ಹೈದರಾಬಾದ್: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇಲೆ ಬಂಧನದಲ್ಲಿರುವ ಜಾನಿ ಮಾಸ್ಟರ್(Jani Master) ಅಲಿಯಾಸ್ ಶೇಕ್ ಜಾನಿ ಬಾಷಾ ಅವರಿಗೆ ಅಕ್ಟೋಬರ್ 6 ರಿಂದ ಅಕ್ಟೋಬರ್ 10ರವರೆಗೆ ಮಧ್ಯಂತರ ಜಾಮೀನು ನೀಡಲಾಗಿದೆ. ಅಕ್ಟೋಬರ್ 10ರಂದು ಬೆಳಗ್ಗೆ 10;30ಕ್ಕೆ ನ್ಯಾಯಾಲಯದಲ್ಲಿ ಹಾಜರಾಗುವಂತೆ ಜಾನಿ ಮಾಸ್ಟರ್ಗೆ ಸೂಚಿಸಲಾಗಿದೆ.
ಅಕ್ಟೋಬರ್ 8ರಂದ ನಡೆಯಲಿರುವ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲು ಜಾನಿ ಮಾಸ್ಟರ್ಗೆ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಲಾಗಿದೆ. ತಮಿಳು ಸಿನಿಮಾವೊಂದರಲ್ಲಿನ ಅವರ ಕೆಲಸಕ್ಕಾಗಿ ಅತ್ಯುತ್ತಮ ನೃತ್ಯ ಸಂಯೋಜನೆಗಾಗಿ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸುತ್ತಿದ್ದಾರೆ. ಆದರೆ ಈ ಕ್ರಮವನ್ನು ಗಾಯಕಿ ಚಿನ್ಮಯಿ ಶ್ರೀಪಾದ ಟೀಕಿಸಿದ್ದಾರೆ.
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವುದಾಗಿ ತಪ್ಪೊಪ್ಪಿಕೊಂಡ ವ್ಯಕ್ತಿಗೆ ರಾಷ್ಟ್ರ ಪ್ರಶಸ್ತಿಗಾಗಿ ಜಾಮೀನು ಸಿಗಬೇಕು. ಇದು ಭಾರತ ಎಂದು ಗಾಯಕಿ ಚಿನ್ಮಯಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಅಸಹನೆ ವ್ಯಕ್ತಪಡಿಸಿದ್ದಾರೆ.
ಜಾನಿ ಮಾಸ್ಟರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಜಾನಿ ಮಾಸ್ಟರ್ ತನ್ನ ಸಹಾಯಕಿ ನೃತ್ಯ ಸಂಯೋಜಕಿಯ ಮೇಲೆ ಹಲವಾರು ಬಾರಿ ಅತ್ಯಾಚಾರ ಮತ್ತು ಕಿರುಕುಳ ನೀಡಿದ್ದಾನೆ ಎಂಬ ದೂರು ಇದೆ.ಸಹಾಯಕ ನೃತ್ಯ ನಿರ್ದೇಶಕಿಯಾಗಿ ಕೆಲಸ ಮಾಡುತ್ತಿದ್ದಾಗ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಧ್ಯಪ್ರದೇಶದ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಪೊಲೀಸರು ಜಾನಿ ಮಾಸ್ಟರ್ ಅವರನ್ನು ಬಂಧಿಸಿದ್ದಾರೆ.
21 ವರ್ಷ ವಯಸ್ಸಿನ ಮಹಿಳೆಯ ಪ್ರಕಾರ, ಅವರು 2017ರಲ್ಲಿ ಕಾರ್ಯಕ್ರಮವೊಂದರಲ್ಲಿ ಜಾನಿ ಮಾಸ್ಟರ್ ಅವರನ್ನು ಭೇಟಿಯಾಗಿದ್ದಾಗಿ ತಿಳಿಸಿದ್ದಾರೆ. ಎರಡು ವರ್ಷಗಳ ನಂತರ ಅವರು ಆ ಮಹಿಳೆಗೆ ಸಹಾಯಕ ನೃತ್ಯ ಸಂಯೋಜಕರಾಗಿ ಕೆಲಸವನ್ನು ನೀಡಿದರು. ಅದನ್ನು ಅವರು ಒಪ್ಪಿಕೊಂಡು ಕೆಲಸಕ್ಕೆ ಸೇರಿಕೊಳ್ಳಲಾಯಿತು. ಮುಂಬೈ ಶೋವೊಂದರಲ್ಲಿ ಆಕೆ, ಜಾನಿ ಮಾಸ್ಟರ್ ಮತ್ತು ಇತರ ನೃತ್ಯಗಾರರು ತಂಗಿದ್ದ ಹೋಟೆಲ್‌ನಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ತಿಳಿಸಿದ್ದಾರೆ.
ದೂರು ನೀಡಿದರೆ ದೈಹಿಕ ಹಿಂಸೆ ನೀಡುವುದಾಗಿ ಬೆದರಿಕೆ ಹಾಕಿದ್ದಾರೆ. ಫೋಟೋಶೂಟ್ ಮತ್ತು ರಿಹರ್ಸಲ್ ಸಮಯದಲ್ಲಿ ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ದೂರಿನ ಪ್ರಕಾರ, ಆತತನ್ನ ಧರ್ಮಕ್ಕೆ ಮತಾಂತರಗೊಳ್ಳುವಂತೆ ಮತ್ತು ಮದುವೆಯಾಗುವಂತೆ ಒತ್ತಾಯಿಸಿದನು. 16 ವರ್ಷದ ಸಂತ್ರಸ್ತೆ ನಾಲ್ಕು ವರ್ಷಗಳ ಕಾಲ ಹಲವು ಬಾರಿ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದರು ಎಂದು ರಿಮಾಂಡ್ ವರದಿಯಲ್ಲಿ ಪೊಲೀಸರು ತಿಳಿಸಿದ್ದಾರೆ.
ಮಹಿಳಾ ಮಾಜಿ ಉದ್ಯೋಗಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧವನ್ನು ಜಾನಿ ಮಾಸ್ಟರ್ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸೆಪ್ಟೆಂಬರ್ 1 ರಂದು ಬೆಂಗಳೂರಿನಲ್ಲಿ ಜಾನಿ ಮಾಸ್ಟರ್ ಅವರನ್ನು ಬಂಧಿಸಿ ಹೈದರಾಬಾದ್‌ಗೆ ಸ್ಥಳಾಂತರಿಸಲಾಗಿತ್ತು ಎಂದು ಎನ್ಡಿಟಿವಿ ವರದಿ ಮಾಡಿದೆ.(ಏಜೆನ್ಸೀಸ್)
ಮದುವೆ ಬಳಿಕ ನಟನೆ ಮುಂದುವರಿಸಲು ಇಷ್ಟವಿರಲಿಲ್ಲ ಆದರೆ..; ಶರಣ್ಯಾ ಪೊನ್ವಣ್ಣನ್ ಹೇಳಿಕೆ ವೈರಲ್ | Saranya Ponvannan