ಬೆಂಗಳೂರು: ಲೋಕಸಭೆ ಚುನಾವಣೆಗೆ ಈಗಾಗಲೇ ರಾಜಕೀಯ ಪಕ್ಷಗಳು ತಯಾರಿ ಆರಂಭಿಸಿದ್ದು, ಯಾವ ಕ್ಷಣದಲ್ಲಿ ಬೇಕಾದರೂ ಚುಣಾವಣಾ ಆಯೋಗ ದಿನಾಂಕ ಘೋಷಿಸುವ ಸಾಧ್ಯತೆ ಇದೆ. ಲೋಕಸಬೆ ಚುನಾವಣೆಯ ಹೊಸ್ತಿಲಲ್ಲೇ ಗಂಗಾವತಿ ಕ್ಷೇತ್ರದ ಶಾಸಕ, ಕೆಆರ್ಪಿಪಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಕೇಂದ್ರ ಗೃಹ ಸಚಿವ ಅಮಿತ್ ಷಾರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಜನಾರ್ದನ ರೆಡ್ಡಿ ಹಾಗೂ ಅಮಿತ್ ಷಾ ಭೇಟಿ ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜರ್ನಾದನ ರೆಡ್ಡಿ ಬಿಜೆಪಿಯನ್ನು ಬೆಂಬಲಿಸಲಿದ್ದಾರಾ ಎಂದು ಕಾದು ನೋಡಬೇಕಿದೆ.
ಭಾರತ ರಾಷ್ಟ್ರದ ಕೇಂದ್ರ ಗೃಹಮಂತ್ರಿಗಳಾದ ಅಮಿತ್ ಶಾ ಜಿಯವರ ಆಹ್ವಾನದ ಮೇರೆಗೆ ನವದೆಹಲಿಯಲ್ಲಿ ಇಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷನಾಗಿ ಭೇಟಿ ಮಾಡಿ ಕರ್ನಾಟಕ ರಾಜ್ಯದ ಕೆಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದು ನನಗೆ ಬಹಳ ಸಂತೋಷವನ್ನು ತಂದಿದೆ.
— Gali Janardhana Reddy (@GaliJanardhanar) March 14, 2024
-ಗಾಲಿ ಜನಾರ್ಧನ ರೆಡ್ಡಿ. pic.twitter.com/Z3IUfc7MCC
ಇದನ್ನೂ ಓದಿ: ಐಪಿಎಲ್ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರ ನಡುವೆ ಶುರುವಾಯಿತು ಲೈಕ್ ವಾರ್; ಕಾರಣ ಹೀಗಿದೆ
ಭಾರತ ರಾಷ್ಟ್ರದ ಕೇಂದ್ರ ಗೃಹಮಂತ್ರಿಗಳಾದ ಅಮಿತ್ ಷಾ ಅವರ ಆಹ್ವಾನದ ಮೇರೆಗೆ ನವದೆಹಲಿಯಲ್ಲಿ ಇಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷನಾಗಿ ಭೇಟಿ ಮಾಡಿ ಕರ್ನಾಟಕ ರಾಜ್ಯದ ಕೆಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದು ನನಗೆ ಬಹಳ ಸಂತೋಷವನ್ನು ತಂದಿದೆ ಎಂದು ಜನಾರ್ದನ ರೆಡ್ಡಿ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
ಕಳೆದ ವರ್ಷ ನಡೆದ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯಿಂದ ಜನಾರ್ದನ ರೆಡ್ಡಿ ಗಂಗಾವತಿ ಕ್ಷೇತ್ರದ ಟಿಕೆಟ್ ಬಯಸಿದ್ದರು. ಆದರೆ, ಬಿಜೆಪಿ ಹೈಕಮಾಂಡ್ ಜರ್ನಾದನ ರೆಡ್ಡಿ ಆಸೆಗೆ ಮಣೆ ಹಾಕದ ಕಾರಣ ಅವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಸ್ಥಾಪಿಸಿದ್ದರು. ಕೆಲ ದಿನಗಳ ಹಿಂದೆ ನಡೆದ ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ಜನಾರ್ದನ ರೆಡ್ಡಿ ಕಾಂಗ್ರೆಸ್ ಬೆಂಬಲಸಿದ್ದರು. ಆದರೆ, ಇದೀಗ ಏಕಾಏಕಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.