More

    ಜನಕಲ್ಯಾಣ ಯೋಜನೆಗಳು ಆರ್ಹರಿಗೆ ತಲುಪಲಿ

    ಹೂವಿನಹಡಗಲಿ: ಸರ್ಕಾರದ ಜನಕಲ್ಯಾಣ ಯೋಜನೆಗಳು ಜನರಿಗೆ ತಲುಪಲಿ ಎಂದು ಸರ್ಕಾರಿ ಸಹಾಯಕ ಅಭಿಯೋಜಕ ಕೆ.ಅಜ್ಜಯ್ಯ ಹೇಳಿದರು.

    ಇದನ್ನೂ ಓದಿ: ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆ ಶೀಘ್ರ ಜಾರಿ ನಿರೀಕ್ಷೆ

    ಪಟ್ಟಣದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯಲ್ಲಿ ತಾಲೂಕು ಆಡಳಿತ, ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದ ಸಹಯೋಗದಲ್ಲಿ ಅಪೌಷ್ಟಿಕತೆ ನಿರ್ಮೂಲನೆ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

    ಮಕ್ಕಳು ಮತ್ತು ಮಹಿಳೆಯರ ಅಪೌಷ್ಟಕತೆ ಹೋಗಲಾಡಿಸಿ, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಅಂಗನವಾಡಿ ಕಾರ್ಯಕರ್ತೆಯರು ಶ್ರಮಿಸಬೇಕು ಅಪೌಷ್ಟಿಕತೆ ನಿರ್ಮೂಲನೆಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಲವು ಯೋಜನೆಗಳನ್ನು ರೂಪಿಸಿದೆ.

    ಅರ್ಹ ಫಲಾನುಭವಿಗಳಿಗೆ ಪೌಷ್ಟಿಕ ಅಹಾರ ನೀಡಿ ಅಪೌಷ್ಟಿಕತೆಯನ್ನು ದೂರಮಾಡಿ. ಪ್ರಸ್ತುತ ದಿನಗಳಲ್ಲಿ ಅಪೌಷ್ಟಿಕತೆ ನಿರ್ಮೂಲನೆ ದೊಡ್ಡ ಸವಲಾಗಿದೆ. ಸರ್ಕಾರದ ಜನಕಲ್ಯಾಣ ಯೋಜನೆಗಳು ಫಲಾನುಭವಿಗಳಿಗೆ ತಲುಪಲಿ.

    ಈ ಕುರಿತಾದ ಕಾನೂನುಗಳನ್ನು ಅರಿತು, ಸೌಲಭ್ಯ ಪಡೆದುಕೊಳ್ಳಬೇಕು ಎಂದರು. ನಿವೃತ್ತ ಸರ್ಕಾರಿ ಸಹಾಯಕ ಅಭಿಯೋಜಕ ಕಾಳಿಂಗರಾವ್, ವಕೀಲರ ಸಂಘದ ಅಧ್ಯಕ್ಷ ವಸಂತಕುಮಾರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವಿನಾಶ ಗೋಟ್ಕಿಂಡಿ, ಎಸ್.ಬಸವರಾಜ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts