More

    ರೈತರಿಗೆ ಪ್ರತಿ ವರ್ಷ 15 ಸಾವಿರ ರೂ. ಕೊಡುತ್ತೇನೆ: ಜನಾರ್ದನ ರೆಡ್ಡಿ

    ಹಾವೇರಿ: ಬಡತನರೇಖೆಗಿಂತ ಕಡಿಮೆ ಇರುವ ರೈತರಿಗೆ ಪ್ರತಿ ವರ್ಷ 15 ಸಾವಿರ ಕೊಡುತ್ತೇನೆ. ಬಿತ್ತನೆ ಬೀಜ, ಗೊಬ್ಬರವನ್ನ ರೈತರ ಮನೆ ಬಾಗಿಲಿಗೆ ತಲುಪಿಸುತ್ತೇನೆ. ನಿಮ್ಮ ಆಶೀರ್ವಾದ ನನ್ನ ಮೇಲೆ ಇದ್ದರೆ ಜನಾರ್ದನ ರೆಡ್ಡಿ ಇತಿಹಾಸ ಮಾಡುತ್ತಾನೆಂದು ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.

    ಹಾನಗಲ್ ಪಟ್ಟಣದಲ್ಲಿ ನಡೆದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದ ಮೇಲೆ ನಿಮ್ಮ ಆಶೀರ್ವಾದ ಇರಲಿ. ಚಿಕ್ಕ ವಯಸ್ಸಿನಲ್ಲಿ ರಾಜಕೀಯ ಕ್ಷೇತ್ರಕ್ಕೆ ಬಂದಿದ್ದೇನೆ. 2008ರಲ್ಲಿ ಯಡಿಯೂರಪ್ಪ ಅವರನ್ನ ಸಿಎಂ ಮಾಡಿದ್ದು ಜನಾರ್ದನ ರೆಡ್ಡಿ ಎಂದು ಜನ ಮಾತನಾಡಿದ್ದರು.ನಾನು ಪ್ರಾರಂಭ ಮಾಡಿದ್ದ ಶಿವಮೊಗ್ಗ ವಿಮಾನ ನಿಲ್ದಾಣವನ್ನ ಪ್ರಧಾನಮಂತ್ರಿಗಳು ಉದ್ಘಾಟನೆ ಮಾಡಿದ್ದಾರೆಂದು ಹೇಳಿದ್ದಾರೆ.

    ಇದನ್ನೂ ಓದಿ: ಹಿಂದೂ ದೇವಾಲಯದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮುಸ್ಲಿಂ ಜೋಡಿ

    ಉತ್ತರ ಕರ್ನಾಟಕದಲ್ಲಿ ಇಂಚಿಂಚು ಭೂಮಿ ನೀರಾವರಿ ಮಾಡುವ ಕನಸು ಕಂಡಿದ್ದೇನೆ. ಮೂರು ಸರ್ಕಾರ ಬಂದರು ನೀರಾವರಿ ಯೋಜನೆ ಕೈಗೊಳ್ಳಲು ವಿಫಲವಾಗಿದ್ದಾರೆ. ಎಲ್ಲರು ನನ್ನವರು ಅಂತಾ ಭಾವಿಸಿದ್ದೇನೆ. ಮೀನನ್ನ ಬಲೆಯಲ್ಲಿ ಸಿಕ್ಕಿಸುವ ಹಾಗೆ ತಂತ್ರ ಮಾಡಿದ್ರು, 12 ವರ್ಷ ರಾಜಕೀಯದಿಂದ ದೂರ ಇಟ್ಟರು. ನನಗೆ ತೊಂದರೆ ಕೊಟ್ಟವರು ದಿನಕ್ಕೆ 20 ರಿಂದ 30 ಮಾತ್ರೆ ತೆಗೆದುಕೊಳ್ಳುತ್ತಿದ್ದಾರೆ. ನಾನು ಯಾವುದೇ ಮಾತ್ರೆ ತಗೊಳ್ಳದೆ ಚೆನ್ನಾಗಿದ್ದೇನೆ ಎಂದು ಹೇಳಿದ್ದಾರೆ.

    31 ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ. ನಾನು ಅಭ್ಯರ್ಥಿ ಘೋಷಣೆ ಮಾಡಿದ್ರೆ ಅಲ್ಲಿ ಪಕ್ಷ ಗೆಲ್ಲಲೇಬೇಕು. ಉತ್ತರ ಕರ್ನಾಟಕ ಅಭಿವೃದ್ಧಿ ಮಾಡಿ ಕೊನೆಯುಸಿರು ಬಿಡುತ್ತೇನೆಂದು ಹೇಳಿದ್ದಾರೆ.

    ಹಿಂದೂ ದೇವಾಲಯದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮುಸ್ಲಿಂ ಜೋಡಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts