ಬೆಳ್ತಂಗಡಿ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಪೌರ್ಣಮಿಯಂದು ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರ ನೇತೃತ್ವದಲ್ಲಿ ಅರ್ಚಕ ಶ್ರೀನಿವಾಸ ಹೊಳ್ಳ ಮತ್ತು ರಾಮಚಂದ್ರ ಹೊಳ್ಳರ ಧಾರ್ಮಿಕ ಪೂಜಾ ವಿಧಿಗಳೊಂದಿಗೆ ಶ್ರೀ ಜನಾರ್ದನ ಸ್ವಾಮಿ ಹಾಗೂ ಪರಿವಾರ ದೇವರ ಸನ್ನಿಧಿಯಲ್ಲಿ ಕಾರ್ತಿಕ ದೀಪೋತ್ಸವ ಪ್ರಯುಕ್ತ ರಂಗಪೂಜೆ, ಬಲಿ ಉತ್ಸವ ನಡೆಯಿತು.
ಭಕ್ತರು ದೇವಸ್ಥಾನದ ಸುತ್ತ ಹಣತೆ ಬೆಳಗಿಸಿದರು. ರಥಬೀದಿಯಲ್ಲಿ ಸುಡುಮದ್ದು ಪ್ರದರ್ಶನ ನಡೆಯಿತು. ಜಯರಾಮ ಪಡ್ಡಿಲ್ಲಾಯ, ಡಾ.ಎಂ.ಪಿ.ಶ್ರೀನಾಥ್, ಡಾ.ಬಿ.ಎ. ಕುಮಾರ ಹೆಗ್ಡೆ, ಮೋಹನ ಶೆಟ್ಟಿಗಾರ್, ಪದ್ಮನಾಭ ಶೆಟ್ಟಿಗಾರ್, ಭರತ್ ಕುಮಾರ್, ಭಕ್ತರು ಭಾಗವಹಿಸಿದ್ದರು.