More

    ಸದ್ಯದಲ್ಲೇ ಜನತಾ ದರ್ಶನ ಕಾರ್ಯಕ್ರಮ

    ಹನಗೋಡು: ಹೋಬಳಿಯ ಕರಣಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಗಾಲು, ಹರೀನಹಳ್ಳಿ, ಕಲ್ಕಡ ಗ್ರಾಮಗಳಿಗೆ ಶಾಸಕ ಜಿ.ಡಿ.ಹರೀಶ್ ಗೌಡ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

    ಮನೆ ಜಾಗದ ಇ-ಸ್ವತ್ತು , ಬಗರ್‌ಹುಕುಂ ಯೋಜನೆಯಡಿ ಸಲ್ಲಿಸಿರುವ ನಮೂನೆ-57ರ ಅರ್ಜಿ ಸಮಸ್ಯೆ ನಕಾಶೆಯಲ್ಲಿರುವಂತೆ ಓಡಾಡಲು ಕಾಲು ದಾರಿ ತೆರವು ಹಾಗೂ ಒತ್ತುವರಿಯಾಗಿರುವ ಸ್ಮಶಾನ ಜಾಗವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಶಾಸಕರಿಗೆ ಮನವಿ ಮಾಡಿದರು.

    ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ಜಿ.ಡಿ.ಹರೀಶ್‌ಗೌಡ, ಗ್ರಾಮೀಣ ಜನರು ಸಮಸ್ಯೆಗಳನ್ನು ಹೊತ್ತು ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು, ಜನಸಾಮಾನ್ಯರ ಮನೆ ಬಾಗಿಲಿಗೆ ತೆರಳಿ ಸಮಸ್ಯೆ ಪರಿಹರಿಸುವ ಉದ್ದೇಶದಿಂದ ಜನತಾ ದರ್ಶನ ಕಾರ್ಯಕ್ರಮವನ್ನು ಸದ್ಯದಲ್ಲೇ ಹಮ್ಮಿಕೊಳ್ಳಲಾಗುವುದು. ತಾಲೂಕಿನ ಹಲವು ಗ್ರಾಮಗಳಲ್ಲಿ ಇ-ಸ್ವತ್ತು ಸಮಸ್ಯೆಯಿಂದ ಜಮೀನು ಮಾರಾಟ, ಖರೀದಿಗೆ ತೊಂದರೆಯಾಗಿದೆ. ಇದರಿಂದ ಬ್ಯಾಂಕ್‌ಗಳಿಂದ ಸಾಲ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ. ತಾಲೂಕಿನಲ್ಲಿ ಕೃಷಿ ಮತ್ತು ಅರಣ್ಯ ಭೂಮಿ ವ್ಯಾಪ್ತಿ ಕುರಿತು ಸಾಕಷ್ಟು ಗೊಂದಲಗಳಿದ್ದು ಬಗೆಹರಿಸಲು ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದರು.

    ಹಲವು ಗ್ರಾಮಗಳಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಆರಂಭಿಸಬೇಕಿದೆ. ರೈತರಿಗೆ ಸಂಬಂಧಪಟ್ಟ ದಾಖಲೆಗಳನ್ನು ಒದಗಿಸುವ ಪ್ರಯತ್ನ ಮಾಡುತ್ತಿದ್ದೇವೆ. ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಮಳೆ ಇಲ್ಲದೆ ಬೆಳೆ ಹಾನಿಯಾಗಿದೆ. ಸರ್ಕಾರದಿಂದ ಬೆಳೆಹಾನಿ ಪರಿಹಾರ ಕೊಡಿಸಲು ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

    ಜೆಡಿಎಸ್ ಮುಖಂಡರಾದ ರಂಜಿತಾ ಚಿಕ್ಕಮಾದು, ಹರವೆ ಶ್ರೀಧರ್, ಪ್ರಭಾಕರ್ ಆರಾಧ್ಯ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಪಾಪಣ್ಣ, ಪುಟ್ಟರಾಜು, ಸೋಮಶೇಖರ್, ಮುಖಂಡರಾದ ಆನಂದ್, ನಟೇಶ್ ಆರಾಧ್ಯ, ಪಿಡಿಒ ಪ್ರದೀಪ್, ಷಡಕ್ಷರಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts