More

    ಜಪಾನ್​ ಮಾಜಿ ಪ್ರಧಾನಿ ಶಿಂಜೋ ಅಬೆ ಮೇಲಿನ ಗುಂಡಿನ ದಾಳಿಗೆ ತೀವ್ರ ಖಂಡನೆ: ಸ್ನೇಹಿತನ ಕುರಿತು ಪ್ರಧಾನಿ ಮೋದಿ ಟ್ವೀಟ್​​

    ನವದೆಹಲಿ: ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಮೇಲಿನ ಗುಂಡಿನ ದಾಳಿಯನ್ನು ಖಂಡಿಸಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ನೇಹಿತನ ಈ ಸ್ಥಿತಿಗೆ ತೀವ್ರ ನೋವಾಗಿದೆ ಎಂದು ಹೇಳಿದ್ದಾರೆ.

    ಶಿಂಜೋ ಅಧಿಕಾರವಧಿಯಲ್ಲಿ ಭಾರತದ ಜತೆ ಉತ್ತಮ ಬಾಂಧವ್ಯ ಹೊಂದಿದ್ದಲ್ಲದೇ, ಪ್ರಧಾನಿ ಮೋದಿ ಅವರ ಆತ್ಮೀಯ ಸ್ನೇಹಿತರೂ ಆಗಿದ್ದಾರೆ. ಸದ್ಯ ಗಂಭೀರ ಸ್ಥಿತಿಯಲ್ಲಿರುವ ಶಿಂಜೋ ಅವರ ಸ್ಥಿತಿಯ ಬಗ್ಗೆ ಮರುಗಿದ್ದಾರೆ.

    ಈ ಕುರಿತು ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, ನನ್ನ ಆತ್ಮೀಯ ಸ್ನೇಹಿತ ಶಿಂಜೋ ಅಬೆ ಮೇಲಿನ ದಾಳಿಯಿಂದ ತೀವ್ರವಾಗಿ ನೊಂದಿದ್ದೇನೆ. ದೇವರು ಅವರ ಆರೋಗ್ಯ ಚೇತರಿಸಿಕೊಳ್ಳುವಂತೆ ಮಾಡಲಿ, ನೀವು ಚೇತರಿಸಿಕೊಳ್ಳಿ ಎಂದು ಪ್ರಾರ್ಥಿಸುತ್ತೇವೆ. ನಿಮಮ ಕುಟುಂಬ ಹಾಗೂ ಜಪಾನ್​ ಜನತೆಯೂ ನಿಮ್ಮ ಜತೆಗಿದೆ ಎಂದು ಬರೆದಿದ್ದಾರೆ.

    ಪಶ್ಚಿಮ ಭಾಗದ ನಗರ ನಾರಾದ ರೈಲು ನಿಲ್ದಾಣ ಸಮೀಪ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ 67 ವರ್ಷದ ಶಿಂಜೋ ಅಬೆ ಶುಕ್ರವಾರ ಬೆಳಗ್ಗೆ ಭಾಷಣ ಮಾಡುತ್ತಿದ್ದರು. ಈ ವೇಳೆ ಅವರ ಮೇಲೆ ಗುಂಡಿನ ದಾಳಿ ನಡೆದಿದೆ.

    1982ರಲ್ಲಿ ಲಿಬರಲ್ ಡೆಮಾಕ್ರಟಿಕ್ ಪಾರ್ಟಿ ಸೇರಿದ ಶಿಂಜೋ ಅಬೆ, ವಿದೇಶಾಂಗ ಇಲಾಖೆಯಲ್ಲೂ ಕೆಲಸ ಮಾಡಿದ್ದಾರೆ. 2006ರ ಜುಲೈನಲ್ಲಿ ಪ್ರಧಾನಿ ಹುದ್ದೆ ಅಲಂಕರಿಸಿದ್ದರು. 52ನೇ ವಯಸ್ಸಿನಲ್ಲಿ ಪ್ರಧಾನಿ ಹುದ್ದೆಗೇರಿದ ಅಬೆ, ಆ ಮೂಲಕ ಅತಿ ಕಿರಿಯ ಪ್ರಧಾನ ಮಂತ್ರಿ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದ್ದರು. ಪ್ರಧಾನ ಮಂತ್ರಿಯಾಗಿ ಎರಡು ಅವಧಿಯನ್ನೂ ಪೂರ್ಣಗೊಳಿಸಿ, ಅನಾರೋಗ್ಯದ ಕಾರಣಕ್ಕಾಗಿ 2020ರಲ್ಲಿ ಪ್ರದಾನಿ ಸ್ಥಾನದಿಂದ ಕೆಳಗಿಳಿದಿದ್ದರು. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts