ಉಸ್ತುವಾರಿ ಸಚಿವರಿಂದ ಸಾರ್ವಜನಿಕ ಅಹವಾಲು ಸ್ವೀಕಾರ

mng-4june-kinnigoli
Published on


ಮಂಗಳೂರು : ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬುಧವಾರ ಕಿನ್ನಿಗೋಳಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಿದರು.
ಕಿನ್ನಿಗೋಳಿ ಚರ್ಚ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ‘ ರಾಜ್ಯದ ಎಲ್ಲಾ ತಾಲೂಕು ಮತ್ತು ಹೋಬಳಿ ಕೇಂದ್ರಗಳಲ್ಲಿ ಜನತಾದರ್ಶನ ನಡೆಸಿ ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ ಎಂದರು.
ಜನತಾದರ್ಶನದಲ್ಲಿ ಸ್ವೀಕರಿಸಿದ ಸಾರ್ವಜನಿಕ ಅಹವಾಲುಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು ಮತ್ತು ಪರಿಹಾರ ಕ್ರಮಗಳನ್ನು ಒದಗಿಸಬೇಕು. ಅಭಿವೃದ್ಧಿಯಲ್ಲಿ ಎಲ್ಲಾ ಪ್ರದೇಶಗಳನ್ನು ಸಮಾನವಾಗಿ ಕಾಣಲಾಗುವುದು. ಕೊರತೆಗಳಿದ್ದರೆ ಅವುಗಳನ್ನು ಸರಿಪಡಿಸಲಾಗುವುದೆಂದು ಸಚಿವರು ತಿಳಿಸಿದರು.
ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಎಂಎಲ್‌ಸಿ ಮಂಜುನಾಥ ಭಂಡಾರಿ, ಮಾಜಿ ಸಚಿವ ಅಭಯ ಚಂದ್ರ, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್, ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್, ಜಿಪಂ ಉಪ ಕಾರ್ಯದರ್ಶಿ
ಜಯಲಕ್ಷ್ಮಿ, ಮೂಡುಬಿದಿರೆ ಪುರಸಭೆ ಅಧ್ಯಕ್ಷೆ ಜಯಶ್ರೀ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net