ಆಂಧ್ರ ಚುನಾವಣೆ: ಜನಸೇನಾ ಸಂಸ್ಥಾಪಕ ಪವನ್ ಕಲ್ಯಾಣ್ ಆಸ್ತಿಯ ಮೌಲ್ಯ ಎಷ್ಟು ಗೊತ್ತಾ…?

pk

ಅಮರಾವತಿ: ಜನಸೇನಾ ಸಂಸ್ಥಾಪಕ ಮತ್ತು ನಟ ಪವನ್ ಕಲ್ಯಾಣ್ 164.53 ಕೋಟಿ ರೂ. ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಯನ್ನು ಹೊಂದಿದೆ ಎಂದು ಘೋಷಿಸಿಕೊಂಡಿದ್ದಾರೆ. ಆದರೆ ಕಳೆದ ನಾಲ್ಕು ವರ್ಷಗಳಲ್ಲಿ ಅವರ ಆದಾಯ ಸುಮಾರು 60 ಕೋಟಿ ರೂ. ಹೆಚ್ಚಾಗಿದೆ.

ಇದನ್ನೂ ಓದಿ: ತೆಲಂಗಾಣದಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ, ಮದುವೆಗೆ ಹೊರಟಿದ್ದ 65 ಮಂದಿ ಪ್ರಾಣಾಪಾಯದಿಂದ ಪಾರು!

ವಿಧಾನಸಭೆ ಚುನಾವಣೆಗೆ ಆಂಧ್ರಪ್ರದೇಶ ಪಿಠಾಪುರಂ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಬಳಿಕ ಪವನ್​ ಕಲ್ಯಾಣ್ ತಮ್ಮ ಆಸ್ತಿಯನ್ನು ಘೋಷಣೆ ಮಾಡಿದ್ದಾರೆ. ಚುನಾವಣಾ ಅಧಿಕಾರಿಗಳು ಸಲ್ಲಿಸಿದ ಅಫಿಡವಿಟ್​ ಪ್ರಕಾರ ಪವನ್​ ಕಲ್ಯಾಣ್ ಅವರು 65.77 ಕೋಟಿ ರೂ. ಮೌಲ್ಯದ ಸ್ವತ್ತನ್ನು ಘೋಷಿಸಿಕೊಂಡಿದ್ದಾರೆ.

ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿದ ಅಫಿಡವಿಟ್ ಪ್ರಕಾರ, ಪವನ್ ಕಲ್ಯಾಣ್ 65.77 ಕೋಟಿ ರೂ.ಗಳಷ್ಟು ಹೊಣೆಗಾರಿಕೆ ಹೊಂದಿದ್ದಾರೆ. ನಾಲ್ವರು ಮಕ್ಕಳು ಒಳಗೊಂಡಂತೆ ಅವರ ಕುಟುಂಬವು 46.17 ಕೋಟಿ ರೂಪಾಯಿ ಮೌಲ್ಯದ ಚರ ಆಸ್ತಿ ಮತ್ತು 118.36 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಯನ್ನು ಹೊಂದಿದೆ. 2018-19ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್‌ನಲ್ಲಿ 1.10 ಕೋಟಿ ರೂಪಾಯಿ ನಷ್ಟವನ್ನು ತೋರಿಸಿದ್ದರು.

ಪವನ್ ಕಲ್ಯಾನ್ ಬಳಿ ಒಂದು ಹರ್ಲಿ ಡೇವಿಡ್ಸನ್ ಬೈಕ್ ಮತ್ತು ರೇಂಜ್ ರೋವರ್ ಸೇರಿದಂತೆ 11 ವಾಹನಗಳನ್ನು ಹೊಂದಿದ್ದಾರೆ. 1984 ರಲ್ಲಿ ಹತ್ತನೇ ತರಗತಿ ಉತ್ತೀರ್ಣರಾದ ಕಲ್ಯಾಣ್ ಅವರು ಪ್ರಚೋದನಕಾರಿ ಭಾಷಣಗಳು ಮತ್ತು ಸಂಚಾರ ನಿಯಮ ಉಲ್ಲಂಘಿಸಿದ್ದು ಅವರ ವಿರುದ್ಧ ಒಟ್ಟು 8 ಪ್ರಕರಣಗಳು ಪವನ್ ಕಲ್ಯಾಣ್​ ಮೇಲಿದೆ.

175 ವಿಧಾನಸಭೆ ಸದಸ್ಯ ಬಲ ಮತ್ತು 25 ಲೋಕಸಭಾ ಕ್ಷೇತ್ರಗಳಲ್ಲಿರುವ ಆಂಧ್ರಪ್ರದೇಶದಲ್ಲಿ ಮೇ 13 ರಂದು ಏಕಕಾಲದಲ್ಲಿ ಮತದಾನ ನಡೆಯಲಿದ್ದು ಜೂನ್​ 4 ರಂದು ಮತ ಎಣಿಕೆ ನಡೆಯಲಿದೆ.

ಆಂಧ್ರಪ್ರದೇಶದ ಪೀಠಾಪುರಂ ವಿಧಾನಸಭಾ ಕ್ಷೇತ್ರದಿಂದ ಪವನ್ ಕಲ್ಯಾಣ್ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಎನ್‌ಡಿಎ ಮೈತ್ರಿ ಪಕ್ಷಗಳ ನಡುವಿನ ಸೀಟು ಹಂಚಿಕೆ ಒಪ್ಪಂದದ ಭಾಗವಾಗಿ, ಟಿಡಿಪಿಗೆ 144 ಅಸೆಂಬ್ಲಿ ಮತ್ತು 17 ಲೋಕಸಭಾ ಕ್ಷೇತ್ರಗಳನ್ನು ಹಂಚಿಕೆ ಮಾಡಲಾಗಿದ್ದು, ಬಿಜೆಪಿ ಆರು ಲೋಕಸಭೆ ಮತ್ತು 10 ವಿಧಾನಸಭೆ ಸ್ಥಾನಗಳನ್ನು ಸ್ಪರ್ಧಿಸಲಿದೆ. ಜನಸೇನಾ ಎರಡು ಲೋಕಸಭೆ ಮತ್ತು 21 ವಿಧಾನಸಭಾ ಸ್ಥಾನಗಳಲ್ಲಿ ಕಣಕ್ಕಿಳಿಯಲಿದೆ.

ಬಿಜೆಪಿಗೆ ಮತ ನೀಡಿ, ಮಮತಾ ಬ್ಯಾನರ್ಜಿ ಗೂಂಡಾಗಳನ್ನು ತಲೆ ಕೆಳಗಾಗಿ ನೇತು ಹಾಕ್ತೀವಿ: ಅಮಿತ್ ಷಾ

Share This Article

ಭಗವಂತ ಶ್ರೀರಾಮನ ಜೀವನದ ಈ 5 ತತ್ವವನ್ನು ಅಳವಡಿಸಿಕೊಳ್ಳಿ | Success Tips

ಭಾರತದಲ್ಲಿ ಶ್ರೀರಾಮನನ್ನು ಅತಿ ಹೆಚ್ಚು ಪೂಜಿಸಲಾಗುತ್ತದೆ. ಲಂಕಾದ ರಾವಣನ ಮೇಲೆ ಶ್ರೀರಾಮನ ವಿಜಯವನ್ನು ಇಂದಿಗೂ ದಸರಾ…

ಅತಿಯಾಗಿ ಯೋಚಿಸುವುದನ್ನು ನಿಲ್ಲಿಸಿ! ಸೈಲೆಂಟ್ ಆಗಿ ನಿಮ್ಮನ್ನು ಕಿಲ್ಲ ಮಾಡುತ್ತೆ Over Thinking ಅಭ್ಯಾಸ…

ಬೆಂಗಳೂರು:  ಇಂದಿನ ಬಿಡುವಿಲ್ಲದ ಜೀವನದಲ್ಲಿ ನಾವೆಲ್ಲರೂ ಸಣ್ಣ ಪುಟ್ಟ ವಿಚಾರಗಳನ್ನು ಹೆಚ್ಚು ಯೋಚಿಸುತ್ತೇವೆ ( Over…

ಹೆಂಗಸರು ಪ್ರತಿದಿನ ಹೂವು ಮುಡಿಯುವುದರಿಂದ ಆಗುವ ಲಾಭಗಳೇನು?…Wearing Flower

ಬೆಂಗಳೂರು:  ಹೆಣ್ಣುಮಕ್ಕಳು ತಲೆಗೆ ಎಣ್ಣೆ ಹಚ್ಚಿ, ತಲೆ ಬಾಚಿಕೊಂಡು, ನೀಟಾಗಿ ಹೆಣೆದು, ಹೂವಿನಿಂದ ( Wearing…