More

    ಬಾಯ್‌ಫ್ರೆಂಡ್ ಜತೆ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬಂದ ನಟಿ ಜಾನ್ವಿ ಕಪೂರ್!

    ಮುಂಬೈ: ಬಾಲಿವುಡ್​​ ನಟಿ ಜಾನ್ವಿ ಕಪೂರ್​​ ಅವರು ಸಿನಿಮಾಗಳಿಗಿಂತ ಹೆಚ್ಚಾಗಿ ವೈಯಕ್ತಿಕ ವಿಚಾರಗಳ ಕುರಿತಾಗಿ ಹೆಚ್ಚಾಗಿ ಸುದ್ದಿಯಲ್ಲಿರುತ್ತಾರೆ. ಜಾನ್ವಿ ಮತ್ತು ಶಿಖರ್ ಪಹಾರಿಯಾ ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ.

    ಜಾನ್ವಿ ಕಪೂರ್ ಬಾಯ್‌ಫ್ರೆಂಡ್ ಶಿಖರ್ ಪಹಾರಿಯಾ ಜೊತೆ ತಿರುಪತಿ ದೇವಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಜಾನ್ವಿ ಮತ್ತು ಶಿಖರ್ ಪಹಾರಿಯಾ ಇಬ್ಬರೂ ತಿರುಪತಿಗೆ ಭೇಟಿ ನೀಡಿರುವ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಇಂದು ಬೆಳ್ಳಂಬೆಳಗ್ಗೆ ಜಾನ್ವಿ ಮತ್ತು ಶಿಖರ್ ಪಹಾರಿಯಾ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ ವೆಂಕಟೇಶ್ವರನಿಗೆ ಪ್ರಾರ್ಥನೆ ಸಲ್ಲಿಸಿದರು. ಜಾನ್ವಿ ಕಪೂರ್ ಹಸಿರು ಮತ್ತು ಪಿಂಕ್ ಬಣ್ಣದ ದಾವಣಿಯಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

    ಇದನ್ನೂ ಓದಿ: ಎದೆ ಹಾಲಿನ ಬಣ್ಣದಿಂದ ಪತ್ತೆಯಾಯ್ತು ಕ್ಯಾನ್ಸರ್; 40 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಹಿಳೆಯರಲ್ಲಿ ಕಂಡುಬರುತ್ತದೆ ಈ ರೋಗ! 
    ಜಾನ್ವಿ ಮತ್ತು ಶಿಖರ್ ಪಹಾರಿಯಾ ಜತೆ ಬ್ರೇಕಪ್ ಮಾಡಿಕೊಂಡು ದೂರವಾಗಿದ್ದಾರೆ ಎನ್ನಲಾಗಿತ್ತು. ಇದೀಗ ಇಬ್ಬರೂ ಮತ್ತೆ ಒಂದಾಗಿದ್ದು, ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚಿಗಷ್ಟೆ ನಡೆದ ನೀತಾ ಅಂಬಾನಿ ಅವರ ಕಾರ್ಯಕ್ರಮದಲ್ಲೂ ಇಬ್ಬರೂ ಜೋಡಿಯಾಗಿ ಕಾಣಿಸಿಕೊಂಡಿದ್ದರು. ಇದೀಗ ತಿರುಪತಿಗೆ ಭೇಟಿ ನೀಡುವ ಮೂಲಕ ಮತ್ತೆ ಇವರ ಪ್ರೀತಿ ಸಖತ್​ ಸುದ್ದಿಯಲ್ಲಿದೆ.

    ನೋ ಬಾಲ್‌ ಕೊಟ್ಟಿದ್ದಕ್ಕೆ ಪ್ರಾಣವೇ ಹೋಯ್ತು; ಏನಿದು ಅಸಲಿ ಕಥೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts