

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಛೇರಿ ಮಂಗಳೂರು, ತಾಲೂಕು ಆರೋಗ್ಯಾಧಿಕಾರಿ ಕಛೇರಿ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ - 2024 ಪುರಭವನದಲ್ಲಿ ಶನಿವಾರ ಬೆಳಗ್ಗೆ 10ಕ್ಕೆ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಅಶೋಕ್ ಕುಮಾರ್ ರೈ ನಡೆಸಲಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ನಮಿತಾ ನಾಯ್ಕ್ ಭಾಗವಹಿಸಲಿದ್ದಾರೆ. ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್. ಆರ್. ತಿಮ್ಮಯ್ಯ, ತಹಸೀಲ್ದಾರ ಪುರಂದರ ಹೆಗ್ಡೆ ಮತ್ತಿತರರು ಭಾಗವಹಿಸಲಿದ್ದಾರೆ.