Thursday, 13th December 2018  

Vijayavani

ಕಬ್ಬು ದರ ಬಾಕಿ ನೀಡಲು ರೈತರ ಆಗ್ರಹ -ಸುವರ್ಣ ಸೌಧದಕ್ಕೆ ಮುತ್ತಿಗೆ ಯತ್ನ - ಪೊಲೀಸರೊಂದಿಗೆ ಅನ್ನದಾತರ ಜಟಾಪಟಿ        ರಾಜಸ್ಥಾನ ಸಿಎಂ ಆಗಿ ಗೆಹ್ಲೋಟ್ ಹೆಸರು ಫೈನಲ್ - ರಾಹುಲ್ ಆಪ್ತ ಸಚಿನ್ ಪೈಲಟ್​ಗೆ ಡಿಸಿಎಂ ಪಟ್ಟ - ಅಧಿಕೃತ ಘೋಷಣೆ ಬಾಕಿ        ಬಳ್ಳಾರಿಯ ಮೈಲಾರದಲ್ಲಿ ಗೊರವಯ್ಯನ ಗಲಾಟೆ - ಸಣ್ಣಪ್ಪ ಮಲ್ಲಪ್ಪನವರಿಗೆ ಗೊರವಯ್ಯನ ದೀಕ್ಷೆ ಕೊಟ್ಟಿದ್ದಕ್ಕೆ ವಿರೋಧ         ಟ್ರಿನಿಟಿ ಸರ್ಕಲ್​​ನಲ್ಲಿ ಮೆಟ್ರೋ ಪಿಲ್ಲರ್ ಬಿರುಕು - ಜೀವದ ಜತೆ ಚೆಲ್ಲಾಟ ಬೇಡ - ದಿಗ್ವಿಜಯ ನ್ಯೂಸ್ ಜತೆ ಎಕ್ಸ್​​ಪರ್ಟ್​​ಗಳ ಮಾತು        ತಿರುವನಂತಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ -ಹಿಂಸಾಚಾರಕ್ಕೆ ಯತ್ನ, ಪೊಲೀಸರಿಂದ ಲಾಠಿಚಾರ್ಜ್       
Breaking News

ರಾಗಾ 2ನೇ ದಿನದ ಯಾತ್ರೆ: ಮೈಸೂರು, ಮಂಡ್ಯದಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿ

Sunday, 25.03.2018, 8:10 AM       No Comments

ಮೈಸೂರು: ಹಳೇ ಮೈಸೂರು ಭಾಗದಲ್ಲಿ ಜನಾಶೀರ್ವಾದ ಯಾತ್ರೆ ಕೈಗೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಭಾನುವಾರ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದು, ಮತದಾರರನ್ನು ಸೆಳೆಯಲು ಪ್ರಯತ್ನಿಸಲಿದ್ದಾರೆ.

ನಾಲ್ಕನೇ ಜನಾಶೀರ್ವಾದ ಯಾತ್ರೆಯ ಮೊದಲ ದಿನವಾದ ಶನಿವಾರ ರಾಹುಲ್​ ಮೈಸೂರು, ಚಾಮರಾಜನಗರ ಮತ್ತು ಮಂಡ್ಯದಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದಾರೆ. ಎರಡನೇ ದಿನವಾದ ಭಾನುವಾರ ಬೆಳಗ್ಗೆ 8.30 ರಿಂದ 9.30ರವರೆಗೆ ಕಾಂಗ್ರೆಸ್​ ಬ್ಲಾಕ್​ ಅಧ್ಯಕ್ಷರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ.

ಸಭೆಯ ಬಳಿಕ ರಾಹುಲ್​ ಗಾಂಧಿ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಚೀಕನಹಳ್ಳಿಗೆ ತೆರಳಿ ನಿನ್ನೆ ಮೃತಪಟ್ಟಿದ್ದ ಕಾಂಗ್ರೆಸ್​ ಶಾಸಕ ರುದ್ರೇಶ್​ ಗೌಡ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲಿದ್ದಾರೆ. ಆ ನಂತರ ರಾಹುಲ್​ ಮಂಡ್ಯ ಜಿಲ್ಲೆಯ ಮೇಲುಕೋಟೆ, ಕೆ.ಆರ್​.ಪೇಟೆ, ಪಾಂಡವಪುರ, ಶ್ರೀರಂಗಪಟ್ಟಣದಲ್ಲಿ ರೋಡ್​ ಶೋ ನಡೆಸಲಿದ್ದಾರೆ.

ಸಂಜೆ ವೇಳೆಗೆ ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ರಾಹುಲ್​ ಒಂದು ಗಂಟೆ ರೋಡ್​ ಶೋ ನಡೆಸಲಿದ್ದು, ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿರುವ ಬೃಹತ್​ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ ಮೈಸೂರು ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಲಿದ್ದಾರೆ.

Leave a Reply

Your email address will not be published. Required fields are marked *

Back To Top