More

    ಜನಾರೋಗ್ಯ ಯೋಜನೆಯಿಂದ ಬಡವರಿಗೆ ಅನುಕೂಲ

    ಮಾನ್ವಿ: ಪ್ರತಿಯೊಬ್ಬರೂ ಆರೋಗ್ಯ ಇಲಾಖೆ ಯೋಜನೆಗಳ ಸೌಲಭ್ಯ ಪಡೆದುಕೊಳ್ಳಬೇಕು. ಯುವಕರು ಸಮಾಜ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ಹೇಳಿದರು.

    ಅಡವಿ ಅಮರೇಶ್ವರ ದೇವಸ್ಥಾನದ ಸಮುದಾಯ ಭವನದಲ್ಲಿ ಕಲ್ಮಠ ಕಾಲೇಜು, ಎನ್‌ಎಸ್‌ಎಸ್ ಘಟಕ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದರು. ಆಯುಷ್ಮಾನ್ ಭಾರತ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆ ಬಹಳಷ್ಟು ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ನೆರವಾಗಿದೆ. ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ವರ್ಷಕ್ಕೆ 5 ಲಕ್ಷ ರೂಪಾಯಿವರೆಗೆ ಹಾಗೂ ಎಪಿಎಲ್ ಫಲಾನುಭವಿಗಳಿಗೆ 1.50 ಲಕ್ಷ ರೂ.ವರೆಗೆ ವೈದ್ಯಕೀಯ ಶಸ್ತ್ರಚಿಕಿತ್ಸೆ ಸೌಲಭ್ಯ ದೊರೆಯಲಿದೆ. ಸರ್ಕಾರದಿಂದ ನೊಂದಾಯಿತ ಖಾಸಗಿ ಆಸ್ಪತ್ರೆ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಸೇವೆಗಳನ್ನು ನೀಡಲಾಗುತ್ತಿದೆ. ಪ್ರತಿಯೊಬ್ಬರೂ ಆಯುಷ್ಮಾನ್ ಭಾರತ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆ ಕಾರ್ಡ್ ಪಡೆಯಬೇಕು ಎಂದರು.

    ಜಿಲ್ಲಾ ಉಪ ಆರೋಗ್ಯ ಶಿಕ್ಷಣ ಅಧಿಕಾರಿ ಬಸ್ಸಯ್ಯ ಮಾತನಾಡಿ, ಸರ್ಕಾರಿ ಆಸ್ಪತ್ರೆಯಲ್ಲಿ ಅಸಾಂಕ್ರಮಿಕ ರೋಗಗಳ ತಪಾಸಣೆ ಮಾಡಿಸಿಕೊಳ್ಳಬೇಕು. ಸಾರ್ವಜನಿಕರು ಆಧಾರ್ ಕಾರ್ಡ್ ಮೂಲಕ ಆಯುಷ್ಮಾನ್ ಭಾರತ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆ ಕಾರ್ಡ್ ಪಡೆಯಬೇಕೆಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts