ್ಯದಲ್ಲಿ ಪ್ರತಿಯೊಬ್ಬ ಕನ್ನಡಿಗರು ಕೈಜೋಡಿಸಬೇಕು ಎಂದರು.

    ಹಿರಿಯ ಸಾಹಿತಿ, ಬನಹಟ್ಟಿಯ ಸಿದ್ದರಾಜ ಪೂಜಾರಿ ಮಾತನಾಡಿ, ಕಲಾವಿದರಿಗೆ ಸರ್ಕಾರ, ಅಕಾಡೆಮಿಗಳು, ಸಂಘ-ಸಂಸ್ಥೆಗಳು ಹೆಚ್ಚಿನ ಪ್ರೋತ್ಸಾಹ, ನೆರವು ನೀಡುವುದು ಅವಶ್ಯ ಎಂದರು.

    ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಬಸವರಾಜ ಹನಗಂಡಿ ಮಾತನಾಡಿದರು. ಕಸಾಪ ರಬಕವಿ-ಬನಹಟ್ಟಿ ತಾಲೂಕು ಘಟಕದ ಅಧ್ಯಕ್ಷ ಮ.ಕೃ.ಮೇಗಾಡಿ, ಚಂದ್ರಪ್ರಭಾ ಬಾಗಲಕೋಟ, ಶಾಂತಕ್ಕ ಮಂಡಿ, ಮೂಡಲಗಿಯ ಬಾಲಶೇಖರ ಬಂದಿ, ಕಸಾಪ ಸಂಘಟನಾ ಕಾರ್ಯದರ್ಶಿ ಮಹಾಶಾಂತ ಶೆಟ್ಟಿ ಅವರು ಕಲಾವಿದರಿಗೆ ಅಭಿನಂದನಾ ಪತ್ರ ವಿತರಿಸಿದರು. ದತ್ತಿ ದಾನಿ ಶರತ ಜಂಬಗಿ ಸ್ವಾಗತಿಸಿದರು. ಶ್ರೀಶೈಲ ಬುರ್ಲಿ, ಶೈಲಾ ಮಿರ್ಜಿ ನಿರೂಪಿಸಿದರು. ತೇರದಾಳ ವಲಯಾಧ್ಯಕ್ಷ ಗಂಗಾಧರ ಮೋಪಗಾರ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts