ಸಂತ್ರಸ್ತೆ ಮೇಲೆ 16ನೇ ವಯಸ್ಸಿಗೇ..? ತಪ್ಪೊಪ್ಪಿಕೊಂಡ ಜಾನಿ ಮಾಸ್ಟರ್!

janimaster

ಹೈದರಾಬಾದ್​: ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆ ನಡೆದಿದೆ. ಆತನನ್ನು ಗೋವಾದಲ್ಲಿ ಬಂಧಿಸಿದ ಪೊಲೀಸರು ಶುಕ್ರವಾರ ಹೈದರಾಬಾದ್‌ನ ಉಪ್ಪರ್ ಪಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಇದನ್ನೂ ಓದಿ: ತಿರುಪತಿ ಲಡ್ಡು ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಬಳಕೆ: ವಿವಾದವನ್ನು ಕಪೋಲಕಲ್ಪಿತ ಕಥೆ ಎಂದ ಜಗನ್!

ಪೊಲೀಸರ ಮನವಿ ಮೇರೆಗೆ ನ್ಯಾಯಾಲಯ ಜಾನಿ ಮಾಸ್ಟರ್‌ಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದರೊಂದಿಗೆ ಜಾನಿಯನ್ನು ಚಂಚಲ್ ಗುಡಾ ಜೈಲಿಗೆ ಕಳೂಹಿಸಲಾಯಿತು. ಆತ ಅ.3 ರವರೆಗೆ ಬಂಧನದಲ್ಲಿರುತ್ತಾನೆ. ಆದರೆ, ನ್ಯಾಯಾಲಯಕ್ಕೆ ಹಾಜರುಪಡಿಸುವಾಗ ಜಾನಿ ವಿರುದ್ಧ ಪೊಲೀಸರು ಸಲ್ಲಿಸಿರುವ ರಿಮಾಂಡ್ ವರದಿಯಲ್ಲಿ ಪ್ರಮುಖ ವಿಚಾರಗಳು ಬೆಳಕಿಗೆ ಬಂದಿವೆ.

ಜಾನಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ರಿಮಾಂಡ್ ವರದಿಯಲ್ಲಿ ತಿಳಿಸಿದ್ದಾರೆ. ದೂರುದಾರಳಾದ ಸಹಾಯಕ ನೃತ್ಯ ನಿರ್ದೇಶಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

2019 ರಲ್ಲಿ ಜಾನಿ ಸಂತ್ರಸ್ತೆಯನ್ನು ಭೇಟಿಯಾಗಿದ್ದ. ಆಕೆಯೊಂದಿಗೆ ದೈಹಿಕ ಸಂಪರ್ಕ ಸಾಧಿಸಲೆಂದೇ ಸಹಾಯಕಿಯಾಗಿ ನೇಮಿಸಿಕೊಂಡಿದ್ದ. 2020 ರಲ್ಲಿ ಮುಂಬೈನ ಹೋಟೆಲ್‌ನಲ್ಲಿ ಜಾನಿ ಮೊದಲ ಬಾರಿಗೆ ಆಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಆಗ ಆಕೆಗೆ ಕೇವಲ 16 ವರ್ಷ ವಯಸ್ಸಾಗಿತ್ತು ಎಂದು ಪೊಲೀಸರು ವರದಿಯಲ್ಲಿ ತಿಳಿಸಿದ್ದಾರೆ.

ಅಂದಿನಿಂದ ಈ ನಾಲ್ಕು ವರ್ಷಗಳಲ್ಲಿ ಜಾನಿ ಸಂತ್ರಸ್ತೆಯ ಮೇಲೆ ಹಲವು ಬಾರಿ ಅತ್ಯಾಚಾರವೆಸಗಿದ್ದಾನೆ ಎಂದು ಹೇಳಲಾಗಿದೆ. ಆದರೆ, ಈ ವಿಷಯವನ್ನು ಬಹಿರಂಗ ಪಡಿಸಿದರೆ ಸಿನಿಮಾ ಅವಕಾಶಗಳನ್ನು ಕಿತ್ತುಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ಜಾನಿ ಜೊತೆಗೆ ಆತನ ಪತ್ನಿ ಆಯೇಷಾ ಕೂಡ ಸಂತ್ರಸ್ತೆಗೆ ಹಲವು ಬಾರಿ ಬೆದರಿಕೆ ಹಾಕಿದ್ದಾಳೆ ಎಂದು ಪೊಲೀಸರು ಉಲ್ಲೇಖಿಸಿಸಿದ್ದಾರೆ.

ಸೆ.15ರಂದು ಸಹಾಯಕ ನೃತ್ಯ ನಿರ್ದೇಶಕಿ ಜಾನಿ ಮಾಸ್ಟರ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ನರಸಿಂಗಿ ಪೊಲೀಸರಿಗೆ ದೂರು ನೀಡಿರುವುದು ತಿಳಿದ ಸಂಗತಿಯೇ.

IND vs BAN: ಮೊದಲ ಇನಿಂಗ್ಸ್​ನಲ್ಲಿ 149 ರನ್‌ಗೆ ಬಾಂಗ್ಲಾ ಸೀಮಿತ: ಭಾರತ 227 ರನ್‌ ಮುನ್ನಡೆ- ಬೂಮ್ರಾಗೆ ನಾಲ್ಕು ವಿಕೆಟ್

Share This Article

Bathing : ನೀರಿನಲ್ಲಿ ಇವುಗಳನ್ನು ಬೆರೆಸಿ ಸ್ನಾನ ಮಾಡಿದ್ರೆ ಸಾಕು ಅದೃಷ್ಟ ಖುಲಾಯಿಸುತ್ತದೆ…

ಬೆಂಗಳೂರು: ಪ್ರತಿದಿನ ಸ್ನಾನ ( Bathing ) ಮಾಡುವ ಅಭ್ಯಾಸವನ್ನು ಸಾಮಾನ್ಯವಾಗಿ ಎಲ್ಲರೂ ರೂಢಿಸಿಕೊಂಡಿರುತ್ತಾರೆ. ನೀವು…

ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…

ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach )  ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…

Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..

ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan)​ ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…