ನೇಣು ಬಿಗಿದ ಸ್ಥಿತಿಯಲ್ಲಿ ಜನಪದ ಪಂಚಾಯತ್ ಅಧ್ಯಕ್ಷೆ ಶವ ಪತ್ತೆ!

Untitled design - 2023-10-01T171610.736
Published on

ಮಧ್ಯಪ್ರದೇಶ: ಜನಪದ ಪಂಚಾಯತ್ ಅಧ್ಯಕ್ಷೆ ಪೂಜಾ ದಾದು ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ಭಾನುವಾರ (ಅ.1) ತಿಳಿಸಿದ್ದಾರೆ. ಈ ಘಟನೆ ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯಲ್ಲಿ ವರದಿಯಾಗಿದೆ.

ಬುರ್ಹಾನ್‌ಪುರದ ತಮ್ಮ ನಿವಾಸದಲ್ಲಿ ಪೂಜಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಶವವನ್ನು ಆಸ್ಪತ್ರೆಗೆ ಸಾಗಿಸಿದ ಪೊಲೀಸರಿಗೆ, ವೈದ್ಯರು ಆಕೆ ಸಾವನ್ನಪ್ಪಿರುವ ಸಂಗತಿಯನ್ನು ದೃಢಪಡಿಸಿದ್ದಾರೆ. ಖಕ್ನಾರ್​ನ ಜನಪದ ಪಂಚಾಯತ್ ಅಧ್ಯಕ್ಷೆ ಮಾಜಿ ಬಿಜೆಪಿ ಶಾಸಕ (ನೇಪಾನಗರದಿಂದ) ದಿವಂಗತ ರಾಜೇಂದ್ರ ದಾದು ಅವರ ಮಗಳು ಎಂದು ಹೇಳಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸದ್ಯ ತನಿಖೆ ಆರಂಭಿಸಿದ್ದಾರೆ.

ಪ್ರಾಥಮಿಕ ತನಿಖೆಯಿಂದ ಇದು ಆತ್ಮಹತ್ಯೆ ಎಂದು ತಿಳಿದುಬಂದಿದೆ ಎಂದು ಹಿರಿಯ​ ಅಧಿಕಾರಿ ದೇವೇಂದ್ರ ಪಾಟಿದಾರ್ ಹೇಳಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ಆಕೆಯ ನಿರ್ಧಾರದ ಹಿಂದಿನ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮನೋಜ್ ಲಾಧ್ವೆ ಹೇಳಿದ್ದಾರೆ.

ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಆಕೆಯ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಲೋಕಸಭೆ ಸದಸ್ಯ ಜ್ಞಾನೇಶ್ವರ್ ಪಾಟೀಲ್ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಿ, ಸಾಂತ್ವನ ತಿಳಿಸಿದ್ದಾರೆ,(ಏಜೆನ್ಸೀಸ್). 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net